ETV Bharat / state

ಬೆಂ.ಗ್ರಾಮಾಂತರ ಕ್ಷೇತ್ರದ ಮೇಲೆ ತೀವ್ರ ನಿಗಾ, ಹೆಚ್ಚುವರಿ ಅರೆಸೇನಾ ಪಡೆ ನಿಯೋಜನೆ: ಚುನಾವಣಾಧಿಕಾರಿ - Bengaluru Rural Constituency - BENGALURU RURAL CONSTITUENCY

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಲ್ಲಾ 2,829 ಮತಗಟ್ಟೆಗಳಲ್ಲಿ ವೆಬ್​ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

intensive-monitoring-of-bengaluru-rural-constituency-says-manoj-kumar-meena
ಬೆ.ಗ್ರಾಮಾಂತರ ಕ್ಷೇತ್ರದ ಮೇಲೆ ತೀವ್ರ ನಿಗಾ, ಹೆಚ್ಚುವರಿ ಅರೆಸೇನಾ ಪಡೆ ನಿಯೋಜನೆ: ಮನೋಜ್ ಕುಮಾರ್ ಮೀನಾ
author img

By ETV Bharat Karnataka Team

Published : Apr 24, 2024, 3:27 PM IST

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಹೆಚ್ಚುವರಿ ಸಿಆರ್​ಪಿಎಫ್ ಪಡೆ ನಿಯೋಜಿಸಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕ್ಷೇತ್ರದ ಎಲ್ಲಾ 2,829 ಮತಗಟ್ಟೆಗಳಲ್ಲಿ ವೆಬ್​ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುವುದು. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಆರ್​ಪಿಎಫ್ ಸಿಬ್ಬಂದಿ ನಿಯೋಜಿಸಲಾಗುತ್ತದೆ. ಒಟ್ಟು 7 ಪ್ಯಾರಾಮಿಲಿಟರಿ ಪಡೆ ಕರ್ತವ್ಯದಲ್ಲಿ ಇರಲಿದ್ದಾರೆ. ಅಭ್ಯರ್ಥಿ ಸಲ್ಲಿಸಿದ ಪಿಆರ್​ ಲಿಸ್ಟ್, ಸ್ಥಳೀಯ ಚುನಾವಣಾಧಿಕಾರಿಗಳ ವರದಿ ಆಧಾರದಲ್ಲಿ ನಾವೇ ಪರಾಮರ್ಶಿಸಿ, ಹೆಚ್ಚುವರಿ ಭದ್ರತೆ ಮಾಡುತ್ತಿದ್ದೇವೆ. ಮೈಸೂರು-ಕೊಡಗು ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್​ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿವರ ನೀಡಿದರು.

23 ದ್ವೇಷ ಭಾಷಣ ಪ್ರಕರಣ ದಾಖಲು: ಈವರೆಗೆ ವಿವಿಧ ಪಕ್ಷಗಳ ವಿರುದ್ದ ಒಟ್ಟು 23 ದ್ವೇಷ ಭಾಷಣದ ಪ್ರಕರಣಗಳನ್ನು ದಾಖಲಿಸಲಾಗಿದೆ. ಬಿಜೆಪಿ ವಿರುದ್ಧ 12 , ಕಾಂಗ್ರೆಸ್ ವಿರುದ್ಧ 9 ಹಾಗೂ ಜೆಡಿಎಸ್ ವಿರುದ್ದ 2 ಪ್ರಕರಣಗಳು ದಾಖಲಾಗಿವೆ. ಪ್ರಚಾರದಲ್ಲಿ ಮಕ್ಕಳ ಬಳಕೆ ಪ್ರಕರಣದಲ್ಲಿ ತಲಾ 7 ಕೇಸ್ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ದಾಖಲಾಗಿದೆ.‌ ಧಾರ್ಮಿಕ ಸ್ಥಳಗಳ ಬಳಕೆ ಸಂಬಂಧ 8 ಬಿಜೆಪಿ, 6 ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ 1 ಪ್ರಕರಣ ದಾಖಲಾಗಿದೆ. ಒಟ್ಟು 189 ಗಂಭೀರ ಸ್ವರೂಪದ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹಾಸನ ಪೆನ್​ಡ್ರೈವ್​ ಪ್ರಕರಣ ಸಂಬಂಧ ಕ್ರಮಕ್ಕೆ ಸೂಚನೆ: ಹಾಸನದಲ್ಲಿ ಪೆನ್​ಡ್ರೈವ್ ದೊರೆತ ವಿಚಾರವಾಗಿ ಪ್ರತಿಕ್ರಿಯಿಸಿ, ಪೆನ್​ಡ್ರೈವ್ ಯಾರು ಬಿಸಾಕಿದ್ದಾರೆ ಎಂಬ ಮಾಹಿತಿ ಇಲ್ಲ. ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳುತ್ತಾರೆ. ಖಾಸಗಿ ದೂರಿನ ಮೇರೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದರು.

ಮತಗಟ್ಟೆಗಳಲ್ಲಿ ವಿಶೇಷ ವೈದ್ಯಕೀಯ ಕಿಟ್: ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ವಿಶೇಷ ವೈದ್ಯಕೀಯ ಕಿಟ್ ವ್ಯವಸ್ಥೆ ಮಾಡಲಾಗಿದೆ. ನಿರ್ಜಲೀಕರಣ ಹಾಗೂ ಸನ್ ಸ್ಟ್ರೋಕ್ ಸಂಬಂಧ ವೈದ್ಯಕೀಯ ಕಿಟ್ ವ್ಯವಸ್ಥೆಯನ್ನು ಮಾಡಲಾಗುವುದು. ಒಂಬತ್ತು ಕ್ಲಸ್ಟರ್ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ: ಮುಖ್ಯ ಚುನಾವಣಾಧಿಕಾರಿ‌ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ - Pressmeet

ETV Bharat Logo

Copyright © 2025 Ushodaya Enterprises Pvt. Ltd., All Rights Reserved.