ETV Bharat / state

ಈ ಭಾಗದ ಅಭಿವೃದ್ಧಿ ಸಂಕಲ್ಪ ಮತ್ತಷ್ಟು ಬಲವಾಗಿದೆ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ - Kalyan Karnataka Vimochan day

author img

By ETV Bharat Karnataka Team

Published : Sep 17, 2024, 6:43 PM IST

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಅವರು ಈ ಭಾಗದ ಅಭಿವೃದ್ಧಿಯ ಸಂಕಲ್ಪ ಮತ್ತಷ್ಟು ಬಲವಾಗಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ (ETV Bharat)

ಕಲಬುರಗಿ: ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಮಹೋತ್ಸವ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಬಾರಿ ಕಲಬುರಗಿಯಲ್ಲಿ ಇಂದೇ ಸಚಿವ ಸಂಪುಟ ಸಭೆ ಹಮ್ಮಿಕೊಂಡಿದ್ದರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ ಸಚಿವರು ನಗರಕ್ಕೆ ಆಗಮಿಸಿದ್ದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ (ಉತ್ಸವ) ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಿದರು. ಇದಕ್ಕೂ‌ ಮುನ್ನ ಎವಿಪಿ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಜಯ್ ಸಿಂಗ್, ಅಲ್ಲಮಪ್ರಭು ಪಾಟೀಲ್, ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು ಸೇರಿದಂತೆ ಅನೇಕರು ಇದ್ದರು.

ಧ್ವಜಾರೋಹಣ ನೆರವೇರಿಸಿದ ಸಿಎಂ: ಬಳಿಕ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹನ ನೇರವೇರಿಸಿದ ಸಿಎಂ ಅವರಿಗೆ ಪೊಲೀಸ್ ತುಕ್ಕಡಿ ಸೇರಿದಂತೆ ವಿವಿಧ ತುಕಡಿಗಳು ಪರೇಡ್ ಮೂಲಕ ಗೌರವ ವಂದನೆ ಸಲ್ಲಿಸಿದವು. ನಂತರ ಸಿಎಂ ತೆರೆದ ವಾಹನದಲ್ಲಿ ಸಂಚರಿಸಿ ಧನ್ಯವಾದ ಅರ್ಪಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಕಬ್ಬು ಕಟಾವ್ ಯಂತ್ರ, ಕೆಕೆಆರ್‌ಟಿಸಿ ಸಂಸ್ಥಗೆ ನೂತನ ಅತ್ಯಾಧುನಿಯ 50 ಸಾರಿಗೆ ಬಸ್, ಅನೇಕ ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನೇರವೇರಿಸಿದರು.

ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್​ ಕೊಡುಗೆಯ ವಿವರಣೆ: ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಮಾತನಾಡಿ, ಕಲ್ಯಾಣ ಕರ್ನಾಟಕಕ್ಕೆ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಈ ಮಹತ್ವದ ಸಂದರ್ಭದಲ್ಲಿ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಿಎಂ ತಿಳಿಸಿ, ಈ ಭಾಗದ ಅಭಿವೃದ್ಧಿಯ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪ್ರಯತ್ನದಿಂದ ಮನಮೋಹನ್ ಸಿಂಗ್ ನೇತೃತ್ವದ ಅಂದಿನ ಯುಪಿಎ ಸರ್ಕಾರ ಡಿಸೆಂಬರ್ 2012 ರಲ್ಲಿ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದು 371 (ಜೆ) ಪರಿಚ್ಛೇದ ಸೇರ್ಪಡೆ ಮಾಡಲಾಯಿತು. ರಾಷ್ಟ್ರಪತಿಗಳ ಅಂಕಿತದೊಂದಿಗೆ ಇದು 2013ರ ಜ.1 ರಿಂದ ಜಾರಿಗೆ ಬಂದಿತು. ಹೈದ್ರಾಬಾದ್ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಪುನರ್ ನಾಮಕರಣ ಮಾಡಲಾಯಿತು. ಅಲ್ಲಿಂದ ಈಚೆಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಯಿತು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಭರವಸೆ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂ. ಘೋಷಿಸಿ ಅನುದಾನ ಹಂಚಿಕೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿ ನಿರೀಕ್ಷಿಸಲಾಗಿದೆ ಸಿಎಂ ಭರವಸೆ ನೀಡಿದರು.

ಕೆ.ಕೆ.ಆರ್.ಡಿ.ಬಿ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ 180 ಕೋಟಿ ರೂಗಳನ್ನು ಒದಗಿಸಿ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 180 ಕೋಟಿ ರೂಗಳ ವೆಚ್ಚದಲ್ಲಿ ಮೌಲಾನ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳ ನಿರ್ಮಾಣ ಮಾಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಕಲಬುರಗಿಯಲ್ಲಿ ನೈಸ್ ಅಕಾಡೆಮಿ (ನಾಗಾವಿ ಇನ್‍ಸ್ಟಿಟ್ಯೂಟ್ ಆಫ್ ಕಾಂಪಿಟಿಟಿವ್ ಎಕ್ಸಾಮ್ಸ್) ಸಂಸ್ಥೆ ಈಗಾಗಲೆ ನಿರ್ಮಿಸಲಾಗಿದ್ದು, ಶೀಘ್ರದಲ್ಲಿ ಈ ಪ್ರದೇಶದ ಮಕ್ಕಳಿಗೆ ಪರೀಕ್ಷಾ ಪೂರ್ವ ತರಬೇತಿ ಆರಂಭಿಸಲಾಗುವುದು. ಪ್ರತಿ ವರ್ಷ ಸುಮಾರು 2,000 ಅಭ್ಯರ್ಥಿಗಳಿಗೆ ಐ.ಎ.ಎಸ್., ಕೆ.ಎ.ಎಸ್., ಬ್ಯಾಂಕಿಂಗ್ ಹಾಗೂ ರಾಜ್ಯ ಸರ್ಕಾರದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ರೈತ ಗಲ್ಲಿ ಹವಾ; ಮನೆ ಮುಂದೆ ಸರತಿ ಸಾಲಿನಲ್ಲಿ ಬೆನಕನ ದರ್ಶನ - Raitha Galli Ganeshotsava

ETV Bharat Logo

Copyright © 2024 Ushodaya Enterprises Pvt. Ltd., All Rights Reserved.