ETV Bharat / state

ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು ಬಂದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ - DK Shivakumar

author img

By ETV Bharat Karnataka Team

Published : Jun 18, 2024, 11:06 PM IST

ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ. ಇವಿಎಂ ತೊಲಗಬೇಕು, ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇವಿಎಂ ತೊಲಗಬೇಕು, ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ” ಎಂದು ತಿಳಿಸಿದರು.

ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದರು.

ಬಿಬಿಎಂಪಿ ಆಸ್ತಿಗಳನ್ನು ಸರ್ಕಾರ ಅಡವಿಡುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾವ ಅಡಮಾನವೂ ಇಲ್ಲ. ನಮ್ಮ ಬಿಬಿಎಂಪಿಯ ಆಸ್ತಿಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ, ಗುತ್ತಿಗೆ ನವೀಕರಣ ಸೇರಿದಂತೆ ಇತರೇ ಕೆಲಸಗಳಿಗಾಗಿ ನಮ್ಮ ಅಂದಾಜು ವಿಭಾಗವನ್ನು ಭದ್ರಗೊಳಿಸಿ ದಾಖಲೆಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಅಡಮಾನವೂ ಇಲ್ಲ, ಏನೂ ಇಲ್ಲ ಎಂದು ಹೇಳಿದರು.

ಬಿಬಿಎಂಪಿಯ ಜಾಹೀರಾತು ನಿಯಮಾವಳಿ ಬಗ್ಗೆ ಪ್ರತಿಕ್ರಿಯಿಸಿ, ಮುಂದಿನ ಒಂದು ವಾರಗಳ ಒಳಗಾಗಿ ನೂತನ ಜಾಹೀರಾತು ನೀತಿ ಜಾರಿಗೆ ತರಲಾಗುವುದು. ಮೆಟ್ರೋ ಪಿಲ್ಲರ್​ಗಳನ್ನು ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದ ಅವರು, ಬೃಹತ್ ಹೋರ್ಡಿಂಗ್​ಗಳಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಎಂಬ ಪ್ರಶ್ನೆಗೆ ಉತ್ತರಿಸಿ, ಇದರ ಬಗ್ಗೆ ಈಗಾಗಲೇ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಥಮ ಹಂತವಾಗಿ ಫ್ಲೆಕ್ಸ್ ನಿಷೇಧಿಸಲಾಗಿದೆ. 15 ಸಾವಿರಕ್ಕೂ ಹೆಚ್ಚು ಫೆಕ್ಸ್ ಗಳನ್ನು ತೆರವುಗೊಳಿಸಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು.

ಲಂಡನ್ ಮಾದರಿಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅದರ ಬಗ್ಗೆ ಗೊತ್ತಿಲ್ಲ. ಶೀಘ್ರದಲ್ಲೇ ಮೀಸಲಾತಿ ನಿಗದಿ ಮಾಡಿ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ ಅವರು, ದರ್ಶನ್ ಸೇರಿದಂತೆ ಅನೇಕರು ರಾಜಕಾಲುವೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದಿರುವ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿ, ನಾನು, ನೀನು ಯಾರೇ ತಡೆಯಾಜ್ಞೆ ತಂದಿದ್ದರು ತೆರವುಗೊಳಿಸಲಾಗುವುದು ಎಂದು ಹೇಳಿದರು.

ಮೇಕೆದಾಟು ವಿಚಾರಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ ವಿಚಾರವಾಗಿ ಮಾತನಾಡಿ, ನಮ್ಮ ನೀರು ನಮ್ಮ ಹಕ್ಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನ್ಯಾಯಾಲಯ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಕೇಂದ್ರ ಸರ್ಕಾರ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಇದರಿಂದ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಮೇಕೆದಾಟು ಅಣೆಕಟ್ಟಿನಿಂದ ತಮಿಳುನಾಡಿಗೆ ನಿಗದಿಯಾಗಿರುವ ನೀರಿನ ಪಾಲನ್ನು ನೀಡಲು ಅನುಕೂಲವಾಗುತ್ತದೆ ಹೊರತು ನಮ್ಮ ಕರ್ನಾಟಕದ ಉಪಯೋಗಕ್ಕೆ ಬಳಸುವುದಿಲ್ಲ ಎಂದರು.

ಬೆಂಗಳೂರು ಸುತ್ತಮುತ್ತಲಿನ 20 ಸಾವಿರ ಎಕರೆ ಜಮೀನು ಮಾರಾಟದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಸುಳ್ಳು ಸುದ್ದಿ. 20 ಸಾವಿರ ಎಕರೆ ಜಮೀನು ಎಲ್ಲಿದೆ. ನಾವು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣದ ಸಲುವಾಗಿ ಭೂಸ್ವಾಧೀನದ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. 60/40 ಹಂಚಿಕೆಯ ಸೂತ್ರದ ಆಧಾರದ ಮೇಲೆ ನಿರ್ಮಾಣ ಮಾಡಲು ಹೊರಟಿದ್ದೇವೆ. ಇದರಿಂದ ರೈತರಿಗೂ ಹೆಚ್ಚು ಅನುಕೂಲವಾಗಲಿದೆ. ಇದರಿಂದ ರೈತರಿಗೆ 5 ಕೋಟಿಯಷ್ಟು ಪರಿಹಾರ ದೊರೆಯುತ್ತದೆ. ಇದರ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ: ಗ್ಯಾರಂಟಿ ಯೋಜನೆಗಳು ತಲುಪದೆ ಇರುವವರಿಗೆ ಹಾಗೂ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಕಾರಣಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿತ್ತು. ಚುನಾವಣಾ ಕಾರಣಕ್ಕೆ ಒಂದಷ್ಟು ಜನರು ಅಧಿಕಾರ ತೆಗೆದುಕೊಂಡಿರಲಿಲ್ಲ. ಹಿರಿಯ ನಾಯಕರಾದ ಜಿ.ಕೃಷ್ಣಪ್ಪ ಅವರು ಬೆಂಗಳೂರಿನ ಸಮಿತಿಯ ನೇತೃತ್ವ ವಹಿಸಿಕೊಂಡಿದ್ದಾರೆ. ಮುಂದಿನ 15 ದಿನಗಳ ಒಳಗಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲಾಗುವುದು ಎಂದರು.

ಇದನ್ನೂ ಓದಿ: ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ ?: ಡಿಸಿಎಂ ಡಿ ಕೆ ಶಿವಕುಮಾರ್ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.