ETV Bharat / state

ಆಗಸ್ಟ್ 12ರಂದು ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ - Human Elephant Conflict - HUMAN ELEPHANT CONFLICT

ಮಾನವ-ಆನೆ ಸಂಘರ್ಷ ಕುರಿತಂತೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಆಗಸ್ಟ್​ 12ರಂದು ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

Minister Eshwar Khandre
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (ETV Bharat)
author img

By ETV Bharat Karnataka Team

Published : Aug 5, 2024, 4:58 PM IST

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮಾಹಿತಿ (ETV Bharat)

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಆಗಸ್ಟ್ 12ರ ವಿಶ್ವ ಆನೆ ದಿನದಂದು ಮಾನವ-ಆನೆ ಸಂಘರ್ಷ ಕುರಿತಂತೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ) ಆವರಣದಲ್ಲಿ ಆಗಸ್ಟ್ 12ರಂದು ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ದಿನದ ಸಮ್ಮೇಳನದಲ್ಲಿ ಅಮೆರಿಕ, ಜರ್ಮನಿ, ಜಪಾನ್, ಯುಕೆ ಸೇರಿದಂತೆ 11 ರಾಷ್ಟ್ರಗಳ ಸುಮಾರು 17ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ಭಾರತದ ವಿವಿಧ ರಾಜ್ಯಗಳ 660 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಆನೆಗಳು ಮತ್ತು ಇತರ ವನ್ಯಜೀವಿಗಳು ನಾಡಿಗೆ ಬಾರದಂತೆ ಬೇರೆ ಬೇರೆ ರಾಜ್ಯಗಳಲ್ಲಿ, ವಿದೇಶಗಳಲ್ಲಿ ಯಾವ ತಂತ್ರಗಾರಿಕೆ, ಪದ್ಧತಿ ಅನುಸರಿಸಲಾಗುತ್ತಿದೆ, ಯಾವ ಕಾರ್ಯತಂತ್ರ ಅಳವಡಿಸಿಕೊಳ್ಳಲಾಗಿದೆ ಎಂಬುದರ ಬಗ್ಗೆ ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಚಿಂತನ ಮಂಥನ ನಡೆಯಲಿದ್ದು, ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳಲು ಈ ಸಮ್ಮೇಳನ ಸಹಕಾರಿ ಎಂದು ಅವರು ಹೇಳಿದರು.

ಸಮ್ಮೇಳನದ ಉದ್ದೇಶವೇನು?: ಕರ್ನಾಟಕ ಸರ್ಕಾರ ಕಳ್ಳಬೇಟೆ ನಿಗ್ರಹಕ್ಕೆ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವನ್ಯಮೃಗಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ರಾಜ್ಯದಲ್ಲಿ 6,395 ಆನೆಗಳಿದ್ದು, ರಾಜ್ಯ ದೇಶದಲ್ಲೇ ಗಜ ಸಂಖ್ಯೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ 563 ಹುಲಿ ಹೊಂದಿರುವ ಕರ್ನಾಟಕ ವ್ಯಾಘ್ರಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಇದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಆಗದ ಹಿನ್ನೆಲೆಯಲ್ಲಿ ಆನೆಗಳು ನಾಡಿಗೆ ಬರುತ್ತಿದ್ದು, ಬೆಳೆ ಹಾನಿ, ಜೀವಹಾನಿ ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಆನೆ ಮತ್ತು ಮಾನವ ಸಂಘರ್ಷ ತಗ್ಗಿಸಲು ಈ ಸಮ್ಮೇಳನ ಬೆಳಕು ಚೆಲ್ಲಲಿ ಎಂಬ ಉದ್ದೇಶದಿಂದ ಸಮ್ಮೇಳನ ಆಯೋಜಿಸಲಾಗಿದೆ.

ದೇಶದಲ್ಲಿ ಆನೆಗಳಿಂದ ಅತಿ ಹೆಚ್ಚು ಸಾವು ಒಡಿಶಾದಲ್ಲಿ ಸಂಭವಿಸುತ್ತದೆ. 2023-24ರಲ್ಲಿ 149 ಜನರು ಒಡಿಶಾದಲ್ಲಿ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಇಲಾಖೆ ಕೈಗೊಂಡಿರುವ ಕ್ರಮಗಳಿಂದ ಹೆಚ್ಚಿನ ಆನೆ ದಾಳಿ ಆಗದಂತೆ ನಿಯಂತ್ರಿಸಲಾಗುತ್ತಿದೆ. ಆದಾಗ್ಯೂ ಪ್ರತಿಯೊಂದು ಜೀವವೂ ಅಮೂಲ್ಯ. ಈ ನಿಟ್ಟಿನಲ್ಲಿ ಈ ಸಮ್ಮೇಳನದಲ್ಲಿ ಚಿಂತನ ಮಂಥನ ನಡೆಯಲಿದ್ದು, ಅತ್ಯುತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 30 ಜನರು ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿದ್ದಾರೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 25 ಜನರು ಆನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಜನವರಿಯಲ್ಲಿ 3, ಫೆಬ್ರವರಿಯಲ್ಲಿ 4, ಮಾರ್ಚ್​ನಲ್ಲಿ 7, ಏಪ್ರಿಲ್​ನಲ್ಲಿ 7, ಮೇ ತಿಂಗಳಲ್ಲಿ 1, (ಜೂನ್ ನಲ್ಲಿ 0), ಜುಲೈನಲ್ಲಿ 03 ಜನರು ಆನೆಯ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಜನರ ಜೀವವೂ ಅಮೂಲ್ಯ. ಅದೇ ರೀತಿ ವನ್ಯ ಜೀವಿಗಳ ಪ್ರಾಣವೂ ಅಮೂಲ್ಯ. ಆನೆಗಳು ಸೇರಿದಂತೆ ಕಾಡು ಪ್ರಾಣಿಗಳು ನಾಡಿಗೆ ಬಾರದಂತೆ ಮಾಡಬೇಕಾದರೆ ನಾವು ಮೊದಲಿಗೆ ವನ್ಯ ಜೀವಿಗಳ ಆವಾಸಸ್ಥಾನವನ್ನು ಸಂರಕ್ಷಿಸಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ದೇಶದಲ್ಲಿ 2009ರಿಂದ 2023ರ ನಡುವೆ ಒಟ್ಟಾರೆ ಸುಮಾರು 1381 ಆನೆಗಳು ಅಸಹಜ ಸಾವು ಕಂಡಿವೆ. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 283 ಆನೆಗಳು ಮೃತಪಟ್ಟಿವೆ. ಈ ಪೈಕಿ ವಿದ್ಯುತ್ ಸ್ಪರ್ಶದಿಂದ 30ಕ್ಕೂ ಹೆಚ್ಚು ಆನೆಗಳು ಸಾವಿಗೀಡಾಗಿದ್ದರೆ, 6 ಆನೆಗಳ ಬೇಟೆ ಆಗಿದೆ. ರಾಜ್ಯದಲ್ಲಿ 2021-22ರಲ್ಲಿ 82, 2022-23ರಲ್ಲಿ 72, 2023-24ರಲ್ಲಿ 97, 2024-25ರಲ್ಲಿ ಇಲ್ಲಿಯವರೆಗೆ 36 ಆನೆಗಳು ಸಾವಿಗೀಡಾಗಿವೆ. ಕಳೆದ ಜನವರಿಯಿಂದೀಚೆಗೆ 36 ಆನೆಗಳು ಮೃತಪಟ್ಟಿವೆ. ಜನವರಿಯಲ್ಲಿ 2, ಫೆಬ್ರವರಿಯಲ್ಲಿ 6, ಮಾರ್ಚ್​ನಲ್ಲಿ 7, ಏಪ್ರಿಲ್​ನಲ್ಲಿ 5, ಮೇ ತಿಂಗಳಲ್ಲಿ 13, ಜೂನ್​ನಲ್ಲಿ 2 ಮತ್ತು ಜುಲೈನಲ್ಲಿ 01 ಆನೆಗಳು ಮೃತಪಟ್ಟಿವೆ. ಈ ಪೈಕಿ ಅಸಹಜ ಸಾವಿನ ಸಂಖ್ಯೆ 5 ಎಂದು ವಿವರಿಸಿದರು.

ಆನೆಗಳ ರಕ್ಷಣೆ ಮತ್ತು ಆನೆಗಳಿಂದ ಜೀವಹಾನಿ ಮತ್ತು ಬೆಳೆ ಹಾನಿ ತಪ್ಪಿಸಲು ಆನೆ ಕಂದಕ ನಿರ್ಮಾಣ, ಟೆಂಟಕಲ್ ಫೆನ್ಸಿಂಗ್ ಅಂದರೆ ತೂಗಾಡುವ ಸೌರ ವಿದ್ಯುತ್ ತಂತಿಗಳು, ಸೌರ ಬೇಲಿ ಅಳವಡಿಕೆಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈವರೆಗೆ 332.62 ಕಿ. ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದರೆ, 3,426 ಕಿ.ಮೀ ಸೌರ ಬೇಲಿ ಅಳವಡಿಸಲಾಗಿದೆ. 2,420 ಕಿ.ಮೀ ಆನೆ ನಿಗ್ರಹ ಕಂದಕ -ಇಟಿಪಿ (ಎಲಿಫೆಂಟ್ ಫ್ರೂಫ್ ಟ್ರಂಚಸ್) ನಿರ್ಮಾಣ ಮಾಡಲಾಗಿದೆ ಎಂದು ವಿವರ ನೀಡಿದರು.

ಆನೆ ಕಾರ್ಯಪಡೆ: ಆನೆಗಳು ನಾಡಿಗೆ ಬಂದಾಗ ಅವುಗಳನ್ನು ಮರಳಿ ಕಾಡಿಗೆ ಕಳುಹಿಸಲು ರಾಪಿಡ್ ರೆಸ್ಪಾನ್ಸ್ ಟೀಮ್ -ಆರ್. ಆರ್. ಟಿ ಅಂದರೆ ಕ್ಷಿಪ್ರ ಸ್ಪಂದನಾ ಪಡೆಗಳು, ಎಲಿಫೆಂಟ್ ಟಾಸ್ಕ್ ಫೋರ್ಸ್ -ಇ.ಟಿ.ಎಫ್ ಅಂದರೆ ಆನೆ ಕಾರ್ಯ ಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಈಶ್ವರ ಖಂಡ್ರೆ, ತಾವು ಅರಣ್ಯ ಸಚಿವರಾದ ತರುವಾಯ ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಎರಡು ಆನೆ ಕಾರ್ಯಪಡೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಿದ್ದಾಗಿ ತಿಳಿಸಿದರು.

ಪ್ರಸ್ತುತ ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ, ಆನೆಗಳ ಚಲನವಲನದ ಬಗ್ಗೆ ಜನರಿಗೆ ಎಸ್.ಎಂ.ಎಸ್, ವಾಟ್ಸ್‌ಆ್ಯಪ್ ಸಂದೇಶದ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.

ಆನೆಗಳು ಸಾಮಾನ್ಯವಾಗಿ ಆಹಾರ ಮತ್ತು ನೀರು ಅರಸಿ ನಾಡಿಗೆ ಬರುತ್ತಿವೆ. ಹೀಗಾಗಿ ಅರಣ್ಯದೊಳಗೆ ವನ್ಯ ಜೀವಿಗಳಿಗೆ ಅದರಲ್ಲೂ ಆನೆಗಳಿಗೆ ಅಗತ್ಯ ಆಹಾರ, ನೀರು ಸಿಗುತ್ತಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಕ್ರಮ ವಹಿಸಲಾಗಿದೆ. ಕಳೆದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾದಾಗ, ಅರಣ್ಯ ಪ್ರದೇಶದೊಳಗಿನ ನೀರುಗುಂಡಿ ಅಂದರೆ ವಾಟರ್ ಹೋಲ್​ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ಕೊಳವೆ ಬಾವಿಗಳಿಗೆ ಅಳವಡಿಸಲಾದ ಸೌರ ಪಂಪ್​ಗಳ ಮೂಲಕ ನಿರಂತರವಾಗಿ ನೀರು ಲಭ್ಯವಾಗುವಂತೆ ಮಾಡಲಾಯಿತು ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ತಿಳಿಸಿದರು.

ನಾಗರಹೊಳೆ, ಬಂಡೀಪುರ, ಬಿಆರ್​ಟಿ ಮೊದಲಾದ ಕಡೆಗಳಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ ಲಂಟನಾ, ಸನ್ನಾದಂತಹ ಕಳೆಯಿಂದಲೂ ಆನೆಗಳಿಗೆ ಹುಲ್ಲು, ತೊಗಟೆ, ಎಲೆ, ಸೊಪ್ಪು ಮತ್ತು ನೀರು ಸರ್ವ ಋತುವಿನಲ್ಲೂ ಲಭ್ಯವಾಗುವಂತೆ ಮಾಡಲು ಮತ್ತು ಲಂಟನಾ ಕಳೆ ನಿರ್ಮೂಲನೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ವಿವರ ನೀಡಿದರು.

ಇದನ್ನೂ ಓದಿ: ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ, ನಾಳೆಯಿಂದ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ - Forest Land Encroachment

ETV Bharat Logo

Copyright © 2025 Ushodaya Enterprises Pvt. Ltd., All Rights Reserved.