ETV Bharat / state

ನಿಯಮ‌ ಮೀರಿ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಮಾಡುವಂತಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ - G Parameshwar - G PARAMESHWAR

''ನಿಯಮ‌ ಮೀರಿ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಮಾಡುವಂತಿಲ್ಲ'' ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

OME MINISTER G PARAMESHWAR  INTER DISTRICT TRANSFER  BENGALURU
ಡಾ.ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Jun 12, 2024, 1:18 PM IST

ಬೆಂಗಳೂರು: ''ಪೊಲೀಸರ ಅಂತರ್​ ಜಿಲ್ಲಾ ವರ್ಗಾವಣೆಯನ್ನು ನಿಯಮ ಮೀರಿ ಮಾಡುವಂತಿಲ್ಲ'' ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು (ಬುಧವಾರ) ಮಾತನಾಡಿದ ಅವರು, ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಪೋರ್ಟಲ್ ಅರ್ಜಿ ಪ್ರಕಾರ ಆಗುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ''ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಶಿಸ್ತು ಬದ್ಧವಾಗಿ ನಿಯಮದ ಚೌಕಟ್ಟಿನಲ್ಲಿ ನಡೆಯಬೇಕಾಗುತ್ತದೆ. ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಮಾಡಿದ್ದಾರೆ. ಅದನ್ನು ಮೀರಿ ವರ್ಗಾವಣೆ ಮಾಡಲು ಬರುವುದಿಲ್ಲ. ಅಕಸ್ಮಾತ್ ಮಾಡಬೇಕಾದರೆ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ'' ಎಂದರು.

ನಿಯಮ ಉಲ್ಲಂಘಿಸಿ ವರ್ಗಾವಣೆ ಮಾಡುವುದಕ್ಕೆ ಅವಕಾಶವಿಲ್ಲ: ''ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಒಂದು ವರ್ಷದ ನಿಯಮವಿತ್ತು. ಸದನದಲ್ಲಿ ಕಾನೂನು ಬದಲಾಯಿಸಿ ಎರಡು ವರ್ಷ ಮಾಡಲಾಗಿದೆ. ಈ ರೀತಿ ಕಾನೂನು ಬದಲಾವಣೆ ಮಾಡಬಹುದು. ಇರುವಂತಹ ನಿಯಮ ಉಲ್ಲಂಘಿಸಿ, ವರ್ಗಾವಣೆ ಮಾಡುವುದಕ್ಕೆ ಅವಕಾಶವಿಲ್ಲ. ಡಿಜಿ ಅವರಾಗಲಿ, ನಾನು ಅಥವಾ ಮತ್ತೊಬ್ಬರು ಇರಬಹುದು. ಕಾನೂನು ನಿಯಮದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ'' ಎಂದು ಸಚಿವರು ತಿಳಿಸಿದರು.

''ವರ್ಗಾವಣೆಗೆ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವುದಕ್ಕೆ ಏನಾದರು ಸಣ್ಣಪುಟ್ಟ ತೊಂದರೆಗಳು ಸಿಬ್ಬಂದಿಗೆ ಆಗಿದ್ದರೆ ಸರಿಪಡಿಸುವುದಕ್ಕೆ ಸೂಚನೆ ನೀಡುತ್ತೇನೆ. ಅವರಿಗೂ ಕುಟುಂಬಗಳಿದ್ದು, ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕಾಗುತ್ತದೆ'' ಎಂದು ಪ್ರಶ್ನೆಯೊಂದಕ್ಕೆ ಗೃಹ ಸಚಿವರು ಉತ್ತರಿಸಿದರು.

545 ಪಿಎಸ್​ಐ ಹುದ್ದೆ ಸಮಸ್ಯೆ ಪರಿಹಾರಕ್ಕೆ ಕ್ರಮ: ''545 ಪಿಎಸ್ಐ ಹುದ್ದೆಗಳ ನೇಮಕಾತಿ ಕುರಿತು, ಎಲ್ಲರೂ ಕೋರ್ಟ್‌ಗಳಿಗೆ ಹೋಗಿ ಆದೇಶಗಳನ್ನು ತಂದಾಗ, ನಮ್ಮ ಕೈಕಟ್ಟಿ ಹಾಕಿದಂತಾಗುತ್ತದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿ ಆದೇಶಗಳನ್ನು ಕೊಡಬೇಕು ಎಂಬ ಉದ್ದೇಶದಿಂದ ಪರೀಕ್ಷೆಯನ್ನು‌ ಪೂರ್ಣಗೊಳಿಸಿದ್ದೇವೆ. ಈ ಹಂತದಲ್ಲಿಯೇ ಯಾರೋ ಕೋರ್ಟ್‌ಗೆ ಹೋಗುತ್ತಾರೆ. ಇದನ್ನು ಮುಗಿಸಿದರೆ ಮುಂದಿನ ನೇಮಕಾತಿಗಳಿಗೆ ಅನುಕೂಲವಾಗುತ್ತದೆ. 545 ಹುದ್ದೆಗಳ ನೇಮಕಾತಿಯನ್ನು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ'' ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: 'ಕಾನೂನು ಪರಮೇಶ್ವರ್​ಗೂ, ದರ್ಶನ್​ಗೂ ಒಂದೇ': ಗೃಹ ಸಚಿವ - Parameshwar on Darshan case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.