ETV Bharat / state

ಏ.15ರಂದು ಶೆಟ್ಟರ್, ಮೃಣಾಲ್​ ನಾಮಪತ್ರ ಸಲ್ಲಿಕೆ: ಎರಡೂ ಪಕ್ಷಗಳಿಂದ ಶಕ್ತಿ ಪ್ರದರ್ಶನ ನಿರೀಕ್ಷೆ - lokashab elcetion - LOKASHAB ELCETION

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ 15ರಂದು ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ನಡೆಸಿದ್ದಾರೆ.

ಜಗದೀಶ್​ ಶೆಟ್ಟರ್ ಮತ್ತು ಮೃಣಾಲ್ ಹೆಬ್ಬಾಳ್ಕರ್

author img

By ETV Bharat Karnataka Team

Published : Apr 9, 2024, 10:52 PM IST

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್​ ಹೆಬ್ಬಾಳ್ಕರ್ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಏಪ್ರಿಲ್ 15 ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದು, ಅಂದು ಬೃಹತ್ ರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.

ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಪೂಜೆ ಸಲ್ಲಿಸಲಿದ್ದಾರೆ. ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಲೋಕೋಪಯೋಗಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜೊತೆಗೆ ರಾಜ್ಯದ ಕೆಲವು ನಾಯಕರೂ ಆಗಮಿಸುವ ನಿರೀಕ್ಷೆ ಇದೆ.

ಮೃಣಾಲ್​ ಹೆಬ್ಬಾಳ್ಕರ್ ಪರವಾಗಿ ಕ್ಷೇತ್ರದಲ್ಲಿ ಈಗಾಗಲೇ ಅಬ್ಬರದ ಪ್ರಚಾರ ನಡೆದಿದ್ದು, ಕ್ಷೇತ್ರದ ಎಲ್ಲ ತಾಲೂಕು ಮತ್ತು ಹೋಬಳಿಗಳಲ್ಲಿ ಕಾರ್ಯಕರ್ತರ ಸಭೆ, ಸಾರ್ವಜನಿಕರ ಭೇಟಿ ಮಾಡಲಾಗುತ್ತಿದೆ. ಮನೆ ಮಗನಾಗಿರುವ ನನಗೆ ಮತ ನೀಡುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಶಿರ್ವಾದ ಮಾಡಿ. ಜಿಲ್ಲೆಗೆ ಹಲವಾರು ಯೋಜನೆಗಳನ್ನು ತರುವ, ಮುಖ್ಯವಾಗಿ ಯುವಕರಿಗೆ ಉದ್ಯೋಗ ಒದಗಿಸುವ ದಿಸೆಯಲ್ಲಿ ಹಲವಾರು ಕನಸುಗಳನ್ನು ಕಟ್ಟಿಕೊಂಡಿದ್ದೇನೆ. ಎಂಜಿನಿಯರಿಂಗ್ ಪದವೀಧರನಾಗಿರುವ ನನ್ನನ್ನು ಬೆಂಬಲಿಸುವ ಮೂಲಕ ನಿಮ್ಮ ಸೇವೆಗೆ ಅವಕಾಶ ಕೊಡಿ ಎಂದು ಮೃಣಾಲ್​ ಹೆಬ್ಬಾಳ್ಕರ್ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಸೋಮವಾರ ನಾಮಪತ್ರ ಸಲ್ಲಿಕೆ ನಂತರ ಎರಡನೇ ಸುತ್ತಿನ ಪ್ರಚಾರ ಕಾರ್ಯವನ್ನು ಆರಂಭಿಸಲಾಗುವುದು. ಪಕ್ಷದ ಸ್ಟಾರ್ ಪ್ರಚಾರಕರು ಸೇರಿದಂತೆ ವಿವಿಧ ಮುಖಂಡರು ಪ್ರಚಾರಕ್ಕೆ ಆಗಮಿಸಲಿದ್ದಾರೆ. ಈ ಬಾರಿ ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶೆಟ್ಟರ್ ನಾಮಪತ್ರವೂ 15ಕ್ಕೆ : ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಕೂಡ 15ರಂದೇ ನಾಮಪತ್ರ ಸಲ್ಲಿಸಲಿದ್ದು, ಜಿಲ್ಲೆಯ ಬಿಜೆಪಿ ನಾಯಕರು, ಕೆಲ ರಾಜ್ಯ ನಾಯಕರು ಅಂದು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಕೂಡ ಅಂದು ಬಹಳಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡುವ ಸಾಧ್ಯತೆಯಿದೆ. ಈ ಕುರಿತು ಹೆಚ್ಚಿನ‌ ವಿವರಗಳು ಗೊತ್ತಾಗಬೇಕಿದೆ.

ಇದನ್ನೂ ಓದಿ : ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಅಲ್ಲ, ಬಣಜಿಗ: ಮಾಜಿ ಸಚಿವ ನಿರಾಣಿ‌ ಹೊಸ ಬಾಂಬ್ - Murugesh Nirani

ETV Bharat Logo

Copyright © 2025 Ushodaya Enterprises Pvt. Ltd., All Rights Reserved.