ETV Bharat / state

ಸರ್ಕಾರಿ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಆದೇಶ - Kannada Mandatory - KANNADA MANDATORY

ಸರ್ಕಾರದ ಎಲ್ಲ ಇಲಾಖೆಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಭಾಗದಲ್ಲಿರುವಂತೆ ಹಾಗೂ ಶೇ.40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (ETV Bharat)
author img

By ETV Bharat Karnataka Team

Published : Aug 24, 2024, 7:39 AM IST

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚಿಸಿದೆ. ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಭಾಗದಲ್ಲಿರುವಂತೆ ಹಾಗೂ ಶೇ.40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಜೊತೆ ನಾವಿದ್ದೇವೆ ಹೋರಾಟ ಮಾಡಿ: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹೈಕಮಾಂಡ್ - Congress High Command

ಕನ್ನಡ ನಾಮಫಲಕ ಕಡ್ಡಾಯಗೊಳಿಸುವುದಾಗಿ ಈ ಮೊದಲು ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಆ ಬಳಿಕ ಫೆಬ್ರವರಿಯಲ್ಲಿ ನಡೆದ ಅಧಿವೇಶನದ ವೇಳೆ ಉಭಯ ಸದನಗಳಲ್ಲಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ಅನ್ನು ಮಂಡಿಸಿ, ಅಂಗೀಕಾರ ಪಡೆದಿತ್ತು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ಪ್ರಕಾರ ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು. ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60ರಷ್ಟು ಪ್ರದರ್ಶಿಸುವುದನ್ನು ಕಡ್ಡಾಯ ಮಾಡಲಾಗಿದೆ. ಶೇ.40ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದು. ಈ ಹಿಂದೆ ಇದನ್ನು 50:50 ಎಂದು ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ: ಪರಿಷ್ಕೃತ ಸ್ಟೈಫಂಡ್ ವಿವರ ಹೀಗಿದೆ - MEDICAL STUDENT STIPEND HIKE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.