ETV Bharat / state

ರಾಜ್ಯದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಧಾನಸೌಧ ಮುಂಭಾಗ ರಾಜ್ಯಪಾಲರಿಂದ 'ಯೋಗೋತ್ಸವ' ಉದ್ಘಾಟನೆ - International Day of Yoga

ಇಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು, ಸಂಘ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿ ಯೋಗ ದಿನವನ್ನು ಸಂಭ್ರಮಿಸಿದರು.

author img

By ETV Bharat Karnataka Team

Published : Jun 21, 2024, 12:02 PM IST

Updated : Jun 21, 2024, 3:52 PM IST

Yoga Day celebration in front of Vidhansouda
ವಿಧಾನಸೌಧದ ಮುಂಭಾಗ ಯೋಗ ದಿನಾಚರಣೆ (ETV Bharat)
ರಾಜ್ಯದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (ETV Bharat)

ಬೆಂಗಳೂರು: 10ನೇ ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಇಂದು ವಿಧಾನಸೌಧದ ಮುಂಭಾಗದಲ್ಲಿ ಯೋಗೋತ್ಸವ ಕಾರ್ಯಕ್ರಮ ನಡೆಯಿತು. ಆಯುಷ್ ಇಲಾಖೆಯಿಂದ ಆಯೋಜಿಸಿದ್ದ 'ಯೋಗೋತ್ಸವ'ವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ‌ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಶರವಣ, ಕ್ರೀಡಾಪಟುಗಳಾದ ಅಶ್ವಿನಿ ನಾಚಪ್ಪ, ಕ್ರಿಕೆಟಿಗ ಮನೀಶ್ ಪಾಂಡೆ, ಚಿತ್ರನಟರಾದ ಶರಣ್, ಅನು ಪ್ರಭಾಕರ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಡಿ.ಕೆ.ಶಿವಕುಮಾರ್ ಮಾತನಾಡಿ, "ಯೋಗಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದೆ. ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ ಎನ್ನುವ ನಿಟ್ಟಿನಲ್ಲಿ ಸಾಕಾರಗೊಂಡಿದೆ. ನನಗೆ ಯೋಗ ಮಾಡುವ ಅಭ್ಯಾಸ ಇಲ್ಲ, ನಾನು ಶಾಲಾ ದಿನಗಳಲ್ಲಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿದ್ದೆ ಅಷ್ಟೇ. ಯೋಗ ನಮ್ಮ ದೇಶದ ಆಸ್ತಿ, ಇದನ್ನು ಪ್ರಪಂಚಕ್ಕೆ ಪಸರಿಸಬೇಕು" ಎಂದರು. ಇದಕ್ಕೂ ಮುನ್ನ ಗಣ್ಯರು ಹಾಗೂ ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.

ಮೈಸೂರಲ್ಲಿ ಯೋಗ ದಿನಾಚರಣೆ ಉದ್ಘಾಟಿಸಿದ ಸಚಿವ ಮಹದೇವಪ್ಪ: "ಇಂದಿನ ಆಧುನಿಕ ಜಗತ್ತಿನಲ್ಲಿ ಕಳೆದು ಹೋಗುತ್ತಿರುವ ನಾವು ಶಿಸ್ತುಬದ್ಧ ಜೀವನ ನಡೆಸಲು ನಮ್ಮ ಪುರಾತನ ಯೋಗ ಅಭ್ಯಾಸ ಅತ್ಯಂತ ಪ್ರೇರಣೆಯಾಗಿದೆ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಅರಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್‌ ಇಲಾಖೆ ವತಿಯಿಂದ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

Yoga Day celebration in Belagavi
ಬೆಳಗಾವಿಯಲ್ಲಿ ಯೋಗ ದಿನಾಚರಣೆ (ETV Bharat)

"ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗಕ್ಕೂ ಅಂತಾರಾಷ್ಟ್ರೀಯ ದಿನವನ್ನು ಘೋಷಣೆ ಮಾಡುವಂತೆ ಮಾಡಿದೆ. ಆ ದಿನ ಘೋಷಣೆಯಾಗಿ ಇಂದಿಗೆ ಇಂದಿಗೆ ಹತ್ತು ವರ್ಷಗಳಾಗಿವೆ. ಯೋಗದ ನಿಯಮಗಳನ್ನು ಪಾಲಿಸುವಲ್ಲಿ ಭಾರತ ಪ್ರಪಂಚದ ಇತರ ರಾಷ್ಟ್ರಗಳಿಗಿಂತ ಮುಂಚೂಣಿಯಲ್ಲಿದೆ. ಯೋಗ ಮಾಡುವುದರಿಂದ ನಮ್ಮ ದೇಹದ ನಿಯಂತ್ರಣ, ಅಂಗಾಂಗಗಳ ಪರಿಪೂರ್ಣ ಮತ್ತು ಕ್ರಮಬದ್ಧವಾದ ಕಾರ್ಯ ಚಟುವಟಿಕೆ, ಮನಸ್ಸಿನ ಸಮತೋಲನ ಆರೋಗ್ಯದ ವೃದ್ಧಿಯಾಗುತ್ತದೆ" ಎಂದು ಹೇಳಿದರು.

Yoga Day celebration in Belagavi
ಬೆಳಗಾವಿಯಲ್ಲಿ ಯೋಗ ದಿನಾಚರಣೆ (ETV Bharat)

ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಮಾತನಾಡಿ, "ಮೈಸೂರಿನಲ್ಲಿ ಯೋಗ ದಿನಾಚರಣೆಯನ್ನು ಪ್ರತಿ ವರ್ಷವೂ ಬಹಳ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡುತ್ತಾ ಬಂದಿದ್ದೇವೆ. ಭಾರತದಲ್ಲಿ ಆಧುನಿಕ ಕಾಲದ ಯೋಗ ಮೈಸೂರಿನಿಂದ ಸೃಷ್ಟಿಯಾಗಿದೆ ಎಂದರೆ ತಪ್ಪಿಲ್ಲ. ಅಂದಿನ ಕಾಲದ ಶ್ರೀತತ್ವ ನಿಧಿಯಲ್ಲಿ 108 ಆಸನಗಳನ್ನು ದಾಖಲೆ ಮಾಡಿ ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯೋಗ ಅಭ್ಯಾಸ ಮೈಸೂರಿನಲ್ಲಿ ಶುರುವಾಗಿತ್ತು" ಎಂದರು.

Yoga Day celebration in Chamarajanagar
ಚಾಮರಾಜನಗರದಲ್ಲಿ ಯೋಗ ದಿನಾಚರಣೆ (ETV Bharat)

"ಹಿಂದಿನ ಪರಂಪರೆಯ ರಾಯಭಾರಿಯಾಗಿ ಇಂದು ಯೋಗ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ದಸರಾ ಸಂದರ್ಭದಲ್ಲಿ ಯೋಗ ದಿನವನ್ನು ಗಿನ್ನೆಸ್​​ ದಾಖಲೆಗೆ ಸೇರಿಸಲು ಸಿದ್ಧವಾಗಬೇಕು ಇದಕ್ಕೆ ನಮ್ಮ ಸಹಕಾರ ಇರುತ್ತದೆ" ಎಂದು ಹೇಳಿದರು.

ಶಾಸಕ ಟಿ.ಎಸ್‌.ಶ್ರೀವತ್ಸ ಮಾತನಾಡಿ, "ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮ್ಮೊಂದಿಗೆ ಯೋಗ ಮಾಡಿದ್ದು, ನೆನಪಿಗೆ ಬರುತ್ತದೆ. ಯೋಗ ಎಂದರೆ ಮೈಸೂರು ಎಂದರೆ ಯೋಗ. ಅನೇಕ ಪ್ರಥಮಗಳಿಗೆ ಮೈಸೂರು, ಮಹಾರಾಜರು ಮೈಸೂರು ಅರಮನೆ, ಕಾರಣವಾಗಿದೆ. ಇದನ್ನು ಇಂದು ನೆನೆದುಕೊಳ್ಳಬೇಕು" ಎಂದರು.

Yoga Day celebration in front of Mysore Palace
ಮೈಸೂರು ಅರಮನೆ ಮುಂಭಾಗ ಯೋಗ ದಿನಾಚರಣೆ (ETV Bharat)

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, "ಪತಂಜಲಿ ಮಹಾಮುನಿಗಳಿಂದ ಯೋಗ ಪ್ರಪಂಚಕ್ಕೆ ಪರಿಚಯವಾಗಿದೆ. ಜಾಗತಿಕ ಮಟ್ಟದಲ್ಲಿ ಯೋಗದ ಮಹತ್ವ ಅರಿತು ಪಾಶ್ಚಿಮಾತ್ಯ ದೇಶಗಳು ಯೋಗದ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ. ಯೋಗಕ್ಕೆ ಭಾರತದ ಕೊಡುಗೆ ಜೊತೆಗೆ ಮೈಸೂರು ಸಹ ಯೋಗದ ಭೂಪಟದಲ್ಲಿ ತನ್ನದೇ ಆದ ಛಾಪುವನ್ನು ಮೂಡಿಸಿರುವುದು ಹೆಮ್ಮೆಯ ಸಂಗತಿ" ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಉಪಸ್ಥಿತರಿದ್ದರು.

ಯಲಹಂಕದಲ್ಲಿ ಸಾವಿರ ಯೋಧರಿಂದ ಯೋಗಾಭ್ಯಾಸ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಯಲಹಂಕದ ಸಿಆರ್​ಪಿಎಫ್ ಕೇಂದ್ರದಲ್ಲಿ ಯೋಗಾಭ್ಯಾಸ ನಡೆಸಲಾಗಿದ್ದು, ಸಾವಿರಕ್ಕೂ ಅಧಿಕ ಯೋಧರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷ ಆಕರ್ಷಣೆಯಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಯೋಗ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಐ.ಜಿ.ಪಿ, ಸೆಂಟರ್ ಐ.ಜಿ.ಪಿ, ಕಮಿಷನರ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಮತ್ತು ಯೋಧರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ಬೆಳಗಾವಿಯಲ್ಲಿ ಯೋಗ ದಿನದಲ್ಲಿ ವಿದೇಶಿ ಪ್ರತಿನಿಧಿಗಳು ಭಾಗಿ: ಯೋಗ ದಿನದ ಹಿನ್ನೆಲೆ ನಗರದ ಕೆಪಿಟಿಸಿಎಲ್ ಭವನದಲ್ಲಿ ನೂರಾರು ಜನರು ಉತ್ಸಾಹದಿಂದ ವಿವಿಧ ಆಸನಗಳನ್ನು ಪ್ರದರ್ಶಿಸಿ ಸಂಭ್ರಮಿಸಿದರು. ವಿದೇಶದ ಪ್ರತಿನಿಧಿಗಳು ಕೂಡ ಈ ವೇಳೆ ಭಾಗಿಯಾಗಿದ್ದು ವಿಶೇಷವಾಗಿತ್ತು. ಜಿಲ್ಲಾಡಳಿತ, ಜಿಪಂ ಹಾಗೂ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿದ್ದ ಯೋಗ ದಿ‌ನಾಚರಣೆಗೆ ಸಂಸದ ಜಗದೀಶ ಶೆಟ್ಟರ್ ಚಾಲನೆ ನೀಡಿದರು.

ಬಳಿಕ ತರಬೇತುದಾರು ಆರತಿ ಪಡಸಲಗಿ ಯೋಗಾಸನದ ನಾನಾ ಭಂಗಿಗಳ ಮಹತ್ವವನ್ನು ತಿಳಿಸಿದರು. ಸಂಸದ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ ಸೇರಿ ಮತ್ತಿತರರು ಪಾಲ್ಗೊಂಡು ಆಸನಗಳನ್ನು ಮಾಡಿ ಗಮನ ಸೆಳೆದರು. ವಿವಿಧ ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನಾಗರಿಕರು ಕೂಡ ಯೋಗ ದಿನದಲ್ಲಿ ಭಾಗಿಯಾಗಿ ಪ್ರಾಣಾಯಾಮ, ಧ್ಯಾನ ಸೇರಿದಂತೆ ಸೂರ್ಯ ನಮಸ್ಕಾರ ಸೇರಿ ಅನೇಕ ಆಸನಗಳನ್ನು ಪ್ರದರ್ಶಿಸಿ ಮನಸ್ಸು ಮತ್ತು ದೇಹವನ್ನು ಹಗುರ ಮಾಡಿಕೊಂಡರು.

ಚಾಮರಾಜನಗರದಲ್ಲಿ ಅಧಿಕಾರಿಗಳು, ಜನರಿಂದ ಸಾಮೂಹಿಕ ಯೋಗ: 10ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಚಾಮರಾಜನಗರ ಎಸ್​ಪಿ ಪದ್ಮಿನಿ ಸಾಹು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಬಳಿಕ ಎಸ್ಪಿ, ಜಿಪಂ ಸಿಇಒ ಆನಂದಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೆದ, ಚುಡಾ ಅಧ್ಯಕ್ಷ ಅಸ್ಗರ್ ಮುನ್ನ ಸೇರಿದಂತೆ ಹಲವರು ಸಾರ್ವಜನಿಕರು, ವಿದ್ಯಾರ್ಥಿಗಳ ಜೊತೆ ಸಾಮೂಹಿಕ ಯೋಗ ಮಾಡಿದರು.

ಸೂರ್ಯ ನಮಸ್ಕಾರ, ಕೂರ್ಮಾಸನ, ಅರ್ಧ ಉಷ್ಟಾಸನ, ತ್ರಿಕೋನಾಸನ, ವಜ್ರಾಸನ, ವೀರಾಸನ, ತ್ರಿಕೋನಾಲಗಾಸನ, ಮಂಡೂಕಾಸನ, ವಿವಿಧ ಶ್ವಾಸ ಕ್ರಿಯೆ ಸೇರಿದಂತೆ 2 ತಾಸು ಯೋಗ ಪ್ರದರ್ಶನ ನಡೆಯಿತು.

ದೆಹಲಿಯಲ್ಲಿ ಜೋಶಿ ಯೋಗ - ಹುಬ್ಬಳ್ಳಿಯ ವಿವಿಧೆಡೆ ಯೋಗ ದಿನಾಚರಣೆ: "ಯೋಗ- ಸಂಗೀತ ಸಹಿತ ಭಾರತೀಯರ ಜೀವನ ಶೈಲಿ, ಪದ್ಧತಿ ಅದ್ಭುತವಾಗಿದೆ" ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಬಣ್ಣಿಸಿದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಅವರು, "ಭಾರತೀಯ ಕೌಟುಂಬಿಕ ಪದ್ಧತಿ, ಆಹಾರ ಪದ್ಧತಿ ಮತ್ತು ವ್ಯಾಯಾಮ ಪದ್ಧತಿಗಳು ಅತ್ಯಂತ ವೈಶಿಷ್ಟ್ಯಪೂರ್ಣವಾಗಿವೆ" ಎಂದರು.

"ಇತ್ತೀಚಿನ ದಿನಗಳಲ್ಲಿ ಭಾರತೀಯರು ಬದಲಾದ ಜೀವನ ಶೈಲಿಗೆ ಮಾರು ಹೋಗುತ್ತಿದ್ದಾರೆ. ಯೋಗಾಸನ, ಪ್ರಾಣಾಯಾಮ, ಸಂಗೀತ ಮತ್ತು ಸಾಂಪ್ರದಾಯಿಕ ಆಹಾರ ಪದ್ಧತಿಗಳಿಂದ ದೂರವಾಗುತ್ತಿರುವುದು ದೌರ್ಭಾಗ್ಯವೇ ಸರಿ. ಪ್ರಧಾನಿ ನರೇಂದ್ರ ಮೋದಿ ಅವರು 2014ರ ನಂತರ ಯೋಗದ ಮಹತ್ವವನ್ನು ಸಾರಿ, ಸಾದರಪಡಿಸಿದರು. ಈ ಮೂಲಕ ಭಾರತೀಯರಲ್ಲಿ ದೇಸಿ ಯೋಗ ಪದ್ಧತಿ, ಆಹಾರ ಪದ್ಧತಿ, ಸಂಗೀತ - ಸಂಪ್ರದಾಯಗಳನ್ನು ಮರು ಪ್ರತಿಷ್ಠಾಪಿಸುತ್ತಿದ್ದಾರೆ" ಎಂದು ಪ್ರಲ್ಹಾದ ಜೋಶಿ ಹೇಳಿದರು.

"ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಘೋಷಿಸಿ, ಭಾರತೀಯರೆಲ್ಲ ಪಾಲಿಸುವಂತೆ ಪ್ರೇರೇಪಿಸಿದ್ದು, ಈಗ ಜಗತ್ತೇ ಮೋದಿ ಅವರ ಯೋಗ ಕಾರ್ಯ- ಕ್ರಮವನ್ನು ಅನುಸರಿಸುತ್ತಿದೆ. ವಿವಿಧ ರಾಷ್ಟ್ರಗಳು ಯೋಗ ಆಚರಣೆಯಲ್ಲಿ ತೊಡಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಜಮ್ಮು ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಶೇಷತೆ ಮೆರೆದಿದ್ದಾರೆ. ಅಲ್ಲಿಯವರಿಗೆ ಒಂದು ಶಕ್ತಿ, ಧೈರ್ಯದ ರೂಪದಲ್ಲಿ ಸಾಕಾರಮೂರ್ತಿಯಾಗಿ ಅವರೊಂದಿಗೆ ನಿಂತಿದ್ದಾರೆ" ಎಂದು ಜೋಶಿ ಹೆಮ್ಮೆ ವ್ಯಕ್ತಪಡಿಸಿದರು.

"ಉತ್ತಮ ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ನಾವೆಲ್ಲರೂ ಪ್ರತಿದಿನ ಯೋಗಾಭ್ಯಾಸ ಮಾಡುವ ಪ್ರತಿಜ್ಞೆ ಮಾಡೋಣ" ಎಂದು ಇದೇ ವೇಳೆ ಕರೆ ನೀಡಿದರು.

ಹುಬ್ಬಳ್ಳಿಯ ವಿವಿಧೆಡೆ ಯೋಗ ದಿನಾಚರಣೆ: ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಶಾಸಕ‌ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ‌ ಯೋಗ ದಿನಾಚರಣೆ ನಡೆಸಲಾಯಿತು. ಈ ವೇಳೆ ಸ್ಥಳೀಯ ಪಾಲಿಕೆ ಸದಸ್ಯರು ಸೇರಿದಂತೆ ನೂರಾರು ಜನ ಸಾರ್ವಜನಿಕರು ಯೋಗಾಭ್ಯಾಸ ಮಾಡುವ ಮೂಲಕ‌ ವಿಶ್ವ ಯೋಗ ದಿನ‌ ಆಚರಣೆ ಮಾಡಿದರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಯೋಗ ದಿನ: ಗಮನಸೆಳೆದ ರಾಮ್‌ದೇವ್ ಬಾಬಾ ಯೋಗ ಪ್ರದರ್ಶನ, ಹೆಚ್​​​​​​​ಡಿಕೆ, ಜೋಶಿಯಿಂದಲೂ ಯೋಗ - International Day of Yoga

Last Updated : Jun 21, 2024, 3:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.