ETV Bharat / state

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ?: ಕೆಲ ಹೊತ್ತಲ್ಲೇ ಬಿಎಸ್​ವೈ ನಿವಾಸದಲ್ಲಿ ಘೋಷಣೆ

ಚನ್ನಪಟ್ಟಣ ಉಪಚುನಾವಣೆಗೆ ಕೆಲ ಹೊತ್ತಲ್ಲೇ ಜೆಡಿಎಸ್​ ಅಭ್ಯರ್ಥಿಯ ಹೆಸರು ಘೋಷಣೆ ಆಗಲಿದೆ. ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ‌.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ.

by election
ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Oct 24, 2024, 3:03 PM IST

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಹೆಸರು ಘೋಷಣೆಯಷ್ಟೇ ಬಾಕಿ ಇದೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣದಿಂದ ನಿಖಿಲ್ ಅವರನ್ನೇ ಕಣಕ್ಕಿಳಿಸಬೇಕು. ಸಿ.ಪಿ. ಯೋಗೇಶ್ವರ್​​ಗೆ ನಿಖಿಲ್ ಕುಮಾರಸ್ವಾಮಿ ಸಮರ್ಥ ಅಭ್ಯರ್ಥಿ. ಅವರನ್ನೇ ಕಣಕ್ಕಿಳಿಸಬೇಕೆಂದು ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಇದೀಗ, ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಎಳೆದಿದ್ದು, ಇಂದು ಮಧ್ಯಾಹ್ನ 3:30ಕ್ಕೆ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ.

ಬಿಎಸ್​ವೈ ನಿವಾಸದಲ್ಲಿ ಘೋಷಣೆ: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ‌. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದಲ್ಲಿ ಮಧ್ಯಾಹ್ನ 3.30ಕ್ಕೆ ಉಭಯ ನಾಯಕರು ಜಂಟಿ ಮಾಧ್ಯಮಗೋಷ್ಟಿ ನಡೆಸಿ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್​ ನೀಡುವಂತೆ ಒತ್ತಾಯ: ಜೆಪಿ ಭವನದಲ್ಲಿನ ಸಭೆಗೆ ಕುಮಾರಸ್ವಾಮಿ ಬರುತ್ತಿದ್ದಂತೆ ಅವರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ನಿಖಿಲ್ ಅವರ ಹೆಸರು ಘೋಷಣೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಒಂದು ಹಂತದಲ್ಲಿ ಜೆಪಿ ಭವದಲ್ಲಿ ಹೈಡ್ರಾಮವೇ ನಡೆದಿದೆ. ನಿಖಿಲ್ ಅವರೇ ಅಭ್ಯರ್ಥಿ ಆಗಬೇಕೆಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ನಂತರ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದಾಗ, ಅವರನ್ನು ಅಡ್ಡಗಟ್ಟಿದ ಚನ್ನಪಟ್ಟಣ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಒತ್ತಾಯ ಮಾಡಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದ ಮಲ್ಲೇಶ್ ಬಾಬು, ರಾಜ್ಯ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕರಾದ ಕರಿಯಮ್ಮ, ನೇಮಿರಾಜ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಗೋವಿಂದರಾಜ್, ಜವರಾಯಿಗೌಡ ಹಾಗೂ ಮುಖಂಡರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಸಾ.ರಾ. ಮಹೇಶ್, ನಿಖಿಲ್ ಅವರಿಗೆ ಟಿಕೆಟ್ ಕೊಡಬೇಕೆಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರಿಗೆ ಕೊಡಬೇಕೆಂದು ನಿಖಿಲ್ ಅಂತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಜೊತೆ ನಿಖಿಲ್ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಬೃಹತ್ ಮೆರವಣಿಗೆ: ಸಿ.ಪಿ. ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.