ETV Bharat / state

ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಗೆಲುವು - MLC Election Results - MLC ELECTION RESULTS

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ​ ಅಭ್ಯರ್ಥಿ ಭೋಜೇಗೌಡ 9,829 ಮತಗಳನ್ನು ಪಡೆಯುವ ಮೂಲಕ ಗೆದ್ದಿದ್ದಾರೆ.

JDS candidate Bhoje Gowda win in South-West teachers election.
ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್​ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. (ETV Bharat)
author img

By ETV Bharat Karnataka Team

Published : Jun 6, 2024, 7:43 PM IST

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತದಲ್ಲೇ 5,267 ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ 4,562 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ, ಉಡುಪಿ, ಜಿಲ್ಲೆಗಳ ವ್ಯಾಪ್ತಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಈ ಚುನಾವಣೆಯಲ್ಲಿ ಒಟ್ಟು 19,479 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 821 ಮತಗಳು ಅಸಿಂಧುಗೊಂಡಿದ್ದವು. 18,658 ಸಿಂಧು ಮತಗಳ ಪೈಕಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಭೋಜೇಗೌಡ 9,829 ಮತ ಗಳಿಸಿ ಗೆಲುವಿನ ನಗೆ ಬೀರಿದರು.

ಮೈತ್ರಿ ಫಲ ಕೊಟ್ಟಿದೆ - ಭೋಜೇಗೌಡ: ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ವಿಜೇತ ಅಭ್ಯರ್ಥಿ ಭೋಜೇಗೌಡ, ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವು ತಂದುಕೊಟ್ಟ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಅರ್ಪಣೆ ಮಾಡುತ್ತೇನೆ ಎಂದು ಹೇಳಿದರು.

ಶಿಕ್ಷಕರು ನನ್ನ ಮೇಲೆ ವಿಶ್ವಾಸವಿಟ್ಟು ಮೊದಲ ಪ್ರಾಶಸ್ತ್ಯ ಮತವನ್ನು ಕೊಟ್ಟಿದ್ದಾರೆ. ನನಗೆ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಕಳೆದ ಬಾರಿ ಏಕಾಂಗಿಯಾಗಿ ಜೆಡಿಎಸ್​ನಿಂದ ನಿಂತು ಗೆಲುವು ಸಾಧಿಸಿದ್ದೆ. ಈ ಬಾರಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಒಟ್ಟಾಗಿ ಸ್ಪರ್ಧೆ ಮಾಡಿರೋದು ಫಲ ನೀಡಿದೆ. ನನ್ನ ಗೆಲುವಿಗೆ ಕಾರಣರಾದರ ಜೆಡಿಎಸ್-ಬಿಜೆಪಿಯ ಎಲ್ಲ ನಾಯಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಮತ್ತೊಂದೆಡೆ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಸಹ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮೈತ್ರಿ ಅಭ್ಯರ್ಥಿ ವಿವೇಕಾನಂದ 10,823 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ 6,201 ಮತಗಳನ್ನು ಪಡೆದಿದ್ದಾರೆ. ವಾಟಾಳ್ ನಾಗರಾಜ್ ಅವರಿಗೆ 84 ಮತಗಳು ಬಂದಿದ್ದರೆ, 1,049 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ: ದಕ್ಷಿಣ ಶಿಕ್ಷಕರ ಕ್ಷೇತ್ರ: ಮೊದಲ ಪ್ರಾಶಸ್ತ್ಯದ ಮತದಲ್ಲೇ ಮೈತ್ರಿ ಅಭ್ಯರ್ಥಿಗೆ ದಾಖಲೆಯ ಗೆಲುವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.