ETV Bharat / state

ಕೈಗಾರಿಕೆ ಇಲಾಖೆಯ ನೇಮಕಾತಿಯಲ್ಲಿ ಅಕ್ರಮ ಆರೋಪ: ಮುರುಗೇಶ್ ನಿರಾಣಿ ವಿಚಾರಣೆಗೆ ಅಸ್ತು, ಬಂಧಿಸದಂತೆ ಆದೇಶ - Murugesh Nirani - MURUGESH NIRANI

ಕೈಗಾರಿಕೆ ಇಲಾಖೆಯ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ ನೇಮಕಾತಿ ಅಕ್ರಮ ಆರೋಪ ಸಂಬಂಧ ಮುರುಗೇಶ್ ನಿರಾಣಿ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

ಮುರಗೇಶ್ ನಿರಾಣಿ ವಿರುದ್ಧದ ಪ್ರಕರಣ ವಿಚಾರಣೆಗೆ ಹೈಕೋರ್ಟ್ ಅಸ್ತು
ಮುರಗೇಶ್ ನಿರಾಣಿ ವಿರುದ್ಧದ ಪ್ರಕರಣ ವಿಚಾರಣೆಗೆ ಹೈಕೋರ್ಟ್ ಅಸ್ತು (ETV Bharat)
author img

By ETV Bharat Karnataka Team

Published : Jul 6, 2024, 7:59 AM IST

Updated : Jul 6, 2024, 9:08 AM IST

ಬೆಂಗಳೂರು: ರಾಜ್ಯ ಕೈಗಾರಿಕೆ ಇಲಾಖೆಯ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರಲ್ಲಿ ನಡೆದ ನೇಮಕಾತಿಯಲ್ಲಿನ ಅಕ್ರಮ ಆರೋಪ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಬಂಧಿಸದೆ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರಿನ ಕುರಿತು ತನಿಖೆ ನಡೆಸುವಂತೆ ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರು ನಿರ್ದೇಶಿಸಿ 42ನೇ ಎಸಿಎಂಎಂ ನ್ಯಾಯಾಲಯವು ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ನೀಡಿದೆ.

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಬಹುದು. ಆದರೆ, ತನಿಖೆಗೆ ಸಹಕರಿಸಿದರೆ, ಅರ್ಜಿದಾರರು ತನಿಖಾಧಿಕಾರಿಗಳು ಬಂಧಿಸುವಂತಿಲ್ಲ ಎಂದು ನಿರ್ದೇಶಿಸಿ ನ್ಯಾಯಪೀಠವು ಮಧ್ಯಂತರ ಆದೇಶ ಮಾಡಿತು.
ಜೊತೆಗೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಪ್ರಕರಣದ ಮೂಲ ದೂರುದಾರ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಮತ್ತು ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ 2011ರಲ್ಲಿ ಮರುಗೇಶ್ ನಿರಾಣಿ ಅವರು ರಾಜ್ಯದ ಬೃಹತ್ ಕೈಗಾರಿಕೆ ಸಚಿವರಾಗಿದ್ದರು. ಈ ವೇಳೆ ಕೈಗಾರಿಕೆ ಇಲಾಖೆಯ ಮಾರ್ಕೆಂಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ನೇಮಕಾತಿ ಮತ್ತು ಸೇವಾ ಖಾಯಮಾತಿ ಪ್ರಕ್ರಿಯೆ 2011ರಿಂದ 15ರವರೆಗೆ ನಡೆದಿದೆ. ಸಚಿವರಾಗಿದ್ದ ಮುರುಗೇಶ್ ನಿರಾಣಿ ಅವರು ಈ ನೇಮಕಾತಿಗೆ ಅಕ್ರಮವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಹತ್ತು ವರ್ಷಗಳ ನಂತರ ಖಾಸಗಿ ದೂರುದಾರರು ವಿಚಾರಣಾ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದಾರೆ. ಅದನ್ನು ಪರಿಗಣಿಸಿದ ನ್ಯಾಯಾಲಯವು ತನಿಖೆ ನಡೆಸಲು ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ನಿರ್ದೇಶಿಸಿದೆ. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿವರಿಸಿದರು.

ಪ್ರಕರಣದಲ್ಲಿ ನೇಮಕಾತಿ ನಡೆಸಲು ನಿರಾಣಿ ಅವರು ಅಕ್ರಮವಾಗಿ ಅನುಮತಿ ನೀಡಿಲ್ಲ. ಹೀಗಿದ್ದರೂ ದುರದ್ದೇಶಪೂರ್ವಕವಾಗಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದ ಸತ್ಯಾಂಶಗಳನ್ನು ಪರಿಗಣಿಸದೆ ವಿಚಾರಣಾ ನ್ಯಾಯಾಲಯವು ತನಿಖೆಗೆ ಆದೇಶಿಸಿದೆ. ಈ ಕ್ರಮವು ಕಾನೂನುಬಾಹಿರವಾಗಿದ್ದು, ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿದರು.

ಇದನ್ನೂ ಓದಿ: ಬಾಡಿಗೆ ತಾಯಂದಿರಿಗೂ ಹೆರಿಗೆ ರಜೆ ಪಡೆಯುವ ಹಕ್ಕಿದೆ: ಹೈಕೋರ್ಟ್ - maternity leave

Last Updated : Jul 6, 2024, 9:08 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.