ETV Bharat / state

ಮೈಸೂರು ಪಾದಯಾತ್ರೆ ಮುಂದೂಡಿಕೆಗೆ ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಿರ್ಣಯ: ಜಿ.ಟಿ. ದೇವೇಗೌಡ - BJP JDS padayatra postpone - BJP JDS PADAYATRA POSTPONE

''ರಾಜ್ಯದ ಹಲವೆಡೆ ಮಳೆ ಹಿನ್ನೆಲೆ ಕೃಷಿ ಚಟುವಟಿಕೆ ಪ್ರಾರಂಭವಾಗಿದೆ. ಜೊತೆಗೆ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಸಂಕಷ್ಟಕ್ಕೆ ಒಳಗಾಗಿರುವುದರಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಮುಂದೂಡಿಕೆ ಮಾಡುವ ಕುರಿತು ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಿರ್ಣಯ ಕೈಗೊಂಡಿದೆ'' ಎಂದು ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

BJP JDS padayatra postpone  GT Devegowda  JDS core committee  Bengaluru
ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ- ಜೆಡಿಎಸ್‌ ಹಮ್ಮಿಕೊಂಡ ಪಾದಯಾತ್ರೆ ಮುಂದೂಡಿಕೆಗೆ ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಿರ್ಣಯ: ಜಿ.ಟಿ. ದೇವೇಗೌಡ (ETV Bharat)
author img

By ETV Bharat Karnataka Team

Published : Jul 30, 2024, 9:06 PM IST

ಜೆಡಿಎಸ್​ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಮಾತನಾಡಿದರು. (ETV Bharat)

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಪ್ರಾರಂಭವಾದರೆ, ಕೆಲವೆಡೆ ತೀವ್ರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಸಂಕಷ್ಟಕ್ಕೆ ಒಳಗಾಗಿರುವುದರಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ - ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಮುಂದೂಡಿಕೆ ಮಾಡುವ ಕುರಿತು ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಿರ್ಣಯ ಕೈಗೊಂಡಿದೆ.

ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮುಡಾ ಹಗರಣದ ವಿರುದ್ಧ ಆ.3ರಿಂದ ಬೆಂಗಳೂರಿನಿಂದ ಮೈಸೂರಿನವರಗೆ ನಡೆಸಲು ನಿರ್ಣಯ ಕೈಗೊಂಡಿರುವ ಪಾದಯಾತ್ರೆಯನ್ನು ತಾತ್ಕಾಲಿಕ ಮುಂದೂಡುವಂತೆ ಬಿಜೆಪಿ ಮತ್ತು ಜೆಡಿಎಸ್‌ ವರಿಷ್ಠರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ''ಪಕ್ಷದ ಸ್ಥಳೀಯ ನಾಯಕರು ಪಾದಯಾತ್ರೆ ಮುಂದೂಡಿಕೆಗೆ ತೀವ್ರ ಒತ್ತಡ ಹಾಕಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ರೈತರು ಉಳುಮೆ ಕಾರ್ಯದಲ್ಲಿ ತೊಡಗಿರುತ್ತಾರೆ. ಅಲ್ಲದೇ, ಕೆಲವೆಡೆ ತೀವ್ರತರ ಮಳೆಯಿಂದಾಗಿ ಪ್ರವಾಹ ಭೀತಿ ತಲೆದೋರಿದ್ದು, ಜನತೆ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಜನಪ್ರತಿನಿಧಿಗಳಾಗಿ ಜನತೆಯ ಜೊತೆ ನಿಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ದಿನವನ್ನು ಮುಂದೂಡಿಕೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ'' ಎಂದು ತಿಳಿಸಿದರು.

ಕೋರ್​​​​​ ಕಮಿಟಿಯಲ್ಲಿ ವಿಸ್ತೃತ ಚರ್ಚೆ: ''ಪಕ್ಷದ ಸ್ಥಳೀಯ ಮುಖಂಡ ಅಭಿಪ್ರಾಯಗಳ ಕುರಿತು ಕೋರ್‌ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಅಂತೆಯೇ ಕೇಂದ್ರ ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ, ಪಕ್ಷದ ವರಿಷ್ಠರಾದ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಾದಯಾತ್ರೆ ದಿನಾಂಕವನ್ನು ಮುಂದೂಡಿಕೆ ಮಾಡುವಂತೆ ಮನವಿ ಮಾಡಲಾಗುವುದು. ಮುಡಾ ವಿಚಾರ ಸಂಬಂಧ ಕಾಂಗ್ರೆಸ್‌ ವಿರುದ್ಧ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಹಿತಾಸಕ್ತಿಯಿಂದಾಗಿ ಪಾದಯಾತ್ರೆ ಮುಂದೂಡಿಕೆ ಮಾಡುವುದು ಒಳಿತು ಎಂಬುದು ಕೋರ್‌ ಕಮಿಟಿಯ ನಿರ್ಣಯವಾಗಿದೆ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್‌ ವರಿಷ್ಠರ ಮನವರಿಕೆ ಮಾಡಿಕೊಡಲಾಗುವುದು. ಪಕ್ಷದ ಸ್ಥಳೀಯ ಅಭಿಪ್ರಾಯಗಳನ್ನು ಮುಂದಿಟ್ಟು ತಿಳಿಸಲಾಗುವುದು'' ಎಂದರು.

''ಮುಂಗಾರು ಅಧಿವೇಶನದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣ ಸಂಬಂಧ ಸರ್ಕಾರ ವಿರುದ್ಧ ಬಿಜೆಪಿ - ಜೆಡಿಎಸ್‌ ಸಮರ್ಥವಾಗಿ ಹೋರಾಟ ನಡೆಸಿದೆ. ಪ್ರತಿಪಕ್ಷಗಳ ಹೋರಾಟವನ್ನು ಲೆಕ್ಕಿಸದೇ ಸರ್ಕಾರ ಸದನವನ್ನು ಅರ್ಧಕ್ಕೆ ಮೊಟಕುಗೊಳಿಸಿತು. ಹೀಗಾಗಿ ಸರ್ಕಾರದ ನಡೆಯನ್ನು ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಎರಡು ಪಕ್ಷದ ಮುಖಂಡರು ಪಾದಯಾತ್ರೆ ಕೈಗೊಳ್ಳುವ ನಿರ್ಣಯ ಕೈಗೊಂಡರು. ತೀರ್ಮಾನ ಕೈಗೊಳ್ಳುವ ವೇಳೆ ಮಳೆಯ ಅಬ್ಬರ ಇರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ. ಮಳೆಯ ತೀವ್ರತೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂದೂಡಿಕೆಗೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ'' ಎಂದು ಹೇಳಿದರು.

ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ''ಕೇರಳದಲ್ಲಿ ಮಳೆಯಿಂದ ಜನರ ಜೀವನ ಸಂಕಷ್ಟಕ್ಕೆ ಈಡಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಸಂಕಷ್ಟಕ್ಕೆ ಸಿಲುಕುವ ಸ್ಥಿತಿ ಇದೆ. ಪಾದಯಾತ್ರೆಗೆ ಸಾಕಷ್ಟು ಜನ ಬರ್ತಾರೆ. ಅವರ ಆರೋಗ್ಯವು ಮುಖ್ಯ ಆದ್ದರಿಂದ ಪಾದಯಾತ್ರೆ ಮುಂದೂಡಿಕೆ ಮಾಡಲು ಹೇಳುತ್ತೇವೆ'' ಎಂದು ತಿಳಿಸಿದರು.

ಈ ವೇಳೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಮಾಜಿ ಶಾಸಕ ಸಾ.ರಾ. ಮಹೇಶ್‌, ಎಚ್‌.ಕೆ. ಕುಮಾರಸ್ವಾಮಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗುಂಡ್ಲುಪೇಟೆ - ಕೇರಳ ರಸ್ತೆ ಸಂಪರ್ಕ ಬಂದ್: ಜಿಲ್ಲಾಡಳಿತದಿಂದ ಹೆಲ್ಪ್​ಲೈನ್ ಆರಂಭ - Gundlupet Kerala road closed

ETV Bharat Logo

Copyright © 2024 Ushodaya Enterprises Pvt. Ltd., All Rights Reserved.