ಅಹಮದಾಬಾದ್ : ಯುವ ನಾಯಕ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡದ ಎದುರು ಪ್ಯಾಟ್ ಕಮಿನ್ಸ್ ಮುನ್ನಡೆಸುತ್ತಿರುವ ಸನ್ ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಫೀಲ್ಡಿಂಗ್ ಮಾಡಲಿದೆ. ದೇಶದ ಅತಿ ದೊಡ್ಡದಾದ ಅಹಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ.
ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ರನ್‌ಗಳ ಟಾರ್ಗೆಟ್ ನೀಡಿ ಗೆದ್ದಿರುವ ಹೈದರಾಬಾದ್ ಇಂದು ಕೂಡ ಅದೇ ವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಇನ್ನೊಂದೆಡೆ ಮಾಜಿ ರನ್ನರ್ ಅಪ್ ಗುಜರಾತ್ ಸಹ ತನ್ನ ಉತ್ತಮ ತಂತ್ರಗಾರಿಕೆಯೊಂದಿಗೆ ಕಮಿನ್ಸ್ ಪಡೆಯನ್ನು ಕಟ್ಟಿಹಾಕುವ ಉತ್ಸಾಹದಲ್ಲಿದೆ. ಆಡಿರುವ ಎರಡು ಪಂದ್ಯಗಳಲ್ಲಿ ಗುಜರಾತ್ ಮತ್ತು ಹೈದರಾಬಾದ್ ತಂಡಗಳು ತಲಾ ಒಂದು ಗೆಲುವು ಮತ್ತು ಒಂದು ಸೋಲು ಕಂಡಿವೆ.
ತಂಡಗಳು: ಗುಜರಾತ್ ಟೈಟಾನ್ಸ್ : ವೃದ್ಧಿಮಾನ್ ಸಹಾ(ವಿ.ಕೀ), ಶುಭಮನ್ ಗಿಲ್(ನಾಯಕ), ಅಜ್ಮತ್ಉಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ
ಸನ್‌ರೈಸರ್ಸ್ ಹೈದರಾಬಾದ್ : ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿ.ಕೀ.), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್
ಇದನ್ನೂ ಓದಿ : IPL: ಪಂಜಾಬ್ ವಿರುದ್ಧ 21 ರನ್‌ಗಳ ಜಯ ಸಾಧಿಸಿದ ಲಕ್ನೋ; ಗಮನ ಸೆಳೆದ ಮಯಾಂಕ್ ಯಾದವ್ ಬೌಲಿಂಗ್ - Lucknow Super Giants