ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ - 2nd PUC Exam Schedule

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟವಾಗಿದೆ. ಪ್ರತಿದಿನ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
author img

By ETV Bharat Karnataka Team

Published : Apr 10, 2024, 3:24 PM IST

Updated : Apr 10, 2024, 4:49 PM IST

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

ವೇಳಾಪಟ್ಟಿ ಹೀಗಿದೆ: ಏಪ್ರಿಲ್ 29ರಂದು ಕನ್ನಡ, ಏಪ್ರಿಲ್ 30ರಂದು ಇತಿಹಾಸ, ಭೌತಶಾಸ್ತ್ರ, ಮೇ 2ರಂದು ಇಂಗ್ಲಿಷ್, ಮೇ 3ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 4ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮೇ 9ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮೇ 11ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ 13ರಂದು ಅರ್ಥಶಾಸ್ತ್ರ, ಮೇ 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಮೇ 15ರಂದು ಹಿಂದಿ ವಿಷಯ ಹಾಗು ಮೇ 16ರಂದು ತಮಿಳು ಸೇರಿದಂತೆ ಇತರೆ ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ಎಲ್ಲ ವಿಷಯಗಳಿಗೆ ತಲಾ 80 ಅಂಕಗಳಿವೆ. ಪ್ರತಿದಿನ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪ್ರಾರಂಭದಲ್ಲಿ ನೀಡಲಾಗುತ್ತದೆ. ಮೊದಲ ಬಾರಿಗೆ ಪರೀಕ್ಷೆ ಬರೆಯುವವರ ಜತೆಗೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದು ಎಂದು ಮಂಡಳಿ ತಿಳಿಸಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ಇವರೇ ನೋಡಿ ಟಾಪರ್ಸ್​​​; ಹೀಗಿದೆ ಡಿಟೇಲ್ಸ್​​​ - 2nd PUC Toppers

Last Updated : Apr 10, 2024, 4:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.