ETV Bharat / state

ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ಗೆ ವಿಟಿಯು ಗೌರವ ಡಾಕ್ಟರೇಟ್ ಪ್ರದಾನ - Somanath Gets Honorary Doctorate

author img

By ETV Bharat Karnataka Team

Published : Aug 13, 2024, 10:57 PM IST

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್​ ಪ್ರದಾನ ಮಾಡಿದ್ದಾರೆ.

isro-chairman-s-somanath-gets-honorary-doctorate
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ಗೆ ವಿಟಿಯು ಗೌರವ ಡಾಕ್ಟರೇಟ್ ಪ್ರದಾನ (ETV Bharat)

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಘೋಷಿಸಲಾಗಿರುವ ಗೌರವ ಡಾಕ್ಟರೇಟ್ ಅನ್ನು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ನಂತರ ಮಾತನಾಡಿದ ರಾಜ್ಯಪಾಲರು, ಇಸ್ರೋ ಅಧ್ಯಕ್ಷರಾದ ಎಸ್.ಸೋಮನಾಥ್ ಅವರ ನಾಯಕತ್ವ ಮತ್ತು ದೃಷ್ಟಿ ಭಾರತದ ಬಾಹ್ಯಾಕಾಶ ಪರಿಶೋಧನಾ ಕಾರ್ಯಕ್ರಮಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತಿದೆ. ಬಾಹ್ಯಾಕಾಶ ವಿಜ್ಞಾನದಲ್ಲಿ ಅವರ ಅತ್ಯುತ್ತಮ ಸಾಧನೆಗಳ ಬಗ್ಗೆ ಅತೀವ ಹೆಮ್ಮೆ ಇದೆ ಎಂದು ಹೇಳಿದರು.

ವಿಜ್ಞಾನ ಕ್ಷೇತ್ರದಲ್ಲಿ ಸೋಮನಾಥ್ ಕೊಡುಗೆಯನ್ನು ಸ್ಪೂರ್ತಿದಾಯಕವೆಂದು ಪರಿಗಣಿಸುತ್ತೇನೆ. ದೇಶದ ಹಿತದೃಷ್ಟಿಯಿಂದ ಅತ್ಯುತ್ತಮ ಕೆಲಸ ಮಾಡುತ್ತಿದ್ದು, ಇವರಿಗೆ ಈ ದಿನ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿರುವ ಅವರ ಸೇವೆ ನಿರಂತರವಾಗಿರಲಿ. ಅವರ ಈ ಸಾಧನೆ ಯುವಜನತೆಗೆ ಸ್ಫೂರ್ತಿ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಅಷ್ಟೇ ಅಲ್ಲ, ಕರ್ನಾಟಕವು ಜಾಗತಿಕ ಸ್ಟಾರ್ಟಪ್ ಹಬ್ ಸಹ ಆಗಿದೆ ಮತ್ತು ಜಾಗತಿಕವಾಗಿ ಮೂರನೇ ಅತಿ ಹೆಚ್ಚು ಸ್ಟಾರ್ಟಪ್‍ಗಳನ್ನು ಹೊಂದಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅವುಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಸೇರಿದೆ. ಈ ಎರಡೂ ವಿಶ್ವವಿದ್ಯಾಲಯಗಳು ಭಾರತದ ಆಧುನಿಕತೆ, ಇತಿಹಾಸ, ಸಂಸ್ಕತಿ ಮತ್ತು ನಾಗರಿಕತೆಯೊಂದಿಗೆ ಸಂಪರ್ಕ ಹೊಂದಿವೆ. ತಾಂತ್ರಿಕ ಮತ್ತು ಕೃಷಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕೊಡುಗೆ ನೀಡುತ್ತಿವೆ ಎಂದು ಶ್ಲಾಘಿಸಿದರು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಇತ್ತೀಚಿನ ವರ್ಷಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿದೆ. ಆ ಮೂಲಕ ದೇಶ ಮತ್ತು ಪ್ರಪಂಚದ ಗಮನ ಸೆಳೆದಿದೆ. ನಮ್ಮ ವಿಜ್ಞಾನಿಗಳು ಮತ್ತು ಸಂಶೋಧಕರು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಅದರ ಅನ್ವಯಗಳನ್ನು ಅಭಿವೃದ್ಧಿಪಡಿಸುವ ಕಡೆಗೆ ಸಮರ್ಪಣೆ ಮತ್ತು ಕಠಿಣ ಪರಿಶ್ರಮದಿಂದ ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ ಎಂದು ರಾಜ್ಯಪಾಲರು ಸಲಹೆ ನೀಡಿದರು.

ಈ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಸ್.ಸಿ.ಸುಧಾಕರ್, ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ, ಡಾ.ಪಿ.ಎಲ್.ಪಾಟೀಲ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.