ETV Bharat / state

ಚಿಕ್ಕಬಳ್ಳಾಪುರ: ಬೈಕ್ ಅಡ್ಡಗಟ್ಟಿ ಜೆಡಿಎಸ್ ಮುಖಂಡನ ಕೊಲೆ - ATTACK ON JDS LEADER

ಜೆಡಿಎಸ್ ಪಕ್ಷದ ಮುಖಂಡನೋರ್ವನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು, ಆತನನ್ನು ಕೊಲೆ ಮಾಡಿದ್ದಾರೆ.

ATTACK ON JDS LEADER
ಮೃತ ಜೆಡಿಎಸ್ ಮುಖಂಡ ವೆಂಕಟೇಶ್ (ETV Bharat)
author img

By ETV Bharat Karnataka Team

Published : Jan 4, 2025, 9:48 AM IST

ಚಿಕ್ಕಬಳ್ಳಾಪುರ: ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನೋರ್ವನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ. ವೆಂಕಟೇಶ್ (52) ಮೃತ ಜೆಡಿಎಸ್ ಪಕ್ಷದ ಮುಖಂಡ.

ತಮ್ಮನಾಯಕನಹಳ್ಳಿ ಗೇಟ್​ನಿಂದ ವೆಂಕಟೇಶ್​ ತನ್ನ ಸ್ವಗ್ರಾಮ ತಮ್ಮನಾಯಕನಹಳ್ಳಿ ಮನೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಮಚ್ಚು ಲಾಂಗುಗಳಿಂದ ಮನಸೋಇಚ್ಛೆ ದಾಳಿ ಮಾಡಿದ್ದಾರೆ. ಅಲ್ಲದೇ ಕೈಗೆ ಲಾಂಗ್​ಗಳಿಂದ ಹೊಡೆದಿದ್ದರಿಂದ ಕೈ ಸಹ ಕಟ್ ಆಗಿದೆ. ಮಾರಣಾಂತಿಕ ದಾಳಿ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವೆಂಕಟೇಶ್ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಎಸ್​ಪಿ ಹೇಳಿದ್ದೇನು? ದಾಳಿ ಮಾಡಿದವರು ಯಾರು ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶ್ವಾನದಳದ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಸ್ಥಳದಲ್ಲಿ ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

''ವೆಂಕಟೇಶ್ ಬಿಳಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಹರಿತವಾದ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವೆಂಕಟೇಶ್ ಅವರ ತಲೆ, ಮುಖ, ಕೈ ಮೇಲೆ ಮಾರಣಾಂತಿಕ ಹಲ್ಲೆ ಆಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹಲ್ಲೆ ಮಾಡಿದವರಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ'' ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ರೂಮ್‌ಮೇಟ್​ನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯ ಬಂಧನ - ROOMMATE MURDER

ETV Bharat Logo

Copyright © 2025 Ushodaya Enterprises Pvt. Ltd., All Rights Reserved.