ETV Bharat / state

ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಜೆ.ಪಿ. ನಡ್ಡಾ ತಿಳಿಸಿದ್ದಾರೆ: ಛಲವಾದಿ ನಾರಾಯಣಸ್ವಾಮಿ - CHALAVADI NARAYANASWAMY

ಭಿನ್ನರು ಇಂದು ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿಲ್ಲ ಎಂದರೆ ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಅಂಥ ಅರ್ಥ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ (ETV Bharat)
author img

By ETV Bharat Karnataka Team

Published : Jan 3, 2025, 9:44 PM IST

ಬೆಂಗಳೂರು: "ರಾಜ್ಯದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿರುವುದಾಗಿ" ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದ ಕುಮಾರಕೃಪಾ ವಸತಿ ಗೃಹದಲ್ಲಿ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

"ಜೆ.ಪಿ. ನಡ್ಡಾ ಅವರು ಒಂದು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ನಾವು ಸಹಜವಾಗಿಯೇ ಮಾತುಕತೆ ನಡೆಸಿದ್ದೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಸಂಘಟನೆಯ ಬಗ್ಗೆ ಕೇಳಿದ್ದು, ಎಲ್ಲವನ್ನೂ ಹೇಳಿದ್ದೇವೆ. ವಿರೋಧ ಪಕ್ಷ ನಾಯಕರಾಗಿ ಹೇಗೆ ಕೆಲಸ ಮಾಡ್ತಿದ್ದೀರಿ ಎಂದು ಕೇಳಿದ್ದು, ನಾವು ಮಾಡಿರುವ ಕೆಲಸಗಳ ಬಗ್ಗೆ, ಎಲ್ಲ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ ಎಂದು ಹೇಳಿದ್ದೇವೆ" ಎಂದು ತಿಳಿಸಿದರು.

"ನಾನು, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಎನ್. ರವಿಕುಮಾರ್, ಲೇಹರ್ ಸಿಂಗ್, ತೇಜಸ್ವಿಸೂರ್ಯ, ಎನ್. ಮುನಿರತ್ನ, ಸಿದ್ದು ಪಾಟೀಲ್ ಸೇರಿದಂತೆ ಅನೇಕ ನಾಯಕರು ಭೇಟಿ ಮಾಡಿದ್ದೇವೆ. ಪ್ರತ್ಯೇಕವಾಗಿ ಕರೆದು ಮಾತನಾಡಿದ್ದಾರೆ. ಪಕ್ಷ ಸಂಘಟನೆ ಹೇಗೆ ನಡೆಯುತ್ತಿದೆ ಎಂಬ ವಿಷಯವನ್ನೂ ಚರ್ಚೆ ಮಾಡಿದ್ದೇವೆ. ಸರ್ಕಾರದ ಕಾರ್ಯವೈಖರಿ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇವೆ" ಎಂದು ಹೇಳಿದರು.

"ಭಿನ್ನರು ಇಂದು ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿಲ್ಲ ಅಂದರೆ ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಅಂತ ಅರ್ಥ. ಭಿನ್ನಮತ ಇದ್ದರೆ ಅವರು ಜೆ.ಪಿ ನಡ್ಡಾ ಅವರನ್ನು ಭೇಟಿ ಆಗುತ್ತಿದ್ದರು" ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ನಾಯಕರ ಜೊತೆ ನಡ್ಡಾ ಚರ್ಚೆ: ಅಂತ್ಯವಾಗುವುದೇ ಬಣ ರಾಜಕೀಯ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.