ರಾಮನಗರ: ಮುಡಾ ಹಗರಣ ವಿರೋಧಿಸಿ ಜೆಡಿಎಸ್-ಬಿಜೆಪಿ ನಡೆಸುತ್ತಿರುವ ಮೈತ್ರಿ ಪಾದಯಾತ್ರೆಯ ವೇಳೆ ಇಂದು ಜೆಡಿಎಸ್ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರಿನ ಗೌರಮ್ಮ ಮೃತರು. ತೀವ್ರ ಆಯಾಸದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಇದೇ ವೇಳೆ, ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದು, ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಯಾದಗಿರಿ: ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು - PSI died of heart attack