ETV Bharat / state

ಕೊರೊನಾ ಬಳಿಕ ಮತ್ತೆ ಮಂಗಳೂರಿನಲ್ಲಿ ಆರಂಭವಾಗಲಿದೆ ಕರಾವಳಿ ಉತ್ಸವ - KARAVALI UTSAV 2024

ಕೊರೊನಾ ಕಾರಣದಿಂದ ಸ್ಥಗಿತಗೊಂಡಿದ್ದ ಕರಾವಳಿ ಉತ್ಸವ ಇದೀಗ ಮತ್ತೆ ಆರಂಭಗೊಳ್ಳುತ್ತಿದ್ದು, ಡಿಸೆಂಬರ್ 21 ರಿಂದ ಜನವರಿ 19ರ ವರೆಗೆ ನಡೆಯಲಿದ್ದು, ಕರಾವಳಿಯ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಜನತೆಗೆ ಉಣಬಡಿಸಲಿದೆ.

Karavali Utsav Logo
ಕರಾವಳಿ ಉತ್ಸವ ಲೋಗೋ (ETV Bharat)
author img

By ETV Bharat Karnataka Team

Published : 3 hours ago

ಮಂಗಳೂರು: 2019-20ರಲ್ಲಿ ಕೊನೆಯ ಬಾರಿಗೆ ಮಂಗಳೂರಿನಲ್ಲಿ ನಡೆದಿದ್ದ ಕರಾವಳಿ ಉತ್ಸವ ಮತ್ತೊಮ್ಮೆ ಆರಂಭವಾಗುತ್ತಿದೆ. ಕೊರೊನಾ ಬಳಿಕ ಮತ್ತೆ ಆರಂಭವಾಗುತ್ತಿರುವ ಕರಾವಳಿ ಉತ್ಸವ ಡಿಸೆಂಬರ್ 21 ರಿಂದ ಜನವರಿ 19ರ ವರೆಗೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, "ಕರಾವಳಿಯ ನೈಜ ಸಂಸ್ಕೃತಿಯ ಅನಾವರಣ, ಸಂಪ್ರದಾಯಗಳ ಪ್ರದರ್ಶನ, ಆಹಾರ ಖಾದ್ಯಗಳ ಪರಿಚಯ, ವಿವಿಧ ವಿನೋದಾವಳಿಗಳೊಂದಿಗೆ ಕರಾವಳಿ ಉತ್ಸವ ನಡೆಯಲಿದೆ. ಇವೆಲ್ಲವೂ ಒಂದೇ ಜಾಗದಲ್ಲಿ ತುಳುನಾಡಿನ ಜನತೆಗೆ ಲಭ್ಯವಾಗಲಿವೆ. ಕೆಲವು ವರ್ಷಗಳ ಬಳಿಕ ಇದೇ ಡಿಸೆಂಬರ್ 21 ರಿಂದ ಜನವರಿ 19ರ ವರೆಗೆ ಮತ್ತೊಮ್ಮೆ 'ಕರಾವಳಿ ಉತ್ಸವ' ನಮ್ಮ ತುಳುನಾಡಿನ ರಾಜಧಾನಿಯಲ್ಲಿ ನಡೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿರುವ ಉತ್ಸವದಲ್ಲಿ ಕರಾವಳಿಯ ವೈವಿಧ್ಯತೆಗಳು ಸಾರ್ವಜನಿಕರನ್ನು ರಂಜಿಸಲಿವೆ" ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಪ್ರತಿಕ್ರಿಯೆ (ETV Bharat)

"ಡಿಸೆಂಬರ್ 21 ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಸಂಜೆ 4 ಗಂಟೆಗೆ ಕೊಡಿಯಾಲ್ ಬೈಲ್​ನ ಕೆನರಾ ಕಾಲೇಜಿನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಕಲಾವಿದರ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಸಂಜೆ 5.30 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಈ ಬಾರಿಯ ಕರಾವಳಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಿಸೆಂಬರ್ 21 ಮತ್ತು 22 ರಂದು ವಿದ್ಯುದ್ದೀಪಗಳಿಂದ ಅಲಂಕೃತವಾದ ವೇದಿಕೆಯಲ್ಲಿ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ" ಎಂದು ಹೇಳಿದರು.

ವಸ್ತು ಪ್ರದರ್ಶನ: "ವಸ್ತು ಪ್ರದರ್ಶನವು 'ಜಾಗತಿಕ ಹಳ್ಳಿ' (Global Village) ಎಂಬ ಧ್ಯೇಯದೊಂದಿಗೆ ಕರಾವಳಿಯ ನೈಜ ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಉಡುಗೆ ತೊಡುಗೆ ಮತ್ತು ಖಾದ್ಯಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. ವಿವಿಧ ಜನಾಂಗದ ರೀತಿ ರಿವಾಜುಗಳನ್ನು ಪರಿಚಯಿಸಲು ಪ್ರತ್ಯೇಕ ವಿಭಾಗಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲಿ ಕೈಮಗ್ಗ, ನೇಕಾರ, ಕುಂಬಾರ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲ್ಯಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳು ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ" ಎಂದರು.

ಆಹಾರಮೇಳ: "ಕರಾವಳಿಯು ತನ್ನದೇ ಆದ ವಿಶಿಷ್ಟ ಆಹಾರ ಪದ್ಧತಿಯನ್ನು ಹೊಂದಿದೆ. ವೈವಿಧ್ಯಮಯ ಖಾದ್ಯಗಳ ತಯಾರಿಕೆ, ಪ್ರದರ್ಶನ ಮತ್ತು ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದ್ದು, ತುಳುನಾಡಿನ ತಿಂಡಿ ತಿನಿಸುಗಳನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸವಿಯಲು ಸಾರ್ವಜನಿಕರಿಗೆ ಇದೊಂದು ಅಪರೂಪದ ಅವಕಾಶವಾಗಿದೆ" ಎಂದು ಮಾಹಿತಿ ನೀಡಿದರು.

ವಾಣಿಜ್ಯ ಮಳಿಗೆ: "ಆಹಾರ ಉತ್ಪನ್ನಗಳು ಮಾತ್ರವಲ್ಲದೆ ಉಡುಗೆ ತೊಡುಗೆಗಳು ಮತ್ತು ವಿವಿಧ ವಾಣಿಜ್ಯ ಮಳಿಗೆಗಳಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಅಮ್ಯೂಸ್​ಮೆಂಟ್ ಪಾರ್ಕ್ ಮತ್ತು ವಿವಿಧ ವಿನೋದಾವಳಿಗಳು ಎಲ್ಲಾ ವಯಸ್ಸಿನವರೆಗೂ ಮನೋರಂಜನೆ ನೀಡಲಿವೆ" ಎಂದರು.

ಬೀಚ್ ಉತ್ಸವ: "ಡಿಸೆಂಬರ್ 28 ಮತ್ತು 29ರಂದು ತಣ್ಣೀರು ಬಾವಿ ಬೀಚ್​ನಲ್ಲಿ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 6 ಗಂಟೆಗೆ ಬೀಚ್ ಉತ್ಸವ ಉದ್ಘಾಟನೆಗೊಳ್ಳಲಿದೆ. ಸಂಜೆ 6.30ರಿಂದ ವಿವಿಧ ತಂಡಗಳ ನೃತ್ಯ ಪ್ರದರ್ಶನಗಳು ನಡೆಯಲಿವೆ. ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕರು ಮತ್ತು ಗಾಯಕರಾಗಿರುವ ರಘು ದೀಕ್ಷಿತ್ ಅವರ ತಂಡದ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದ್ದು ಸಾರ್ವಜನಿಕರನ್ನು ರಂಜಿಸಲಿದೆ" ಎಂದು ಹೇಳಿದರು.

"ಭಾನುವಾರ ದಿನಾಂಕ 29 ರಂದು ಪೂರ್ವಾಹ್ನ 5.30ಕ್ಕೆ ಯೋಗ, 6.30ಕ್ಕೆ ಜುಂಬ (ಏರೋನಾಟಿಕ್ಸ್) ಮತ್ತು 9 ಗಂಟೆಯಿಂದ ಬೀಚ್ ಸ್ಪೋರ್ಟ್ಸ್ ಮುಂತಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಆನ್​ಲೈನ್ ಸ್ಪರ್ಧೆ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ ಮತ್ತು ರಾತ್ರಿ 8 ಗಂಟೆಗೆ ಶೋರ್ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ. ಯುವ ಜನತೆಗೆ ಇದೊಂದು ವಿಶಿಷ್ಟ ಅವಕಾಶವಾಗಿದೆ" ಎಂದರು.

ಇತರೆ ವೈಶಿಷ್ಟ್ಯಗಳು: "ಜನವರಿ 4 ಮತ್ತು 5 ರಂದು ಕದ್ರಿ ಪಾರ್ಕ್​ನಲ್ಲಿ ಆಟೋಮೊಬೈಲ್ ಮತ್ತು ಶ್ವಾನ ಪ್ರದರ್ಶನ ನಡೆಯಲಿದೆ. ಜನವರಿ 11 ಮತ್ತು 12 ರಂದು ಕದ್ರಿ ಪಾರ್ಕ್ ನಲ್ಲಿ ಯುವ ಉತ್ಸವ ನಡೆಯಲಿದೆ. ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ಸುಪ್ರಸಿದ್ಧ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ" ಎಂದು ವಿವರಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತ ಪಾದುಕೆಯ ದರ್ಶನ ಪಡೆದ ಭಕ್ತರು, ಉತ್ಸವಕ್ಕೆ ತೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.