ETV Bharat / state

ರಾಜ್ಯ ಸಾರಿಗೆ ಬಸ್ ಪ್ರಯಾಣ​ ದರದಲ್ಲಿ ಏರಿಕೆ: ಎಷ್ಟು, ಯಾವಾಗಿನಿಂದ ಎಂಬುದನ್ನು ತಿಳಿಯಿರಿ - TRANSPORT BUS FARE HIKE

ರಾಜ್ಯದಲ್ಲಿ ಸಾರಿಗೆ ಬಸ್​ ಪ್ರಯಾಣ ದರವನ್ನು ಶೇ.15ರಷ್ಟು ಏರಿಕೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

TRANSPORT BUS FARE HIKE
ಬಸ್​ ನಿಲ್ದಾಣ (ETV Bharat)
author img

By ETV Bharat Karnataka Team

Published : Jan 2, 2025, 6:23 PM IST

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣಿಕರಿಗೆ ಸರ್ಕಾರ​ ದರ ಹೆಚ್ಚಳದ ಬರೆ ಹಾಕಿದೆ. ಟಿಕೆಟ್ ದರವನ್ನು 15%ರಷ್ಟು ಹೆಚ್ಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಜನವರಿ 5ರಿಂದ ಹೊಸ ದರ ಪರಿಷ್ಕರಣೆ ಅನ್ವಯವಾಗಲಿದೆ. ಎಲ್ಲಾ ಶ್ರೇಣಿಯ ಬಸ್​​ಗಳಿಗೆ ಸಮಾನವಾಗಿ 15%ರಷ್ಟು ದರ ಪರಿಷ್ಕರಣೆ ಆಗಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.‌

ಹೆಚ್​.ಕೆ.ಪಾಟೀಲ್​ (ETV Bharat)

ಈ ಹಿಂದೆ 2015ರಲ್ಲಿ ದರ ಪರಿಷ್ಕರಣೆಯಾಗಿತ್ತು.‌ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಡೀಸೆಲ್ ವೆಚ್ಚ 2015ರಲ್ಲಿ ನಿತ್ಯ 9.14 ಕೋಟಿ ರೂ. ಇತ್ತು, ಈಗ ಅದು 13.21 ಕೋಟಿ ರೂ‌.ಗೆ ಹೆಚ್ಚಳವಾಗಿದೆ. ಸಿಬ್ಬಂದಿ ವೆಚ್ಚವೂ ನಿತ್ಯ 12.85 ಕೋಟಿಯಿಂದ ಪ್ರಸ್ತುತ 18.36 ಕೋಟಿ ರೂ.ಗೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ರಸ್ತೆ ಸಾರಿಗೆ ನಿಗಮಗಳಿಗೆ ನಿತ್ಯ 9.56 ಕೋಟಿ ಹೆಚ್ಚುವರಿ ಹೊರೆ ಬೀಳುತ್ತಿದೆ. ಅದನ್ನು ಸರಿದೂಗಿಸಲು ದರ ಪರಿಷ್ಕರಣೆ ಮಾಡಲಾಗುತ್ತಿದೆ. ಪರಿಷ್ಕರಣೆ ಮಾಡುವುದರಿಂದ ಪ್ರತಿ ತಿಂಗಳು 74.85 ಕೋಟಿ ರೂ. ಆದಾಯ ಹೆಚ್ಚಾಗಲಿದೆ. ಶಕ್ತಿ ಯೋಜನೆಗೆ 5,015 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಶಕ್ತಿ ಯೋಜನೆಗೆ ಪ್ರತಿ ತಿಂಗಳು 417.92 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಆಗುವುದಿಲ್ಲ ಎಂದು ಹೆಚ್.ಕೆ.ಪಾಟೀಲ್ ಹೇಳಿದರು.

2,000 ಕೋಟಿ ರೂ. ಸಾಲಕ್ಕೆ ಸಂಪುಟ ಸಭೆ ಅಸ್ತು: ಸಚಿವ ಸಂಪುಟ ಸಭೆಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಹಾಗೂ ಇಂಧನ ಬಾಕಿ ಹೊಣೆಗಾರಿಕೆ ಪಾವತಿಸಲು ಒಟ್ಟು 2000 ಕೋಟಿ ರೂ.ಗಳನ್ನು ಸರ್ಕಾರದ ಖಾತರಿ/ಗ್ಯಾರಂಟಿಯೊಂದಿಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು 31.12.2024 ರಂದು ಹೊರಡಿಸಿರುವ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು.

ಇದನ್ನೂ ಓದಿ: ಬಸ್​​​​ ಪ್ರಯಾಣಿಕರಿಗೆ ಶಾಕ್​ ಸಂಭವ: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆ ಸಾಧ್ಯತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.