ETV Bharat / state

ಹೋಂ ಸ್ಟೇ ದಾಳಿ ಆರೋಪಿಗಳ ಖುಲಾಸೆ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸಲಿ: ಜನವಾದಿ ಮಹಿಳಾ ಸಂಘಟನೆ - Mangaluru Homestay Attack Case

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಆರೋಪಿಗಳು ಖುಲಾಸೆಯಾಗಿರುವುದು ಸರ್ಕಾರದ ವೈಫಲ್ಯ ಎಂದು ಜನವಾದಿ ಮಹಿಳಾ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

author img

By ETV Bharat Karnataka Team

Published : Aug 7, 2024, 9:56 PM IST

janavadi women organisation
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ETV Bharat)

ಬೆಂಗಳೂರು: 2012 ಜುಲೈ 28ರಂದು ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇನಲ್ಲಿದ್ದ ಯುವತಿಯರ ಮೇಲೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತೀವ್ರ ಹಲ್ಲೆ ನಡೆಸಿದ್ದರು. ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ತೀವ್ರ ಆತಂಕ ಉಂಟುಮಾಡಿದೆ. ಇಲ್ಲಿ ಸರ್ಕಾರದ ವೈಫಲ್ಯವಿದೆ ಎಂದು ಜನವಾದಿ ಮಹಿಳಾ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಡಾ. ಮೀನಾಕ್ಷಿಬಾಳಿ, ಮಹಿಳಾ ಸ್ವಾತಂತ್ರ್ಯ ವಿರೋಧಿ, ಪ್ರಗತಿ ವಿರೋಧಿ ಹಿಂದುತ್ವ ವಾದವನ್ನು ಮುಂದೊತ್ತಲು ಪ್ರಯತ್ನ ಮಾಡುತ್ತಿರುವ ಶಕ್ತಿಗಳಿಂದ ಹೋಂ ಸ್ಟೇ ದಾಳಿ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಅಲ್ಲಿದ್ದ ಯುವತಿಯರೊಂದಿಗೆ ಅವರು ಅಸಭ್ಯವಾಗಿ ನಡೆದುಕೊಂಡಿದ್ದು, ಲೈಂಗಿಕ ಕಿರುಕುಳ ನೀಡಿದ್ದರು. ಈ ವಿಚಾರವನ್ನು ಪ್ರಕರಣದ ವಿಚಾರಣೆಯ ಸಮಯದಲ್ಲಿ ದಾಳಿಗೊಳಗಾದ ಯುವತಿ ಸಾಕ್ಷಿ ಹೇಳಿದ್ದು, ನ್ಯಾಯಾಲಯದ ಗಮನದಲ್ಲಿದೆ ಎಂದು ತಿಳಿಸಿದ್ದಾರೆ.

ಘಟನೆ ನಡೆದ ನಂತರ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಹಲ್ಲೆ ಮಾಡಿದವರನ್ನು ಬಂಧಿಸುವ ಬದಲು ಹಲ್ಲೆಗೊಳಗಾದವರನ್ನು ಕೊಠಡಿಯಲ್ಲಿ ಕೂಡಿ ಹಾಕಿ, ಹಲ್ಲೆಗೈದವರನ್ನು ಹೊರ ಕಳಿಸಿದ್ದರು. ಈ ಎಲ್ಲ ದೃಶ್ಯಾವಳಿಗಳು ದೇಶಾದ್ಯಂತ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದವು. ಇಷ್ಟೆಲ್ಲಾ ನಡೆದ ನಂತರ ಆರೋಪಿಗಳು ಖುಲಾಸೆಯಾಗುತ್ತಾರೆಂದರೆ ಇದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ. ಆದ್ದರಿಂದ ಸರ್ಕಾರ ಕೂಡಲೇ ಮೇಲ್ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲ ಆರೋಪಿಗಳು ಖುಲಾಸೆ - Mangaluru Homestay Attack Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.