ETV Bharat / state

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ; 10 ಏರ್ ಬಸ್ ನಿಲುಗಡೆಗೆ ವಿಸ್ತರಣೆ ಎಂದ ಜೋಶಿ - pralhad joshi - PRALHAD JOSHI

ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಾಗುವುದು ಎಂದಿದ್ದಾರೆ.

Minister Pralhad Joshi
ಸಚಿವ ಪ್ರಲ್ಹಾದ್ ಜೋಶಿ (ETV Bharat)
author img

By ETV Bharat Karnataka Team

Published : Sep 29, 2024, 7:54 PM IST

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ಭಾನುವಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಣೆ ನಡೆಸಿ, ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು 2.5 ಲಕ್ಷ ಪ್ರಯಾಣಿಕರ ನಿರೀಕ್ಷೆ ಇರಿಸಿಕೊಂಡು 270 ಕೋಟಿ ವೆಚ್ಚದಲ್ಲಿ ಬೃಹತ್ ಆಗಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ETV Bharat)

ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಅಗತ್ಯ ಸೌಲಭ್ಯಗಳೊಂದಿಗೆ ವಿಸ್ತರಿಸಲಾಗುತ್ತಿದೆ ಎಂದರು.

ಕಾಮಗಾರಿ ಶೀಘ್ರ ಟೆಂಡರ್ : ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸುತ್ತಿದ್ದು, ಈಗಾಗಲೇ ಕಾಮಗಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

Minister Pralhad Joshi
ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ (ETV Bharat)

10 ಏರ್ ಬಸ್ ನಿಲುಗಡೆಗೆ ವಿಸ್ತರಣೆ : ಸದ್ಯಕ್ಕೆ 4 ವಿಮಾನಗಳು ನಿಲ್ಲುವ ಸ್ಥಳವಿದ್ದು, ಅದನ್ನೀಗ ಸುಮಾರು 10 ಏರ್ ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶಕ್ಕೆ ವಿಸ್ತರಿಸಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಚರ್ಚೆ ಸಹ ನಡೆಸಿದರು.

ಪ್ರಧಾನಿ ಮೋದಿ ಚಾಲನೆ ನೀಡಿದ್ದರು : 2024ರ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು 273 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಕಾಮಗಾರಿ ವೇಗವಾಗಿ ಸಾಗುತ್ತಿದೆ ಎಂದರು.

pralhad-joshi
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಣೆ (ETV Bharat)

ಉತ್ತರ ಕರ್ನಾಟಕ ಅಭಿವೃದ್ಧಿ ಪಥಕ್ಕೆ ವೇಗ : ಹೊಸ ಟರ್ಮಿನಲ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಿದೆ. ನಮ್ಮ ವಾಣಿಜ್ಯನಗರಿ ವಿಮಾನ ನಿಲ್ದಾಣಕ್ಕೆ ಮತ್ತಷ್ಟು ಮೇಲ್ದರ್ಜೆಯ ಸೌಲಭ್ಯಗಳು ಒದಗಲಿವೆ. ಇದರಿಂದ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ದಿ ಪಥ ವೇಗದಲ್ಲಿರುತ್ತದೆ ಎಂದು ಹೇಳಿದರು.

Minister Pralhad Joshi
ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ETV Bharat)

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಹು-ಧಾ ಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ ಹಾಗೂ ವಿಮಾನ ನಿಲ್ದಾಣದ ಆಡಳಿತ ವರ್ಗದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ವಿಮಾನ ಯಾನದಲ್ಲಿ ಹುಬ್ಬಳ್ಳಿಯ ಸಾಧನೆ: ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.