ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ (ಜೆಡಿಎಸ್) ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಲಾಗಿದೆ.
-
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ @PNimmondige ಅಥವಾ @INCKarnataka ಪಕ್ಷದ ಜಹಗೀರಲ್ಲ. ಈ…
— Janata Dal Secular (@JanataDal_S) January 21, 2024 " class="align-text-top noRightClick twitterSection" data="
">ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ @PNimmondige ಅಥವಾ @INCKarnataka ಪಕ್ಷದ ಜಹಗೀರಲ್ಲ. ಈ…
— Janata Dal Secular (@JanataDal_S) January 21, 2024ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ @PNimmondige ಅಥವಾ @INCKarnataka ಪಕ್ಷದ ಜಹಗೀರಲ್ಲ. ಈ…
— Janata Dal Secular (@JanataDal_S) January 21, 2024
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ ಅಥವಾ ಕಾಂಗ್ರೆಸ್ ಪಕ್ಷದ ಜಹಗೀರಲ್ಲ. ಈ ಅಂಶವನ್ನು ಕಾಂಗ್ರೆಸ್ ಗೂಂಡಾಗಳು ಅರ್ಥ ಮಾಡಿಕೊಂಡರೆ ಒಳಿತು.
ಹಿರಿಯ ಸಹಕಾರಿ ಧುರೀಣರು, ಮಾಜಿ ಶಾಸಕರು ಹಾಗೂ ನಮ್ಮ ಗೌರವಾನ್ವಿತ ನಾಯಕರು, ಜನಾನುರಾಗಿಗಳು ಆಗಿದ್ದ ಕೆ.ಬಿ.ಪಿಳ್ಳಪ್ಪನವರ ವಿಗ್ರಹ ಸ್ಥಾಪನೆ ಮಾಡುವ ಬಗ್ಗೆ ಸ್ವತಃ ಶಾಸಕ ಪ್ರದೀಪ್ ಈಶ್ವರ್ ಅವರೇ ನೀಡಿದ್ದ ಭರವಸೆಯನ್ನು ಆರು ತಿಂಗಳಾದರೂ ಈಡೇರಿಸದ ಬಗ್ಗೆ ನಮ್ಮ ಕಾರ್ಯಕರ್ತ ಅಕಿಲ್ ರೆಡ್ಡಿ ಅವರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನಿಸುವುದೇ ಅಪರಾಧವೇ? ಶಾಸಕರು ಪ್ರಶ್ನಾತೀತರೇ? ಧಮ್ಕಿ, ಬೆದರಿಕೆ ಹಾಕಿರುವ ವರ್ತನೆ ಖಂಡನೀಯ.
ಕೀಳು ಭಾಷೆ, ವೈಯಕ್ತಿಕ ಚಾರಿತ್ರ್ಯಹರಣ ಸಹಿಸುವ ಪ್ರಶ್ನೆಯೇ ಇಲ್ಲ. ಅಲ್ಲದೆ, ಜಾತಿ ಹೆಸರು ತಂದು ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಯತ್ನಿಸಿರುವ ಈ ಗೂಂಡಾಗಳನ್ನು ಪೊಲೀಸರು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇವೆ. ಪಕ್ಷದ ಕಾರ್ಯಕರ್ತರು ಇಂತಹ ರೌಡಿ, ಗೂಂಡಾಗಳಿಗೆ ಹೆದರುವ ಅಗತ್ಯವಿಲ್ಲ. ನಿಮ್ಮೊಂದಿಗೆ ಜತೆ ಇಡೀ ಪಕ್ಷವಿದೆ.
ಪ್ರದೀಪ್ ಈಶ್ವರ್ರವರೇ, ಊರಿಗೆಲ್ಲಾ ಉಪದೇಶ ಮಾಡುತ್ತೀರಿ. ಆದರೆ, ನಿಮ್ಮ ಬೆಂಬಲಿಗರ ನಾಲಿಗೆಗಳು ಎಷ್ಟು ಹೊಲಸೆದ್ದು ಹೋಗಿವೆ ಎಂಬುದನ್ನು ಗಮನಿಸಿ. ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ ಸರಿ ದಾರಿಗೆ ತನ್ನಿ, ತಪ್ಪಿದರೆ ಅದನ್ನು ನಾವೇ ಮಾಡಬೇಕಾಗುತ್ತದೆ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ನಾಳೆ ಸರ್ಕಾರಿ ರಜೆ ನೀಡಿ: ಸಿಎಂಗೆ ಆರ್.ಅಶೋಕ್ ಪತ್ರ