ETV Bharat / state

Karnataka News Today Live: ಒಂದೇ ಕ್ಲಿಕ್​ನಲ್ಲಿ ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳ ಮಾಹಿತಿ - Live Updates

Live Updates
ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳ ಮಾಹಿತಿ (ETV Bharat)
author img

By ETV Bharat Karnataka Team

Published : Aug 27, 2024, 10:22 AM IST

Updated : Aug 27, 2024, 6:36 PM IST

ಬೆಂಗಳೂರು: ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳ ಮಾಹಿತಿಗಳನ್ನು ನೀಡಲಾಗಿದ್ದು, ಒಂದೇ ಕ್ಲಿಕ್​ನಲ್ಲಿ ಓದಿಕೊಳ್ಳಬಹುದಾಗಿದೆ.

LIVE FEED

9:54 PM, 27 Aug 2024 (IST)

3 ಎಕರೆಗಿಂತ ಕಡಿಮೆ ಒತ್ತುವರಿ ಇಲ್ಲ

ಬೆಂಗಳೂರು : ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. 2015ಕ್ಕೆ ಮೊದಲು ಜೀವನೋಪಾಯಕ್ಕಾಗಿ ಪಟ್ಟಾ ಜಮೀನೂ ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರಿಗೆ ತೊಂದರೆ ನೀಡದಂತೆ, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಇತ್ಯರ್ಥ ಆಗದೆ ಬಾಕಿ ಉಳಿದಿದ್ದಲ್ಲಿ ಅಂತಹ ಜಮೀನು, ಮನೆಯನ್ನು ತೆರವು ಮಾಡಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವು ಮಾಡಲ್ಲ : ಸಚಿವ ಈಶ್ವರ್ ಖಂಡ್ರೆ - Clearance of encroachment

9:53 PM, 27 Aug 2024 (IST)

ರಾಜ್ಯಪಾಲರಿಗೆ ದೂರು

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಕೆಐಎಡಿಬಿಯಿಂದ ನಿಯಮ ಉಲ್ಲಂಘಿಸಿ ಜಮೀನು ಮಂಜೂರು ಮಾಡಲಾಗಿದೆ ಹಾಗೂ ಜಿಂದಾಲ್​​ಗೆ ಜಮೀನು ಮಂಜೂರು ಮಾಡುವಲ್ಲಿ ದೊಡ್ಡ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಖರ್ಗೆ ಕುಟುಂಬದ ಟ್ರಸ್ಟ್​ಗೆ ಕೆಐಎಡಿಬಿ ಜಮೀನು: ರಾಜ್ಯಪಾಲರಿಗೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ - Kharge Family Trust

9:52 PM, 27 Aug 2024 (IST)

ಬಳ್ಳಾರಿ ಜೈಲಿಗೆ ಗೆ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಅವರ ಸಹಚರರು ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲು ಕೋರ್ಟ್ ಅನುಮತಿ ನೀಡಿದೆ. ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈ ಪೈಕಿ ರವಿ, ಕಾರ್ತಿಕ್, ನಿಖಿಲ್ ಹಾಗೂ ಕೇಶವಮೂರ್ತಿ ಅವರು ಈಗಾಗಲೇ ತುಮಕೂರು ಜೈಲಿನಲ್ಲಿದ್ದಾರೆ. ಪ್ರಕರಣದ ಎರಡನೇ ಆರೋಪಿ ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿಸಿದೆ. ಯಾವ ಆರೋಪಿ ಯಾವ ಜೈಲಿಗೆ ಶಿಫ್ಟ್ ಆಗಲಿದ್ದಾರೆ ಎಂಬ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ - DARSHAN JAIL SHIFT

6:32 PM, 27 Aug 2024 (IST)

ದಸರಾ ಗಜಪಡೆಗೆ ಮೆಟಲ್ ಡಿಟೆಕ್ಟರ್ ಪರೀಕ್ಷೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಯನ್ನು ಜಂಬೂಸವಾರಿಗೆ ಸಿದ್ಧಗೊಳಿಸಲಾಗುತ್ತಿದೆ. ಆನೆಗಳಿಗೆ ನಿತ್ಯ ವಿಶೇಷ ಆಹಾರ, ಸ್ನಾನ ಮಾಡಿಸಿ ತಯಾರು ಮಾಡಲಾಗುತ್ತಿದೆ. ಜೊತೆಗೆ ಪ್ರತಿನಿತ್ಯ ತಾಲೀಮು ನಡೆಸಿದ ನಂತರ ಗಜಪಡೆಯ ಪಾದಗಳಿಗೆ ಮೆಟಲ್‌ ಡಿಟೆಕ್ಟರ್‌ ಪರೀಕ್ಷೆ ನಡೆಸುವ ಪ್ರಕ್ರಿಯೆಯನ್ನ ಮೊದಲ ಬಾರಿಗೆ ದಸರಾದಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ದಸರಾ: ತಾಲೀಮು ನಂತರ ಗಜಪಡೆಗೆ ನಿತ್ಯ ಮೆಟಲ್‌ ಡಿಟೆಕ್ಟರ್‌ ಪರೀಕ್ಷೆ, ಮೊದಲ ಬಾರಿ ಅಳವಡಿಕೆ - Dasara Gajapade

ಗಜಪಡೆಗೆ ಮೆಟಲ್ ಡಿಟೆಕ್ಟರ್ ಪರೀಕ್ಷೆ ಮತ್ತು ಸ್ನಾನ
ಗಜಪಡೆಗೆ ಮೆಟಲ್ ಡಿಟೆಕ್ಟರ್ ಪರೀಕ್ಷೆ ಮತ್ತು ಸ್ನಾನ (ETV Bharat)

6:26 PM, 27 Aug 2024 (IST)

ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಮಲ್ಲಿಕಾರ್ಜುನ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್​ಗೆ ಕೆಐಎಡಿಬಿ ಸಿ.ಎ ನಿವೇಶನ ಮಂಜೂರು ಮಾಡಿರುವ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಿ.ಎ ನಿವೇಶನ ಮಂಜೂರು ಮಾಡಿರುವುದರಲ್ಲಿ ಕಾನೂನು ಉಲ್ಲಂಘನೆ ಎಲ್ಲಿ ಆಗಿದೆ. ಬಿಜೆಪಿ ರಾಜಕೀಯ ಮಾಡುತ್ತಿದೆ. ಇದು ವಾಣಿಜ್ಯ ಅಥವಾ ಕೈಗಾರಿಕಾ ಉದ್ದೇಶಕ್ಕೆ ಪಡೆದಿಲ್ಲ. ಇದು ಸಿ.ಎ ಜಮೀನು. ಸಚಿವ ಎಂ.ಬಿ. ಪಾಟೀಲ್ ಅವರು ಇದರ ಬಗ್ಗೆ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಒಟ್ಟು 193 ಸಂಸ್ಥೆಗಳು ಅರ್ಜಿ ಹಾಕಿದ್ವು, 43 ಸಂಸ್ಥೆಗಳು ಮಾತ್ರ ಆಯ್ಕೆ ಆಗಿವೆ. ಇದರಲ್ಲಿ ಯಾವುದೇ ಪ್ರಭಾವ ಬೀರಿಲ್ಲ. ಬಿಜೆಪಿಯವರಿಗೆ ಕನಿಷ್ಠ ಜ್ಞಾನ ಇಲ್ಲ. ಸಿ.ಎ ಸೈಟನ್ನು ಹರಾಜು ಹಾಕಲು ಆಗಲ್ಲ, ಅದನ್ನು ಖರೀದಿಯೇ ಮಾಡಬೇಕು.‌ ಬಿಜೆಪಿಯವರು ಎಷ್ಟು ಜನ ಸಿ.ಎ ನಿವೇಶನ ಪಡೆದಿಲ್ಲ ಕೇಳಿ. ಈ ಟ್ರಸ್ಟ್ ಮೂರು ದಶಕದಿಂದ ಚಾಲ್ತಿಯಲ್ಲಿದೆ, ಇದು ಹಳೆಯ ಟ್ರಸ್ಟ್. ಶಿಕ್ಷಣ, ಸಮಾಜ ಸೇವೆ ಕೆಲಸ ಮಾಡಿಕೊಂಡು ಬರ್ತಿರುವ ಟ್ರಸ್ಟ್ ಎಂದು ತಿಳಿಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಸಿಎ ನಿವೇಶನ ಮಂಜೂರಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲ: ಸಚಿವ ಪ್ರಿಯಾಂಕ್​ ಖರ್ಗೆ - Priyank Kharge

6:25 PM, 27 Aug 2024 (IST)

ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಐದು ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನ ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಇನ್ನು ಬೆಳಗಾವಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆಯಾಗಲಿದ್ದು, ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ರಾಜ್ಯದಲ್ಲಿ ಇನ್ನೂ 7 ದಿನ ಮಳೆಯ ಮುನ್ಸೂಚನೆ: ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ - rain forecast

4:17 PM, 27 Aug 2024 (IST)

ಬೇರೆ ಜೈಲಿಗೆ ದರ್ಶನ್ ಶಿಫ್ಟ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ. ಈ ಸಂಬಂಧ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿ ಎಂದು ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಬಳ್ಳಾರಿ ಜೈಲಿಗೆ ನಟ ದರ್ಶನ್​ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ - Darshan Jail Issue

4:13 PM, 27 Aug 2024 (IST)

ಕಾರಾಗೃಹದಲ್ಲಿ ವಿಶೇಷ ಸವಲತ್ತು ಪ್ರಕರಣ

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿ ರೌಡಿಗಳಿಗೆ ವಿಶೇಷ ಆತಿಥ್ಯ ಕಲ್ಪಿಸಿದ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಪ್ರಕರಣ ತನಿಖೆ ಕುರಿತಂತೆ ಇಂದು ಮಧ್ಯಾಹ್ನ ನಂತರ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖೆ ಕುರಿತು ಮಾಹಿತಿ ಪಡೆಯಲಿದ್ದಾರೆ. ಓರ್ವ ಎಸಿಪಿ ಹಾಗೂ ಇಬ್ಬರು ಇನ್ಸ್‌ಪೆಕ್ಟರ್ಸ್ ನೇತೃತ್ವದಲ್ಲಿ ತನಿಖೆ ಆರಂಭವಾಗಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ವಿಶೇಷ ಸವಲತ್ತು ಸಂಬಂಧ ದಾಖಲಾದ ಮೂರು ಎಫ್ಐಆರ್​ನಲ್ಲಿ ಏನಿದೆ? ಎರಡು ಪ್ರಕರಣದಲ್ಲಿ ನಟ ದರ್ಶನ್ ಎ1 - Actor Darshan

ಜೈಲಿನಲ್ಲಿ ವಿಶೇಷ ಸವಲತ್ತು
ಜೈಲಿನಲ್ಲಿ ವಿಶೇಷ ಸವಲತ್ತು (ETV Bharat)

2:01 PM, 27 Aug 2024 (IST)

ಎರಡ್ಮೂರು ದಿ‌ನಗಳಲ್ಲಿ ನಟ ದರ್ಶನ್​​ರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುವುದು: ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಬೇರೆ ಜೈಲಿಗೆ ದರ್ಶನ್​ ಸ್ಥಳಾಂತರ ಮಾಡುವ ತೀರ್ಮಾನ ನಾವು ಮಾಡುವುದಕ್ಕೆ ಆಗುವುದಿಲ್ಲ. ಕೋರ್ಟ್ ನಿರ್ದೇಶನದ ಮೇರೆಗೆ ಸ್ಥಳಾಂತರ ಆಗಲಿದೆ. ಇನ್ನೂ ಎರಡ್ಮೂರು ದಿನಗಳಲ್ಲಿ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಎರಡ್ಮೂರು ದಿ‌ನಗಳಲ್ಲಿ ನಟ ದರ್ಶನ್​​ರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುವುದು: ಸಚಿವ ಜಿ. ಪರಮೇಶ್ವರ್ - Minister G Parameshwar

Karnataka News Today Live
ಜಿ. ಪರಮೇಶ್ವರ್ (ETV Bharat)

12:05 PM, 27 Aug 2024 (IST)

ರಥದ ಮೇಲಿನ ಬೆಳ್ಳಿ ಮೂರ್ತಿ ಬಿದ್ದು ಸ್ಥಳದಲ್ಲೇ ಬಾಲಕ ಸಾವು

ಬೆಳಗಾವಿ: ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಆಕಾರದ ಮೂರ್ತಿ ಬಿದ್ದು 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ರಾಜಕುಮಾರ ಸಾವಳಗಿ(13) ಮೃತ ದುರ್ದೈವಿ ಬಾಲಕ.

ಹೆಚ್ಚಿನ ಮಾಹಿತಿಗಾಗಿ ಓದಿ: ಬೆಳಗಾವಿ: ರಥದ ಮೇಲಿನ ಬೆಳ್ಳಿ ಮೂರ್ತಿ ಬಿದ್ದು ಸ್ಥಳದಲ್ಲೇ ಬಾಲಕ ಸಾವು - Boy Died

ETV Bharat Live Updates
ರಥದ ಮೇಲಿಂದ ಬೀಳುತ್ತಿರುವ ಬೆಳ್ಳಿ ಮೂರ್ತಿ (ETV Bharat)

11:55 AM, 27 Aug 2024 (IST)

ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳಿಗೆ ವಿಶೇಷ ಆತಿಥ್ಯ ಪ್ರಕರಣ: ಮೂರು ಪ್ರತ್ಯೇಕ ತನಿಖಾ ತಂಡ ರಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್​ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನು ರಚಿಸಲಾಗಿದೆ. ಕಾರಾಗೃಹದ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್​ ಅವರೇ ಪ್ರಮುಖ ಆರೋಪಿಯಾಗಿದ್ದಾರೆ. ಮೂರೂ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ‌ ತಂಡಗಳನ್ನು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ರಚಿಸಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳಿಗೆ ವಿಶೇಷ ಆತಿಥ್ಯ ಪ್ರಕರಣ: ಮೂರು ಪ್ರತ್ಯೇಕ ತನಿಖಾ ತಂಡ ರಚನೆ - darshan viral photo in jail

KA News Today Live
ವೈರಲ್​ ಆದ ದರ್ಶನ್​ ಫೋಟೋ (ETV Bharat)

11:03 AM, 27 Aug 2024 (IST)

ಉಗ್ರರ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಮತ್ತೆ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಳಗಾವಿ: ಉಗ್ರರ ಜೊತೆ ನಂಟು ಹೊಂದಿದ್ದ ಹಾಗೂ ಕೇಂದ್ರ ‌ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿ 100 ಕೋಟಿ ರೂ. ಬೇಡಿಕೆಯಿಟ್ಟಿದ್ದ ಅಫ್ಸರ್ ಪಾಷಾನನ್ನು ಮಹಾರಾಷ್ಟ್ರದ ನಾಗ್ಪುರ ‌ಜೈಲಿನಿಂದ ಮತ್ತೆ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಸಂಪೂರ್ಣ ಓದಿಗಾಗಿ ಇಲ್ಲಿಗೆ ಭೇಟಿ ನೀಡಿ: ಉಗ್ರರ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಮತ್ತೆ ಹಿಂಡಲಗಾ ಜೈಲಿಗೆ ಶಿಫ್ಟ್ - Afsar Pasha Shifted Hindalga Jail

    10:45 AM, 27 Aug 2024 (IST)

    ತುಮಕೂರು: ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಸಾವು?

    ತುಮಕೂರು: ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದಿದೆ. ಕಾಟಮ್ಮ (45), ತಿಮ್ಮಕ್ಕ (85) ಮತ್ತು ಗಿರಿಯಮ್ಮ (38) ಮೃತ ದುರ್ದೈವಿಗಳು.

    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ತುಮಕೂರು: ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಸಾವು? - Food Poison

    Tumakuru Food Poison
    ಚಕಿತ್ಸೆ ನೀಡುತ್ತಿರುವ ವೈದ್ಯರ ತಂಡ (ETV Bharat)

    10:13 AM, 27 Aug 2024 (IST)

    ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ದುಬಾರಿ ಬೆಲೆಯ ಪ್ರೀಮಿಯಂ ಬ್ರಾಂಡ್ ಮದ್ಯದ ದರ ಇಳಿಸಿ ಸರ್ಕಾರದ ಆದೇಶ

    ಬೆಂಗಳೂರು: ಪ್ರೀಮಿಯಂ ಮದ್ಯದ ಬೆಲೆ ಇಂದಿನಿಂದ ಅಗ್ಗವಾಗಲಿದೆ. ದುಬಾರಿ ಬ್ರಾಂಡ್​​ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್​ನಲ್ಲಿ ಘೋಷಿಸಿದಂತೆ ಜುಲೈ 1ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಬೇಕಿತ್ತು. ಜುಲೈನಿಂದ ಮದ್ಯದ ದರದಲ್ಲಿ ಪರಿಷ್ಕರಣೆ ಮಾಡುವ ಮೂಲಕ ಒಂದೆಡೆ ಮದ್ಯ ಪ್ರಿಯರಿಗೆ ಖುಷಿ ಪಡಿಸುವುದಷ್ಟೇ ಅಲ್ಲ ತನ್ನ ಅಬಕಾರಿ ಆದಾಯವನ್ನೂ ಹೆಚ್ಚಿಸುವ ಲೆಕ್ಕಾಚಾರ ರಾಜ್ಯ ಸರ್ಕಾರದ್ದಾಗಿತ್ತು.‌ ಈ ಸಂಬಂಧ ಜುಲೈ 1ಕ್ಕೆ ಪರಿಷ್ಕೃತ ದರಗಳ ಅಧಿಸೂಚನೆ ಹೊರಡಿಸಿತ್ತು. ಆದರೆ, ಸಿಎಂ ಸೂಚನೆ ಮೇರೆಗೆ ದರ ಪರಿಷ್ಕರಣೆ ಆದೇಶ ಜಾರಿಯನ್ನು ತಡೆ ಹಿಡಿಯಲಾಗಿತ್ತು. ಇದೀಗ ಮತ್ತೆ ಕೆಲ ಪರಿಷ್ಕರಣೆ ಮಾಡಿ ದುಬಾರಿ ಬ್ರಾಂಡ್​ಗಳ ಮದ್ಯದ ಮೇಲಿನ ದರವನ್ನು 15-20% ವರೆಗೆ ಕಡಿತಗೊಳಿಸಿ ಆದೇಶ ಹೊರಡಿಸಿದೆ.

    ಸಂಪೂರ್ಣ ಓದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ದುಬಾರಿ ಬೆಲೆಯ ಪ್ರೀಮಿಯಂ ಬ್ರಾಂಡ್ ಮದ್ಯದ ದರ ಇಳಿಸಿ ಸರ್ಕಾರದ ಆದೇಶ - Liquor Price

    KA News Today Live
    ಸಾಂದರ್ಭಿಕ ಚಿತ್ರ (File)

    10:12 AM, 27 Aug 2024 (IST)

    ಗಗನಯಾನಕ್ಕೆ ತೆರಳಲಿವೆ ಧಾರವಾಡದ ನೊಣಗಳು

    ಧಾರವಾಡ : ಮುಂದಿನ‌ ವರ್ಷ ನಡೆಸುವ ಗಗನಯಾನಕ್ಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿನ ನೊಣಗಳು ಸಿದ್ಧವಾಗಿವೆ. ಇದರಿಂದ ಕೃಷಿ ವಿವಿ ಹೊಸ ಅಧ್ಯಯನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದೆ. ಗಗನಯಾನ ನೌಕೆಯಲ್ಲಿ ನೊಣದ ಕಿಟ್ ಅಧ್ಯಯನಕ್ಕೆ ಹೋಗಲಿದೆ. ಕೃಷಿ ವಿಶ್ವವಿದ್ಯಾಲಯದ ಜೈವಿಕಶಾಸ್ತ್ರ ವಿಭಾಗದಿಂದ ನೊಣದ ಕಿಟ್ ತಯಾರಿಸಲಾಗಿದೆ. ವಿವಿಯ ವಿಜ್ಞಾನಿ ರವಿಕುಮಾರ್ ಹೊಸಮನಿ ಅವರು ಈ ರೀತಿಯ ವಿಶೇಷ ಪ್ರಯೋಗ ಮಾಡಿದ್ದಾರೆ. ದೇಶದ 75 ಕೃಷಿ ವಿವಿಗಳ ಪೈಕಿ ಧಾರವಾಡ ಕೃಷಿ ವಿವಿ ಆಯ್ಕೆಯಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ: ಗಗನಯಾನಕ್ಕೆ ತೆರಳಲಿವೆ ಧಾರವಾಡದ ನೊಣಗಳು - FLIES READY TO FLY TOWARDS SPACE

    KA News Today Live
    ಕೃಷಿ ವಿಶ್ವವಿದ್ಯಾಲಯ (ETV Bharat)

      Last Updated : Aug 27, 2024, 6:36 PM IST
      ETV Bharat Logo

      Copyright © 2024 Ushodaya Enterprises Pvt. Ltd., All Rights Reserved.