ETV Bharat / state

ವರಿಷ್ಠರು ಸೂಚಿಸಿದ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ: ಜಗದೀಶ್​ ಶೆಟ್ಟರ್ - Former CM Jagdish Shettar

ನಾನು ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಪಕ್ಷದ ವರಿಷ್ಠರು ನನ್ನೊಂದಿಗೆ ಚರ್ಚಿಸಿಲ್ಲ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹೇಳಿದರು.

former-cm-jagdish-shettar-reaction-on-contesting-lok-sabha-election
ವರಿಷ್ಠರು ಸೂಚಿಸಿದ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ: ಜಗದೀಶ್​ ಶೆಟ್ಟರ್
author img

By ETV Bharat Karnataka Team

Published : Mar 10, 2024, 7:31 PM IST

'ವರಿಷ್ಠರು ಸೂಚಿಸಿದ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ'

ಹುಬ್ಬಳ್ಳಿ: ಪಕ್ಷದ ವರಿಷ್ಠರು ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪನವರು ಎಂಪಿ ಟಿಕೆಟ್​ಗೆ ತಮ್ಮ ಹೆಸರು ಶಿಫಾರಸು ಮಾಡಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪಕ್ಷ ಸೂಚಿಸಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ, ಇಲ್ಲವೇ ಚುನಾವಣಾ ಪ್ರಚಾರ ಮಾಡಬೇಕು, ಪಕ್ಷ ಸಂಘಟನೆ ಮಾಡಬೇಕೆಂದರೆ ಅದಕ್ಕೂ ಸಿದ್ಧನಿದ್ದೇನೆ. ಇದನ್ನು ನಾನು ಬಿಜೆಪಿಗೆ ಮರು ಸೇರ್ಪಡೆಯದಾಗಿನಿಂದ ಹೇಳುತ್ತಿದ್ದೇನೆ ಎಂದರು.

ನಾನು ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂದು ವರಿಷ್ಠರು ನನ್ನ ಬಳಿ ಚರ್ಚೆ ಮಾಡಿಲ್ಲ. ಅವರು ಯಾವ ಕ್ಷೇತ್ರ ಸೂಚಿಸುತ್ತಾರೋ ಅಲ್ಲಿಂದ ಸ್ಪರ್ಧೆ ಮಾಡುತ್ತೇನೆ. ಇದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹೇಳಿದರು. ಹಿರಿಯ ಸಂಸದರಿಗೆ ಟಿಕೆಟ್ ಕೈತಪ್ಪುವ ವಿಚಾರಕ್ಕೆ, ಇದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಆದರೆ ದೆಹಲಿ ಮಟ್ಟದಲ್ಲೇನು ಚರ್ಚೆಯಾಗುತ್ತಿದೆ ಎಂದು ಯಾರಿಗೂ ಗೊತ್ತಿಲ್ಲ. ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್​ ಆಗುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕ್ರಮಗಳಿಗೆ ಆಹ್ವಾನ ನೀಡದ ವಿಚಾರವಾಗಿ ಮಾತನಾಡಿದ ಅವರು, ಆಹ್ವಾನದ ವಿಚಾರವಾಗಿ ನಾನು ಏನನ್ನೂ ಮಾತನಾಡಲ್ಲ, ಅದಕ್ಕೆ ಮೌನವೇ ಉತ್ತರ ಎಂದು ಹೇಳಿದರು.

ಇದನ್ನೂ ಓದಿ: 'ಶೋಭಾ ಕರಂದ್ಲಾಜೆಗೆ ಟಿಕೆಟ್​ ನೀಡಬಾರದು': ಚಿಕ್ಕಮಗಳೂರಿನಲ್ಲಿ ಬಿಜೆ‍ಪಿ ಕಾರ್ಯಕರ್ತರ ಆಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.