ETV Bharat / state

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಗೆ ಇಂದು ಮತದಾನ - KARNATAKA BYELETION

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

Byelection karnataka bypoll
ಉಪಚುನಾವಣೆಗೆ ಇಂದು ಮತದಾನ (ETV Bharat)
author img

By ETV Bharat Karnataka Team

Published : Nov 12, 2024, 9:34 PM IST

Updated : Nov 13, 2024, 6:12 AM IST

ರಾಮನಗರ/ಹಾವೇರಿ/ಬಳ್ಳಾರಿ: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ವೋಟಿಂಗ್ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ. ಮತ ಪೆಟ್ಟಿಗೆಗಳು ಹಾಗೂ ಚುನಾವಣಾ ಸಾಮಗ್ರಿ ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಮಂಗಳವಾರ ಅಚ್ಚುಕಟ್ಟಾಗಿ ನಡೆಯಿತು. ಬಳಿಕ ಎಲ್ಲ ಚುನಾವಣಾ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್​ನಿಂದ ಸಿ.ಪಿ.ಯೋಗೇಶ್ವರ ಮತ್ತು ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳಿದ್ದು, 62 ನಗರ ವ್ಯಾಪ್ತಿ ಹಾಗೂ 214 ಗ್ರಾಮಾಂತರ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಒಟ್ಟು 2,32,949 ಮತದಾರರಿದ್ದು, 1,12,324 ಪುರುಷ ಹಾಗೂ 1,20,617 ಮಹಿಳಾ ಮತದಾರರಿದ್ದಾರೆ. 8 ಜನ ತೃತೀಯ ಲಿಂಗಿಗಳಿದ್ದಾರೆ. 85 ವರ್ಷಕ್ಕೂ ಮೇಲ್ಪಟ್ಟ ಒಟ್ಟು 1,613 ಮತದಾರರಲ್ಲಿ 612 ಪುರುಷರು ಹಾಗೂ 1,001 ಮಹಿಳೆಯರಿದ್ದಾರೆ. 3,011 ಜನ ದಿವ್ಯಾಂಗರಲ್ಲಿ 1,669 ಪುರುಷ ಹಾಗೂ 1,342 ಮಹಿಳಾ ಮತದಾರರಿದ್ದಾರೆ. ಇನ್ನು 8,338 ಯುವ ಮತದಾರರಿದ್ದಾರೆ. ಜೊತೆಗೆ 47 ಸೇವಾ ಮತದಾರರು ಮತಹಕ್ಕು ಹೊಂದಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ: ಶಿಗ್ಗಾಂವಿ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್​ನಿಂದ ಯಾಸೀರ್ ಖಾನ್ ಪಠಾಣ್ ನಡುವೆ ನೇರ ಹಣಾಹಣಿ ಇದೆ. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ- 2,37,525. ಈ ಪೈಕಿ 1,21,443 ಪುರುಷರು ಮತ್ತು 1,16,076 ಮಹಿಳೆಯರು ಹಾಗೂ ಇತರ 6 ಮತದಾರರಿದ್ದಾರೆ. ಒಟ್ಟು 241 ಮತಗಟ್ಟೆಗಳಿದ್ದು, 92 ಸೂಕ್ಷ್ಮ ಮತ್ತು 141 ಸಾಮಾನ್ಯ ಮತಟ್ಟೆಗಳಿವೆ.

ಭದ್ರತೆಯ ವಿವರ: ಎಸ್​​ಪಿ, ಎಎಸ್​​ಪಿ, 4 ಡಿವೈಎಸ್​​ಪಿ, 12 ಸಿ‌ಪಿಐ, 24 ಪಿಎಸ್​​ಐ, 68 ಎ‌ಎಸ್​​ಐ, ಸೇರಿ 716 ಪೊಲೀಸ್ ಸಿಬ್ಬಂದಿ ಜೊತೆಗೆ 4 ಕೆಎಸ್​ಆರ್​ಪಿ ಮತ್ತು ಡಿಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸಂಡೂರು ವಿಧಾನಸಭಾ ಕ್ಷೇತ್ರ: ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಅನ್ನಪೂರ್ಣ ತುಕಾರಾಂ ಮತ್ತು ಎನ್​ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಕಣದಲ್ಲಿದ್ದಾರೆ. ಇಲ್ಲಿ ಒಟ್ಟು 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1,215 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಈ ಪೈಕಿ 1,17,789 ಪುರುಷ ಮತ್ತು 1,18,282 ಮಹಿಳೆ ಹಾಗೂ 29 ತೃತೀಯ ಲಿಂಗಿ ಮತದಾರರು ಇದ್ದಾರೆ.

ವೇತನ ಸಹಿತ ರಜೆ: ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವ ವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರ ಉದ್ಯಮ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಪ್ರತಿಷ್ಠೆಯ ಕಣವಾದ ಸಂಡೂರು ಉಪಚುನಾವಣೆ: ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ

Last Updated : Nov 13, 2024, 6:12 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.