ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲೇ ಇಂದು ಆದಾಯ ತೆರಿಗೆ ಅಧಿಕಾರಿಗಳು ನಗರದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿರುವ ಮಾಹಿತಿ ದೊರೆತಿದೆ.
ನಗರದ ಪ್ರಮುಖ ಉದ್ಯಮಿಗಳು ಹಾಗೂ ಗುತ್ತಿಗೆದಾರರ ಮನೆ, ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷವೊಡ್ಡುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಪರಿಚಿತ ಉದ್ಯಮಿಗಳು ಹಾಗೂ ಗುತ್ತಿಗೆದಾರರ ಮೂಲಕ ಅಕ್ರಮವಾಗಿ ಹಣ ಸಾಗಿಸುವ ಶಂಕೆ ಇದೆ. ಹೀಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಮುಖಂಡ ಕೆಂಪರಾಜು ಎಂಬವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಾಗೆಯೇ ವಾಜರಹಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ: ತಮಿಳುನಾಡು: ಶಾಸಕ ಬೈರತಿ ಬಸವರಾಜ್ ಪಿಎ ಸಂಬಂಧಿ ಮನೆ ಮೇಲೆ ಐಟಿ ದಾಳಿ - ಚಿನ್ನ, ನಗದು ವಶ - IT Raid