ETV Bharat / state

ಪೆನ್​ಡ್ರೈವ್ ಹಂಚಿದ ಕಿಡಿಗೇಡಿಗಳನ್ನ ಬಂಧಿಸಿ; ಮಹಿಳಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ ಮಹಿಳಾ ಘಟಕದ ನಿಯೋಗ - pen drive case - PEN DRIVE CASE

ಪೆನ್​ಡ್ರೈವ್ ಹಂಚಿದ ಆರೋಪಿಗಳನ್ನು ಬಂಧಿಸುವಂತೆ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಒತ್ತಾಯಿಸಿದರು.

JDS Womens Unit
ಮಹಿಳಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ ಮಹಿಳಾ ಘಟಕದ ನಿಯೋಗ (ETV Bharat)
author img

By ETV Bharat Karnataka Team

Published : May 8, 2024, 7:10 PM IST

ಬೆಂಗಳೂರು : ಅಪಾರ ಪ್ರಮಾಣದಲ್ಲಿ ಪೆನ್​ಡ್ರೈವ್​ಗಳನ್ನು ಹಂಚುವ ಮೂಲಕ ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಈ ಕುರಿತ ಎಲ್ಲ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಒತ್ತಾಯಿಸಿದರು.

ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಅಶ್ಲೀಲ ವಿಡಿಯೋಗಳನ್ನು ಸೋರಿಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅಪಚಾರ ಎಸಗಿರುವ ಕಿರಾತಕರನ್ನು ತಕ್ಷಣವೇ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಸಚಿವರೇ ಈ ವಿಡಿಯೋಗಳ ವಿತರಣೆಯ ರೂವಾರಿ : ಸಚಿವ ಸಂಪುಟದ ಪ್ರಭಾವಿ ಸಚಿವರೇ ಈ ವಿಡಿಯೋಗಳ ವಿತರಣೆಯ ರೂವಾರಿ. ಹೀಗಾಗಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಹರಿಬಿಟ್ಟಿರುವ ವಿಡಿಯೋಗಳಿಂದ ಸಂತ್ರಸ್ತೆಯರು ಅಪಾರ ನೋವು, ಅವಮಾನ ಮತ್ತು ಯಾತನೆ ಅನುಭವಿಸುತ್ತಿದ್ದಾರೆ. ಇವರೊಂದಿಗೆ ಸಂತ್ರಸ್ತೆ ಕುಟುಂಬದವರ ಮೇಲೆ ಉಂಟಾಗಿರುವ ಹಾನಿ ಮತ್ತು ಅಪಮಾನ ವಿವರಿಸಲು ಅಸಾಧ್ಯ. ವಿಡಿಯೋದಲ್ಲಿರುವ ಮಹಿಳೆಯರ ಗುರುತು ಬಹಿರಂಗ ಆಗುವಂತೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಹೇಳಿದರು.

ಎಸ್​ಐಟಿಯಿಂದ ನೊಂದವರಿಗೆ ನ್ಯಾಯ ಸಿಗಲ್ಲ : ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗೆ ಹಾಗೂ ಅವರ ಕುಟುಂಬದವರಿಗೆ ನ್ಯಾಯ ಒದಗಿಸುವಲ್ಲಿ ಎಸ್​ಐಟಿ ವಿಫಲವಾಗಿದೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿಎಂ, ಡಿಸಿಎಂ ಹೆಸರು ಬಂದಿದೆ : ಅಶ್ಲೀಲಗಳನ್ನು ಒಳಗೊಂಡ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್​ಡ್ರೈವ್​ಗಳ ಮುಖೇನ ರಾಜ್ಯಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸೀಪುರದ ಬಿಜೆಪಿ ಮುಖಂಡರು, ವಕೀಲರಾದ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್ ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ? ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದರು.

ವಿಡಿಯೋ ಹಂಚಿಕೆ ಶಿಕ್ಷಾರ್ಹ ಅಪರಾಧ : ಮಾಹಿತಿ ತಂತ್ರಜ್ಞಾನ ಕಾಯಿದೆ - 2020ರ ಸೆಕ್ಷನ್ 66-ಇ, 67 ಮತ್ತು 67-ಎ ಮತ್ತು ಕಾಯ್ದೆ 228 (ಎ) ಐಪಿಸಿ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್ ಸಂದೇಶಗಳನ್ನಾಗಲಿ ಅಥವಾ ಚಿತ್ರಿಕರಣವನ್ನಾಗಲಿ ತಯಾರಿಸುವುದು, ಸಂಗ್ರಹಿಸಿ ಇಡುವುದು ಹಾಗೂ ಬಿತ್ತರಿಸುವುದು, ಚಿತ್ರಿಸುವುದು, ಸಂತ್ರಸ್ತೆಯರ ಹೆಸರನ್ನು ಕೋರ್ಟ್ ಅನುಮತಿಯಿಲ್ಲದೇ, ಸಂತ್ರಸ್ತೆಯರ ಅನುಮತಿಯಿಲ್ಲದೇ ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಲೆ ವಿಡಿಯೋಗಳನ್ನು ಲೀಕ್ ಮಾಡಿರುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಪೆನ್​ಡ್ರೈವ್​ಗಳನ್ನು ಹಾಸನದಲ್ಲಿ ವ್ಯಾಪಕವಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿರುವುದಿಲ್ಲ ಎಂದು ಅವರು ಆರೋಪಿಸಿದರು.

ಇದೇ ವೇಳೆ ಅವರು ಮಹಿಳಾ ಆಯೋಗಕ್ಕೆ ಸಲ್ಲಿಸಿದ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
ಬೆಂಗಳೂರು ಮಹಾನಗರ ಜನತಾದಳ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಎಸ್ ರಾವ್, ವಕ್ತಾರರಾದ ಪ್ರಶಾಂತಿ, ರಾಜಾಜಿನಗರ ಕ್ಷೇತ್ರದ ಮಹಿಳಾ ಅಧ್ಯಕ್ಷೆ ಕವಿತಾ, ರಾಜ್ಯ ಕಾರ್ಯದರ್ಶಿ ಮಂಗಳಮ್ಮ, ನಗರದ ಮಹಿಳಾ ವಿಭಾಗದ ಪದಾಧಿಕಾರಿಗಳು, ಮುಖಂಡರುಗಳು ನಿಯೋಗದಲ್ಲಿ ಇದ್ದರು.

ಇದನ್ನೂ ಓದಿ : ಪ್ರಜ್ವಲ್ ಹಾಗೂ ರೇವಣ್ಣ ಟಾರ್ಗೆಟ್ ಮಾಡಿರುವುದು ಏಕೆ?: ಸರ್ಕಾರದ ವಿರುದ್ಧ ಹೆಚ್​ಡಿಕೆ ಕಿಡಿ - H D Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.