ಬೆಂಗಳೂರು: ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರು ಸೇವಾ ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ, ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪ್ರತಾಪ್ ರೆಡ್ಡಿ ವೈಯಕ್ತಿಕ ಕಾರಣವನ್ನು ನೀಡಿ ಸ್ವಯಂ ನಿವೃತ್ತಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಏಪ್ರಿಲ್ 30ಕ್ಕೆ ತಮ್ಮನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇವರು ಮುಂದಿನ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಇದು ರಾಜ್ಯ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ ಅವರು ಬಿ.ಟೆಕ್ ಪದವೀಧರರಾಗಿದ್ದು, 1991ರಲ್ಲಿ ಕರ್ನಾಟಕ ಕೆಡರ್‌ನ ಐಪಿಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದ್ದರು. ಪ್ರತಾಪ್ ರೆಡ್ಡಿ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲೂ ಸೇವೆ ಸಲ್ಲಿಸಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲೂ ಪ್ರಸಿದ್ದಿ ಪಡೆದಿದ್ದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಚೆನ್ನೈ-ಬೆಂಗಳೂರು ಕಾರಿಡಾರ್ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅರ್ಜಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್