ETV Bharat / state

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಹೆಚ್‌.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ - H D Kumaraswamy

ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಹೆಚ್.​ಡಿ.ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸಿದರು.

h-d-kumaraswamy
ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Jun 14, 2024, 3:52 PM IST

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ (ETV Bharat)

ಬೆಂಗಳೂರು: ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸಿದ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬೃಹತ್ ಸಂಖ್ಯೆಯಲ್ಲಿ ಸೇರಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಬಳಿಕ ಸಾದರಹಳ್ಳಿ ಗೇಟ್ ಬಳಿ ಜೆಡಿಎಸ್‌‍ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು.

ನಂತರ ಮಾತನಾಡುತ್ತಾ, ಲೋಕಸಭೆ ಫಲಿತಾಂಶ ಬಂದ ಮೇಲೆ ನರೇಂದ್ರ ಮೋದಿ ನೇತೃತ್ವದಲ್ಲಿ ​ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೋದಿ ಅವರ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ ಎಂದರು.

ಕೇಂದ್ರ ಮಂತ್ರಿಯಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಕೃಷಿ ಸಚಿವನಾಗಿ ಕೆಲಸ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದೆ ಎಂದು ಹೇಳಿದರು.

HD Kumaraswamy

ಜೆಡಿಎಸ್ ಪಕ್ಷವನ್ನು ಮುಗಿಸಿದ್ದೇವೆಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರೋದು ರಾಜಕೀಯ ಅಲ್ಲ. ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ಅವರು ನನಗೆ ಎರಡು ದೊಡ್ಡ ಖಾತೆ ಕೊಟ್ಟಿದ್ದಾರೆ. ನಾಡಿನ ಯುವಕರಿಗೆ ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತೇನೆ. ಬೇರೆ ಬೇರೆ ಕಡೆ ಕೆಲಸ ಕೊಡುವ ಅವಕಾಶ ಇದೆ. ನಾನು ಸಮಯ ವ್ಯರ್ಥ ಮಾಡುವುದಿಲ್ಲ. ಎಲ್ಲಾ ಇಲಾಖೆಯಲ್ಲಿ ನಮ್ಮ ರಾಜ್ಯದ ಸಮಸ್ಯೆಗೆ ಪರಿಹಾರ ತರುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆ ಕೊಡದಂತೆ ಕಾರ್ಖಾನೆ ಮಾಡುವ ಕೆಲಸ ಮಾಡುತ್ತೇನೆ ಎಂದರು.

ಇದೇ ವೇಳೆ, ನಾಲ್ಕು ದಿನ ದೆಹಲಿಯಲ್ಲಿ ಕೆಲಸ ಮಾಡುತ್ತೇನೆ. ಎರಡು ದಿನ ಕರ್ನಾಟಕದಲ್ಲಿ ಇರುತ್ತೇನೆ‌. ಅದರಲ್ಲೂ ಒಂದು ದಿನ ಮಂಡ್ಯದಲ್ಲಿ ಇರುತ್ತೇನೆ ಎಂದು ಹೇಳಿದರು.

ಎರಡು ಕ್ಷೇತ್ರದಲ್ಲಿ ನಮ್ಮ ಸ್ವಯಂಕೃತ ಅಪರಾಧದಿಂದ ಸೋತಿದ್ದೇವೆ. ಚುನಾವಣೆಯ ಸಮಯದಲ್ಲಿ ರಾಜಕಾರಣ ಯಾವ ರೀತಿ ನಡೆಯಿತು ಅಂತ ನಿಮಗೆಲ್ಲ ಗೊತ್ತಿದೆ. ಎಲ್ಲವನ್ನೂ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

h-d-kumaraswamy
ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ (ETV Bharat)

ನಂತರ ಜೆಡಿಎಸ್‌‍ ಕಚೇರಿ ಜೆ.ಪಿ.ಭವನಕ್ಕೆ ಕುಮಾರಸ್ವಾಮಿ ಆಗಮಿಸಿದರು. ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಸೇರಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿದ ಕುಮಾರಸ್ವಾಮಿ, ಶುಭ ಕೋರಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಮುಂಬರುವ ಚುನಾವಣೆಗಳಿಗೆ ಈಗಿನಿಂದಲೇ ತಯಾರಿ ನಡೆಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.

ಇದನ್ನೂ ಓದಿ: ಮುನ್ನೆಲೆಗೆ ಬಂದ ಜೆಡಿಎಸ್ ರಾಜ್ಯಾಧ್ಯಕ್ಷ ವಿಚಾರ: ಯಾರಿಗೆ ಸಿಗಲಿದೆ ಅಧ್ಯಕ್ಷ ಪಟ್ಟ? - JDS State President

ETV Bharat Logo

Copyright © 2024 Ushodaya Enterprises Pvt. Ltd., All Rights Reserved.