ETV Bharat / state

ಊಹಾಪೋಹಗಳನ್ನಾಧರಿಸಿ ಜಾತಿಗಣತಿ ವರದಿ ವಿರೋಧಿಸುವುದು ಅನವಶ್ಯಕ: ಸಿದ್ದರಾಮಯ್ಯ - CM SIDDARAMAIAH

ನವದೆಹಲಿಯಲ್ಲಿ ಜಾತಿಗಣತಿ ವರದಿ ಬಗ್ಗೆ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಊಹಾಪೋಹಗಳನ್ನಾಧರಿಸಿ ಈ ವರದಿಯನ್ನು ವಿರೋಧಿಸುವುದು ಅನವಶ್ಯಕ ಎಂದಿದ್ದಾರೆ.

CM SIDDARAMAIAH
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jan 15, 2025, 6:45 PM IST

ಬೆಂಗಳೂರು/ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿ - ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವದೆಹಲಿಯಲ್ಲಿ ಇಂದು ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ, ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ: ಆರ್​ಎಸ್​ಎಸ್​ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್​ಎಸ್​ಎಸ್​ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ-ವರಿಷ್ಠರ ತೀರ್ಮಾನ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಹಂತ ಹಂತವಾಗಿ ಬಾಕಿ ಪಾವತಿ: ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ: ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ: ಸಚಿವ ಸತೀಶ್ ಜಾರಕಿಹೊಳಿ - NEW PRESIDENT FOR KPCC

ETV Bharat Logo

Copyright © 2025 Ushodaya Enterprises Pvt. Ltd., All Rights Reserved.