ETV Bharat / state

ರಾಜ್ಯಕ್ಕೆ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೋದಿ ಸರ್ಕಾರದಿಂದ 3 ಪಟ್ಟು ಹೆಚ್ಚು ತೆರಿಗೆ ಪಾಲು, ಅನುದಾನ: ಬಿಜೆಪಿ

ಕರ್ನಾಟಕಕ್ಕೆ ಈ ಹಿಂದೆ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರು ಪಟ್ಟು ಹೆಚ್ಚು ತೆರಿಗೆ ಪಾಲು ಮತ್ತು ಅನುದಾನವನ್ನು ನರೇಂದ್ರ ಮೋದಿ ಸರ್ಕಾರ ನೀಡಿದೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.

BJP Congress ​
ಬಿಜೆಪಿ ಕಾಂಗ್ರೆಸ್​
author img

By ETV Bharat Karnataka Team

Published : Feb 5, 2024, 3:43 PM IST

Updated : Feb 5, 2024, 3:51 PM IST

ಬೆಂಗಳೂರು: ತಮ್ಮ ಆಡಳಿತದ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋಧಿ ಅಲೆಯನ್ನು ಸದ್ಯ ಕಾಂಗ್ರೆಸ್ ಸರ್ಕಾರ ಎದುರಿಸುತ್ತಿದೆ. ಈ ಆಡಳಿತ ವಿರೋಧಿ ಅಲೆಯಿಂದ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ಕೇಂದ್ರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಟೀಕಿಸಿದೆ. ಈ ಕುರಿತು ಸರಣಿ ಎಕ್ಸ್‌ ಪೋಸ್ಟ್‌ಗಳನ್ನು ಮಾಡಿದ್ದು, ಜೀವನಪೂರ್ತಿ ಪರರ ಕಡೆ ಬೊಟ್ಟು ಮಾಡಿ ತೋರಿಸಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೇ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರು ಪಟ್ಟು ಅಧಿಕ ತೆರಿಗೆ ಪಾಲು ಹಾಗು ಅನುದಾನಗಳನ್ನು ನೀಡಿದ್ದು ನರೇಂದ್ರ ಮೋದಿ ಸರ್ಕಾರ.

2004-2014ರವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್‌ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ 81,795 ಕೋಟಿ. ಇದಕ್ಕೆ ಹೋಲಿಸಿದರೆ, ಮೋದಿ ಸರ್ಕಾರ ನೀಡಿರುವ 2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್‌ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ. ಇದಲ್ಲದೆ ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಧಿಕ ಎಂಬುದನ್ನು ಲೆಕ್ಕ ಹಾಕಲು ಸ್ವಯಂಘೋಷಿತ ಆರ್ಥಿಕ ತಜ್ಞರಾಗಿರುವ ತಮಗೆ ಅಸಾಧ್ಯವಲ್ಲ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಬಂದ 60,779 ಕೋಟಿಗಿಂತಲೂ ಮೋದಿ ಸರ್ಕಾರ ನೀಡಿದ 2,08,882 ಕೋಟಿ ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದಿಲ್ಲ. ಲೆಕ್ಕ ಗೊತ್ತಿದ್ದರೂ ಸಾಕು ಎಂದು ಬಿಜೆಪಿ ತಿಳಿಸಿದೆ.

ಕೇಂದ್ರದಿಂದ 13,500 ಕಿ.ಮೀ ರಸ್ತೆ ನಿರ್ಮಾಣ: ರಾಜ್ಯದಲ್ಲಿ ನಿಮ್ಮ ಪಕ್ಷದವರು 1947ರಿಂದ 2014ರವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋ ಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋ ಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವೇ ಎಂದು ಬಿಜೆಪಿ ತಿಳಿಸಿದೆ.

ರೈಲ್ವೆ ಯೋಜನೆಗೆ ₹11,000 ಕೋಟಿ: 2009ರಿಂದ 2014ರವರೆಗೆ ರಾಜ್ಯದ ರೈಲ್ವೆ ಯೋಜನೆಗಳಿಗೆ ನಿಮ್ಮ ಸರ್ಕಾರ ನೀಡಿದ್ದ 835 ಕೋಟಿಗಿಂತ ಮೋದಿ ಸರ್ಕಾರ ನೀಡಿರುವ 11,000 ಕೋಟಿ ಎಷ್ಟು ಪಟ್ಟು ಹೆಚ್ಚು ಎಂಬುದನ್ನು ನೀವೇ ಸ್ವಲ್ಪ ಲೆಕ್ಕ ಹಾಕಿ ಹೇಳಿಬಿಡಿ ಎಂದು ಬಿಜೆಪಿ ಪ್ರಶ್ನಿಸಿದೆ.

73 ಕಿ.ಮೀ ಮೆಟ್ರೋ ಹಳಿ: ಬ್ರಿಟಿಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014ರಲ್ಲಿ ಕಾಂಗ್ರೆಸ್‌ ಅಧಿಕಾರ ಬಿಟ್ಟು ತೊಲಗುವವರೆಗೆ, 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೇ ವಿದ್ಯುದೀಕರಣ ಕೇವಲ 16 ಕಿಲೋಮೀಟರ್. ಆದರೆ ಕಾಂಗ್ರೆಸ್ ಬಳಿಕ ಬಂದ ಮೋದಿ ಸರ್ಕಾರ ಮಾಡಿದ ರೈಲ್ವೆ ವಿದ್ಯುದೀಕರಣ 3265 ಕಿಮೀ. ರೈಲ್ವೆ ಇಲಾಖೆ ಸಾಧನೆಯೇ ಕಾಂಗ್ರೆಸ್‌ ಅವಧಿಯಲ್ಲಿ ಇಷ್ಟು ಅತ್ಯಲ್ಪವಾಗಿರುವಾಗ ನಿಮ್ಮ ಪಕ್ಷದವರು ಅಧಿಕಾರ ನಡೆಸುವಾಗ ಮೆಟ್ರೋಗೋಸ್ಕರ ಯಶಸ್ವಿಯಾಗಿ ಅಳವಡಿಸಿದ ಹಳಿಯ ಉದ್ದ ಕೇವಲ 7 ಕಿಮೀ. 2014 ರಿಂದ 2023 ನಡುವೆ ಬರೋಬ್ಬರಿ 73 ಕಿಲೋಮೀಟರ್ ಮೆಟ್ರೋ ಹಳಿ ಅಳವಡಿಸಲಾಗಿದೆ.

14 ವಿಮಾನ ನಿಲ್ದಾಣ ಅಭಿವೃದ್ಧಿ: ಕಾಂಗ್ರೆಸ್‌ನ 67 ವರ್ಷಗಳ ಆಡಳಿತದಲ್ಲಿ ಕರ್ನಾಟಕದಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಗಳು ಕೇವಲ 7. 2014ರಲ್ಲಿ ದೇಶದ ಜನ ಕಾಂಗ್ರೆಸ್‌ ಪಕ್ಷವನ್ನು ಕಿತ್ತೊಗೆದ ನಂತರ ಕರ್ನಾಟಕವೊಂದರಲ್ಲೇ 14 ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವುದು ಮೋದಿ ಸರ್ಕಾರ ಎಂದು ತಿಳಿಸಿದೆ.

ಆಯುಷ್ಮಾನ್‌ ಭಾರತ ಯೋಜನೆ: ಕಳೆದ 5 ವರ್ಷಗಳಲ್ಲಿ ಮೋದಿ ಸರ್ಕಾರ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಿಗೆ ನೀಡಿರುವುದು 30,000 ಕೋಟಿ. ಕರ್ನಾಟಕದ ರೈತರ ಜೇಬಿಗೆ ಬಂದ ಕಿಸಾನ್‌ ಸಮ್ಮಾನದ ಮೌಲ್ಯ 10,990 ಕೋಟಿ. ಕಾಂಗ್ರೆಸ್‌ ಸರ್ಕಾರಗಳಿಗೆ 67 ವರ್ಷಗಳಲ್ಲಿ ಯೋಚಿಸಲೂ ಸಾಧ್ಯವಾಗದಿದ್ದ ಆಯುಷ್ಮಾನ್‌ ಭಾರತ ಯೋಜನೆಯ ಲಾಭ ಪಡೆದ ಕನ್ನಡಿಗರು 62,00,000ಕ್ಕೂ ಅಧಿಕ. ಕರ್ನಾಟಕಕ್ಕೆ ಮೊದಲ ಐಐಟಿ ನೀಡಿದ್ದು ಸಹ ಮೋದಿ ಸರ್ಕಾರ ಎಂಬುದು ನಿಮಗೆ ತಿಳಿದಿತ್ತೇ ಮುಖ್ಯಮಂತ್ರಿ ಸಾಹೇಬರೇ? ಎಂದು ಬಿಜೆಪಿ ತಿರುಗೇಟು ನೀಡಿದೆ.

ಕೊರೊನಾದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಉಚಿತವಾಗಿ ನೀಡಿದ ಲಸಿಕೆಯೇ 10 ಕೋಟಿಗೂ ಹೆಚ್ಚು. ಆ ಪ್ರಮಾಣದಲ್ಲಿ ನಿಮ್ಮ ಪಕ್ಷದ ಸರ್ಕಾರಗಳು ಪೋಲಿಯೋ ಲಸಿಕೆಗಳನ್ನೂ ನೀಡಿಲ್ಲ ಎಂಬ ಅಂಶ ನಿಮ್ಮ ತಲೆಯಲ್ಲಿರಲಿ. ಮೇಲೆ ಹೇಳಿದ ಇವಿಷ್ಟೂ ಅಲ್ಲದೆ ಪಿಎಂ ಗತಿ ಶಕ್ತಿ ಯೋಜನೆ, ಸಾಗರಮಾಲಾ ಯೋಜನೆ, ಬಡವರಿಗೆ ಸ್ವಂತ ಮನೆ ಖಾತರಿಪಡಿಸುವ ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ 1 ಲಕ್ಷ ಕೋಟಿ ರೂಪಾಯಿಗೂ ಅಧಿಕ ನೆರವು 2014ರ ನಂತರ ಹರಿದುಬಂದಿದೆ.

ಜಲ ಜೀವನ್‌ ಮಿಷನ್‌, ಅಮೃತ್‌ ಯೋಜನೆ, ಸ್ಮಾರ್ಟ್‌ ಸಿಟಿ: ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪಟಾಲಂ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಜಲ ಜೀವನ್‌ ಮಿಷನ್‌, ಅಮೃತ್‌ ಯೋಜನೆ, ಸ್ಮಾರ್ಟ್‌ ಸಿಟಿ, ಪಿಎಂ ಆವಾಸ್‌ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ ಎಂಬ ಶ್ವೇತಪತ್ರವನ್ನು ಹೊರಡಿಸುವ ತಾಕತ್ತು, ದಮ್ಮು ನಿಮ್ಮಲ್ಲಿದೆಯೇ? ಎಂದು ಸವಾಲು ಹಾಕಿದೆ. ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಟೀಕಿಸಿದೆ.

ಸಿದ್ದರಾಮಯ್ಯನವರ "ಸ್ಲೀಪಿಂಗ್‌ ಸರ್ಕಾರ" ಕಳೆದ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ. ಎಚ್ಚರಿಸುವ ಕೆಲಸ ಮಾಡಿದರೆ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುತ್ತದೆ. ಸ್ವಾಮಿ ಸಿದ್ದರಾಮಯ್ಯರವರೇ, ನಿಮ್ಮ ಸಾಧನೆ ಏನು ಹೇಳಿ ಎಂದು ಜನತೆ ಕೇಳಿದರೆ, ನಿಮ್ಮ ಬಳಿ ಉತ್ತರವಿಲ್ಲ. ಬೇರೆಯವರ ಮೇಲೆ ಗೂಬೆ ಕೂರಿಸಲು ನೀವು ಕೊಡುವ ಸಮಯವನ್ನೇನಾದರೂ ರಾಜ್ಯದ ಅಭಿವೃದ್ಧಿಗೆ ಕೊಟ್ಟಿದ್ದರೆ, ಬಹುಶಃ ಇಂದು ನೀವು ಈ ರೀತಿ ಬೊಗಳೆ ಬಿಡುವ ಪರಿಸ್ಥಿತಿ ಬರುತ್ತಿರಲಿಲ್ಲ. ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ. ನಿಮ್ಮ ದುರಾಡಳಿತದಿಂದಾಗಿ ಕರ್ನಾಟಕದ ಜನ ರೋಸಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಟೀಕಿಸಿದೆ.

ಇದನ್ನೂಓದಿ: ಕೇಂದ್ರದ ಅನುದಾನ ತಾರತಮ್ಯದಿಂದ ರಾಜ್ಯಕ್ಕೆ 1,87,867 ಕೋಟಿ ರೂ. ನಷ್ಟವಾಗಿದೆ: ಸಿಎಂ ಸಿದ್ದರಾಮಯ್ಯ

Last Updated : Feb 5, 2024, 3:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.