ETV Bharat / state

ಗ್ಯಾರಂಟಿಯಿಂದ ನಮ್ಮ ಸರ್ಕಾರ ದಿವಾಳಿಯಾಗಿದೆಯಾ? ಮೋದಿ ಸುಳ್ಳು ಹೇಳ್ತಾರೆ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಕಲಬುರ್ಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಪರ ಅಫಜಲಪುರ ಪಟ್ಟಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತಪ್ರಚಾರ ಕೈಗೊಂಡರು.

CM Siddaramaiah spoke at a campaign meeting for the Congress candidate
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
author img

By ETV Bharat Karnataka Team

Published : Apr 24, 2024, 10:26 PM IST

ಕಲಬುರಗಿ: ಕಳೆದ ಹತ್ತು ವರ್ಷದಲ್ಲಿ ಮೋದಿ ನೀಡಿರುವ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ಪರ ಬೃಹತ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತೀ ವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಉದ್ಯೋಗಗಳು ಎಲ್ಲಿ ಹೋದವು? ಹದಿನೈದು ಲಕ್ಷ ರೂ ನೀಡುವುದಾಗಿ ಹೇಳಿದ್ದರು.‌ ಆ ಹಣ ಎಲ್ಲಿ‌ ಹೋಯಿತು ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆ ಜಾರಿಗೆ ತಂದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಮೋದಿ ಹೇಳಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ‌ ಬಂದ ಮೇಲೆ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ನಮ್ಮ ಸರ್ಕಾರ ದಿವಾಳಿಯಾಗಿದೆಯೇ? ಮೋದಿ ಸುಳ್ಳು ಹೇಳುತ್ತಾರೆ. ಬಿಜೆಪಿ ಸುಳ್ಳಿನ ಕಾರ್ಖಾನೆ. ಸುಳ್ಳು ಇವರ ಮನೆ ದೇವರು. ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ನಾವು ಬಸವಣ್ಣನವರ ಅನುಯಾಯಿಗಳು. ಕೊಟ್ಟ ಮಾತು ಮೀರುವುದಿಲ್ಲ ಎಂದು ಭರವಸೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ವಾರ್ಷಿಕ 52,000 ಕೋಟಿ ರೂ ತೆಗೆದಿರಿಸಿದ್ದೇವೆ. ಇದುವರೆಗೆ 195 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ನಾನು ಸಿಎಂ ಇದ್ದಾಗ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ ಏಳು ಕೆಜಿ ಅಕ್ಕಿ ಫ್ರಿ ಕೊಡುತ್ತಿದ್ದೆ. ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಏಳು ಕೆಜಿಯಿಂದ ಐದು ಕೆಜಿಗಿಳಿಸಿದರು. ನಮ್ಮ ಸರ್ಕಾರ ಪುನಃ ಅಧಿಕಾರಕ್ಕೆ ಬಂದ ನಂತರ ಅಕ್ಕಿ‌ ಖರೀದಿಗೆ ಹಣ ನೀಡುತ್ತಿದ್ದೇವೆ. ಗೃಹ ಜ್ಯೋತಿ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ನಮ್ಮ ಗ್ಯಾರಂಟಿಗಳನ್ನೇ ಮೋದಿ ಹೈಜಾಕ್ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು‌ ಟೀಕಿಸಿದರು.

11,495 ಕೋಟಿ ರೂ ಅನುದಾನ ಬಿಡುಗಡೆ ವಿಳಂಬ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ರಾಧಾಕೃಷ್ಣ ದೊಡ್ಮನಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ, ಸಂಸತ್ತಿನಲ್ಲಿ ರಾಜ್ಯ ಸರ್ಕಾರದ ಪರ ಧ್ವನಿ ಎತ್ತದ ಉಮೇಶ ಜಾಧವ್ ಯಾಕೆ ಗೆಲ್ಲಬೇಕು? ಶಾ, ನಡ್ಡಾ, ನಿರ್ಮಲಾ ಸೀತಾರಾಮನ್ ಸೇರಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದ 5,495 ಕೋಟಿ‌ ಸೇರಿದಂತೆ ರಾಜ್ಯಕ್ಕೆ ಘೋಷಿತ 11,495 ಕೋಟಿ ರೂ ಅನುದಾನ ಬಿಡುಗಡೆ ಮಾಡಲಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಲಕ್ಷಾಂತರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಬರ ಪರಿಹಾರವಾಗಿ 18,171 ಕೋಟಿ ಬಿಡುಗಡೆ ಮಾಡಲು ಪರಿಪರಿಯಾಗಿ ಬೇಡಿಕೊಂಡರೂ ಕ್ಯಾರೇ ಅನ್ನಲಿಲ್ಲ‌. ಹಾಗಾಗಿ‌ ಅನಿವಾರ್ಯವಾಗಿ ಸುಪ್ರಿಂ ಕೋರ್ಟ್‌ಗೆ ಹೋಗಬೇಕಾಯಿತು. ಅಟಾರ್ನಿ ಜನರಲ್ ಒಂದು ವಾರ ಸಮಯ ಕೇಳಿದ್ದಾರೆ. ನಾವು ಸುಪ್ರಿಂಗೆ ಹೋಗಿರದೇ ಇದ್ದರೆ, ನಮಗೆ ಈ ಭರವಸೆ ಸಿಗುತ್ತಿರಲಿಲ್ಲ.‌ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರ ಬರ ಪರಿಹಾರ ಕೇಳಿಲ್ಲ, ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ‌. ನಿರ್ಮಲಾ ಅವರೇ ನಮಗೆ ಗ್ಯಾರಂಟಿಗಾಗಿ ಹಣ ಬೇಡ. ನಮಗಿರುವ ಸಂಪನ್ಮೂಲಗಳಿಂದ ಅದನ್ನು ಭರಿಸುತ್ತೇವೆ ಎಂದು ತಿರುಗೇಟು ನೀಡಿದರು.

ಎಸ್ಟಿಗೆ ಕುರುಬ, ಗೊಂಡ ಕುರುಬ ಕೋಲಿ ಸಮಾಜ: ಸಂವಿಧಾನ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ‌ ಕಾಂಗ್ರೆಸ್ ಅಧಿಕಾರಕ್ಕೆ ಬರಲೇಬೇಕು. ಅವಕಾಶದಿಂದ ವಂಚಿತರಾದವರಿಗೆ ನ್ಯಾಯ ಕೊಡಿಸಬೇಕಾದರೆ ನೀವೆಲ್ಲ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ಕುರುಬ, ಗೊಂಡ ಕುರುಬ ಕೋಲಿ ಸಮಾಜವನ್ನು ಎಸ್‌ಟಿ‌ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಜಾಧವ್ ಈ ಬಗ್ಗೆ ಧ್ವನಿ ಎತ್ತಿದ್ದಾರಾ? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ‌ ಸಮುದಾಯಗಳನ್ನು ಎಸ್‌ಟಿ‌ ಸೇರಿಸುವುದಾಗಿ ಭರವಸೆ ನೀಡಿದರು.

ಇದನ್ನೂಓದಿ:ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ, ಎಲ್ಲೆಡೆ ನಿರೀಕ್ಷೆ ಮೀರಿ ಬೆಂಬಲ: ಯಡಿಯೂರಪ್ಪ - B S Yediyurappa

ETV Bharat Logo

Copyright © 2025 Ushodaya Enterprises Pvt. Ltd., All Rights Reserved.