ETV Bharat / state

ದಾವಣಗೆರೆ: ಉದ್ಯೋಗ ಮೇಳ, 20ಕ್ಕೂ ಹೆಚ್ಚು ಸಂಸ್ಥೆಗಳು ಭಾಗಿ - Davangere Job fair - DAVANGERE JOB FAIR

ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

Davangere Job fair
ದಾವಣಗೆರೆಯಲ್ಲಿ ಉದ್ಯೋಗ ಮೇಳ (ETV Bharat)
author img

By ETV Bharat Karnataka Team

Published : Jul 4, 2024, 9:04 AM IST

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿ.ಫಾರ್ಮ, ಬಿ.ಫಾರ್ಮ, ಡಿಪ್ಲೋಮಾ, ಬಿಇ, ಬಿ.ಟೆಕ್, ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 15 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್​ನೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 8105122556, 9591088202 ನಂಬರ್​​ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.

ಐಟಿಐ ಪ್ರವೇಶಕ್ಕಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನ: ಆಗಸ್ಟ್-2024ನೇ ಶೈಕ್ಷಣಿಕ ಸಾಲಿನ ಐಟಿಐ ಪ್ರವೇಶಕ್ಕಾಗಿ ಆಫ್‍ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಫ್‍ಲೈನ್‍ನಲ್ಲಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವವರು ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಯಾ ದಿನವೇ ಅರ್ಜಿ ತೆಗೆದುಕೊಂಡು ಮೆರಿಟ್ ಆಧಾರದ ಮೇಲೆ ಮರು ದಿನವೇ ಪ್ರವೇಶ ಮಾಡಿಕೊಳ್ಳಲಾಗುವುದು. ಅರ್ಜಿ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ (1 ರಿಂದ 10ನೇ ತರಗತಿ), ಆಧಾರ್ ಕಾರ್ಡ್ ದಾಖಲಾತಿಗಳ 1 ಸೆಟ್ ಮೂಲ ಮತ್ತು ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ ಜಿಲ್ಲಾ ಪಂಚಾಯತ್​​ ನೇಮಕಾತಿ; ಪಿಯುಸಿ/ಲೈಬ್ರರಿ ಸೈನ್ಸ್​ ಆದವರಿಗೆ ಉದ್ಯೋಗಾವಕಾಶ - GOVT JOB OPPORTUNITY IN DAVANAGERE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.