ETV Bharat / state

ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ; ವಿಜಯೇಂದ್ರ ಬೆಂಬಲಿಗರ ಸಭೆ; ಭಿನ್ನರ ಉಚ್ಚಾಟನೆಗೆ ಆಗ್ರಹ - KARNATAKA BJP RIFT

ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್, ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೆ ಪಕ್ಷದಿಂದ ಕಿತ್ತುಹಾಕಬೇಕು ಎಂದು ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಆಗ್ರಹಿಸಿದ್ದಾರೆ.

former BJP ministers Meeting at Katta Subrahmanya Naidu's residence
ಕಟ್ಟಾ ಸುಬ್ರಹಣ್ಯ ನಾಯ್ಡು ನಿವಾಸದಲ್ಲಿ ಬಿಜೆಪಿ ಮಾಜಿ ಸಚಿವರ ಸಭೆ (ETV Bharat)
author img

By ETV Bharat Karnataka Team

Published : Feb 5, 2025, 6:44 PM IST

Updated : Feb 5, 2025, 8:12 PM IST

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಒಂದೆಡೆ ಭಿನ್ನಮತೀಯ ನಾಯಕರು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಸಭೆ ನಡೆಸಿ ಭಿನ್ನಮತೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹಣ್ಯ ನಾಯ್ಡು ನಿವಾಸದಲ್ಲಿ ಇಂದು ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಕೇಂದ್ರ ವರಿಷ್ಠರು ಮುಲಾಜಿಲ್ಲದೆ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಠಿ (ETV Bharat)

ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, "ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೆ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ" ಎಂದು ಒತ್ತಾಯಿಸಿದರು.

ಒಂದು ಹಂತದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, "ಮಿಸ್ಟರ್ ಯತ್ನಾಳ್, ಯಡಿಯೂರಪ್ಪ ಕುಟುಂಬದವರ ಬಗ್ಗೆ ಮಾತನಾಡುವ ನೀವು ಜೆಸಿಬಿ, ಬಸ್ಸು ಓಡಿಸಿಕೊಂಡಿದ್ದಿರಿ. ಈಗ ಬಿಜಾಪುರದಲ್ಲಿ ಶಿಕ್ಷಣ ಸಂಸ್ಥೆಗಳು, ಕಲಬುರಗಿಯಲ್ಲಿ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದೀರಿ. ಇದಕ್ಕೆ ಎಲ್ಲಿಂದ ಬಂತು ಹಣ? ನಮಗೆ ನಿಮ್ಮ ಬಂಡವಾಳ ಗೊತ್ತಿಲ್ಲವೇ?" ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಯಾರು ಈ ಹಿಂದೆ ಸಸ್ಪೆಂಡ್ ಆಗಿ ಯಡಿಯೂರಪ್ಪ ಅವರ ಕಾಲು ಹಿಡಿದವರು? ಮಿಸ್ಟರ್ ಯತ್ನಾಳ್ ಇದು ಸರಿಯಲ್ಲ. ನಾಲಿಗೆ ಬಿಗಿ ಹಿಡಿದು ಮಾತಾಡಿ, ನಿಮಗೆ ಗೌರವ ಕೊಡ್ತೇವೆ ನಾವು. ಇವರು ಯಾರೂ ಮೂಲ ಬಿಜೆಪಿಯಲ್ಲ. ಬಿಜೆಪಿಗೆ ಮೂಲ ಇವರೆಲ್ಲ. ಸಿದ್ದೇಶ್ವರ್ ಸಂಸ್ಥೆ ನೀವು ಕಟ್ಟಿದ್ದಲ್ಲ. ಅಲ್ಲಿ ಬಂದು ಸಂಸ್ಥೆ ಕಬ್ಜ ಮಾಡಿದ್ದೀರಲ್ಲ. ಅಲ್ಲಿ ನಿಮ್ಮ ಮಗನನ್ನು ಡೈರೆಕ್ಟರ್ ಮಾಡಿದ್ದೀರಲ್ಲ? ಇದು ಕುಟುಂಬ ರಾಜಕಾರಣ ಅಲ್ವಾ" ಎಂದು ಪ್ರಶ್ನೆ ಮಾಡಿದರು.

"ಮಾತೆತ್ತಿದರೆ ನಾನೊಬ್ಬ ಹಿಂದೂ ಹುಲಿ ಎನ್ನುತ್ತೀರಿ. ಜೆಡಿಎಸ್​ಗೆ ಸೇರಿಕೊಂಡು ಟಿಪ್ಪು ಸುಲ್ತಾನ್ ಹುಟ್ಟುಹಬ್ಬ ಆಚರಣೆ ಸಂದರ್ಭ ಬಿರಿಯಾನಿ, ಕಬಾಬ್ ತಿಂದಿದ್ದನ್ನು ಮರೆತುಬಿಟ್ಟಿದ್ದೀರಾ? ಆಗ ನಿಮ್ಮ ನಿಜವಾದ ಹಿಂದುತ್ವ ಎಲ್ಲಿ ಹೋಗಿತ್ತು? ಇಫ್ತಾರ್​ ಕೂಟದಲ್ಲಿ ಭಾಗಿಯಾದಾಗ ಬಿಜೆಪಿ ಸಿದ್ಧಾಂತ ನೆನಪಿರಲಿಲ್ಲವೇ? ಹಿಂದೂ ಹುಲಿ ಜೆಡಿಎಸ್​ಗೆ ಹೋಗಿದ್ದು ಏಕೆ? ಮೊದಲು ಜನತೆಗೆ ಉತ್ತರ ಕೊಡಿ" ಎಂದು ವಾಗ್ದಾಳಿ ನಡೆಸಿದರು.

"ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಅವರ ಪಾತ್ರವಿಲ್ಲ. ವರಿಷ್ಠರ ಸೂಚನೆಯಂತೆ ಅವರು ನೇಮಕ ಮಾಡಿದ್ದಾರೆ. ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯವನ್ನು ಪಡೆದುಕೊಂಡು ಅಂತಿಮವಾಗಿ ಎಲ್ಲರಿಗೂ ಒಪ್ಪಿಗೆಯಾಗುವವರನ್ನೇ ಆಯ್ಕೆ ಮಾಡುತ್ತಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಎಷ್ಟರ ಮಟ್ಟಿಗೆ ಸರಿ?" ಎಂದು ಕೇಳಿದರು.

"ಮಿಸ್ಟರ್ ಕುಮಾರ ಬಂಗಾರಪ್ಪ, ನೀವು ಮೊದಲು ಎಲ್ಲಿದ್ರಿ? ಬಿಜೆಪಿಗೆ ಬರಲು ಎಷ್ಟು ಬಾರಿ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಅವರ ಬಳಿ ಗೋಗರೆದಿರಿ ಎಂಬುದು ಗೊತ್ತಿದೆ. ನೀವೊಬ್ಬ ಕ್ರಿಮಿಕೀಟ, ನಿಮ್ಮಂಥವರು ಎಲ್ಲೇ ಇದ್ದರೂ ಯಾವ ಪಕ್ಷಕ್ಕೂ ಒಳ್ಳೆಯದಲ್ಲ. ಯಡಿಯೂರಪ್ಪ ಅವರ ಕುಟುಂಬದ ಋಣದಲ್ಲಿ ಸೊರಬದಲ್ಲಿ ಗೆದ್ದು ಅಧಿಕಾರ ಅನುಭವಿಸಿದ್ದ ನೀವು ಅವರ ವಿರುದ್ಧವೇ ಷಡ್ಯಂತ್ರ ಮಾಡುತ್ತಿದ್ದೀರ. ಮೊದಲು ನಿಮ್ಮನ್ನು ಪಕ್ಷದಿಂದ ಕಿತ್ತು ಹಾಕಬೇಕು" ಎಂದರು.

"ಮೂರ್ನಾಲ್ಕು ಜನ ಸೇರಿಕೊಂಡು ದೆಹಲಿಗೆ ಹೋದರೆ ನಿಮ್ಮ ಜೊತೆಗೆ ಎಲ್ಲರೂ ಇದ್ದಾರೆ ಎಂಬುದನ್ನು ಬಿಂಬಿಸಲು ಹೊರಟಿದ್ದೀರಿ. ರಾಷ್ಟ್ರೀಯ ನಾಯಕರನ್ನು ಎಷ್ಟು ಬಾರಿ ಭೇಟಿಯಾಗಿ ದೂರು ಕೊಡುತ್ತೀರಿ? ನಿಮನ್ನು ಜನರು ನೋಡಿ ಕಾಮಿಡಿ ಪೀಸ್ ಎಂದು ನಗುತ್ತಿದ್ದಾರೆ. ನಿಮ್ಮ ಹಣೆಬರಹಕ್ಕೆ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ" ಎಂದು ಕಿಡಿಕಾರಿದರು.

"ನಿಮಗೆ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲು ಸಮಯ ಸಿಕ್ಕಿಲ್ಲ. ನಾವು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ರಾಜ್ಯದ ವಸ್ತುಸ್ಥಿತಿ ವಿವರಿಸಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದೀರಿ. ಹಾಗಾದರೆ ಫೋಟೋ ಏಕೆ ಬಿಡುಗಡೆ ಮಾಡಿಲ್ಲ" ಎಂದು ತರಾಟೆಗೆ ತೆಗೆದುಕೊಂಡರು.

"ಮಿಸ್ಟರ್ ಕುಮಾರ ಬಂಗಾರಪ್ಪ, ನಿಮ್ಮ ತಂದೆ ಬಂಗಾರಪ್ಪನವರು ಬಿಜೆಪಿಗೆ ಬಂದಾಗ ನೀವು ಬಿಜೆಪಿಗೆ ಬಂದಿರಲಿಲ್ಲ. ಬಿಜೆಪಿಯ ಸೊರಬ ಕಾರ್ಯಕ್ರಮಕ್ಕೆ ನೀವು ಬಂದಿಲ್ಲ. ಮೂಲ ಬಿಜೆಪಿಯವರನ್ನು ನೀವು ಮರೆತಿದ್ದಕ್ಕೆ ನೀವು ಸೋಲಬೇಕಾಯ್ತು. 2023ರ ಚುನಾವಣೆ ಬಳಿಕ ಕ್ಷೇತ್ರ ಮರೆತಿದ್ದೀರಿ. ಸೋತ ಮೇಲೆ ಕಾಂಗ್ರೆಸ್ ಸೇರುವ ಪ್ರಯತ್ನ ಮಾಡಿದ್ರಿ. ಸಹೋದರ ಮಧು ಬಂಗಾರಪ್ಪ ಸೇರಿಸಿಕೊಳ್ಳಬಾರದೆಂದು ಅಡ್ಡಗಾಲಾದ್ರು. ಈಗ ನ್ಯಾಷನಲ್ ಲೀಡರ್ ಆಗ್ಬೇಕು ಎಂದುಕೊಂಡಿದ್ದೀರಾ? ಬಿಜೆಪಿ ಯಾವ ಹೋರಾಟಕ್ಕೂ ನೀವು ಬಂದಿಲ್ಲ, ಕಾಂಗ್ರೆಸ್ ವಿರುದ್ಧ ನಿಮ್ಮ ಹೋರಾಟ ಇರಬೇಕಿತ್ತು. ಮಿಸ್ಟರ್ ಕುಮಾರ ಬಂಗಾರಪ್ಪ ಕಾಂಗ್ರೆಸ್ ಸೇರಲು ಯತ್ನಿಸಿರಲಿಲ್ವಾ?" ಎಂದು ರೇಣುಕಾಚಾರ್ಯ ವಾಗ್ಧಾಳಿ ನಡೆಸಿದರು.

"ಮಿಸ್ಟರ್ ಬಿ.ಪಿ.ಹರೀಶ್, ನೀವು ಶಾಸಕರಾಗಲು ಯಡಿಯೂರಪ್ಪ ಕಾರಣ ಎಂಬುದನ್ನು ಮರೆಯಬೇಡಿ. ಹರಿಹರದಲ್ಲಿ ನಿಮ್ಮ ಯೋಗ್ಯತೆ ಏನೆಂಬುದು ಗೊತ್ತಿದೆ. ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ ನೀವು ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಾ? ಬಿ ಫಾರಂ ಪಡೆಯಲು ಯಡಿಯೂರಪ್ಪನವರ ಮನೆಗೆ ಎಷ್ಟು ಬಾರಿ ಬಂದಿದ್ರಿ ಎಂಬುದನ್ನು ಮರೆಯಬೇಡಿ. ನೀವು ತಿಪ್ಪರಲಾಗ ಹಾಕಿದರೂ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನು ಬದಲಾವಣೆ ಮಾಡುವುದಿಲ್ಲ" ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ. ವಿಜಯೇಂದ್ರ; 8 - 10 ದಿನದಲ್ಲಿ ಚುನಾವಣೆ

Last Updated : Feb 5, 2025, 8:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.