ETV Bharat / state

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ವಿಧಿವಶ: ಸಿಎಂ ಸೇರಿ ಗಣ್ಯರಿಂದ ಸಂತಾಪ - Vasanth Nadiger Passes Away

ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ, ಸಂಪಾದಕ ವಸಂತ ನಾಡಿಗೇರ್ (59) ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ.

ಹಿರಿಯ ಪತ್ರಕರ್ತ ವಸಂತ ನಾಡಿಗೇರ್
ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ (x@CMofKarnataka)
author img

By ETV Bharat Karnataka Team

Published : Sep 9, 2024, 3:26 PM IST

ಬೆಂಗಳೂರು: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ (59) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರಾದ ನಾಡಿಗೇರ್ ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಶೀರ್ಷಿಕೆಗಳನ್ನು ನೀಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ನೀಡಿದ್ದರು.

ನಾಡಿಗೇರ್ ಅವರು ಲತಾ ಮಂಗೇಶ್ಕರ್ ಜೀವನ ಚರಿತ್ರೆಯನ್ನು ಕನ್ನಡಕ್ಕೆ ಅನುವಾದಿಸಿದ್ದರು. ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ: ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ್​ ಅವರ ನಿಧನವಾರ್ತೆ ನೋವುಂಟು ಮಾಡಿದೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತ ನಾಡಿಗೇರ್​ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್'​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ವಸಂತ ನಾಡಿಗೇರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998ರಿಂದ 2015ರವರೆಗೆ ಸುದ್ದಿ ಸಂಪಾದಕರಾಗಿದ್ದ ಅವರು ಸುಮಾರು 3 ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ವಸಂತ್ ನಾಡಿಗೇರ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ಪ್ರತಿಭಾನ್ವಿತರು ಮತ್ತು ಪ್ರಯೋಗಶೀಲರಾಗಿದ್ದ ಶ್ರೀಯುತರು ಕನ್ನಡಪ್ರಭ, ವಿಜಯ ಕರ್ನಾಟಕ, ವಿಶ್ವವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರು ಮಾಧ್ಯಮ ಮೌಲ್ಯಗಳ ಪ್ರತೀಕವಾಗಿದ್ದರು. ವಸಂತ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು 'ಎಕ್ಸ್' ಖಾತೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ್​ ವಿಧಿವಶರಾಗಿರುವ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಾಪ ಸೂಚಿಸಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ವಸಂತ ನಾಡಿಗೇರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.​ ವಸಂತ ನಾಡಿಗೇರ್ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ, ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ತುಳು ಲಿಪಿಗೆ ಮತ್ತೊಂದು ಮಾನ್ಯತೆ: ತುಳು-ತಿಗಳಾರಿ ಯೂನಿಕೋಡ್​ ಸೇರ್ಪಡೆ - Tulu Script Unicode

ETV Bharat Logo

Copyright © 2024 Ushodaya Enterprises Pvt. Ltd., All Rights Reserved.