ETV Bharat / state

ಡಿ.ಕೆ.ಶಿವಕುಮಾರ್​ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್: ಜೆಡಿಎಸ್​ ಗಂಭೀರ ಆರೋಪ - jds allegations - JDS ALLEGATIONS

ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್​ ವಿರುದ್ಧ ಜೆಡಿಎಸ್ ಗಂಭೀರ ಆರೋಪಗಳನ್ನು ಮಾಡಿದೆ.

ಜೆಡಿಎಸ್​ ಗಂಭೀರ ಆರೋಪ
ಜೆಡಿಎಸ್​ ಗಂಭೀರ ಆರೋಪ (ETV Bharat)
author img

By ETV Bharat Karnataka Team

Published : May 19, 2024, 11:03 PM IST

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​.ಡಿ. ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ವಕೀಲ ದೇವರಾಜೇಗೌಡರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.

'ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಹೌದಲ್ಲವೇ ಕಾಂಗ್ರೆಸ್ಸಿಗರೇ?, ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CD ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್?' ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವ ಸಂಚನ್ನು ಶಿವಕುಮಾರ್ ಗ್ಯಾಂಗ್ ಹೊಂದಿದೆ ಎಂದು ಜೆಡಿಎಸ್ ಆರೋಪಿಸಿದೆ.

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ. ಅಲ್ಲದೆ, ನೂರುಕೋಟಿ, ಪೆನ್ ಡ್ರೈವ್ ಗ್ಯಾಂಗ್, ಸ್ಲೀಪರ್ ಸೆಲ್, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದೆಲ್ಲಾ ಡಿಕೆಶಿಯನ್ನು ಕುಟುಕಿದೆ.

ಇದನ್ನೂ ಓದಿ: ಗೃಹ ಇಲಾಖೆ ಪರಮೇಶ್ವರ್ ಕೈಯಲ್ಲಿಲ್ಲ, ಬೇರೆ ಯಾರೋ ಹೈಜಾಕ್‌‌ ಮಾಡುತ್ತಿದ್ದಾರೆ: ಆರ್‌.ಅಶೋಕ್ ಆರೋಪ - R AShok Slam Congress

ETV Bharat Logo

Copyright © 2025 Ushodaya Enterprises Pvt. Ltd., All Rights Reserved.