ETV Bharat / state

ಸಿನಿಮಾ ಟಿಕೆಟ್ ಮೇಲೆ ಸೆಸ್: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್ - Cine And Cultural Activists Bill

author img

By ETV Bharat Karnataka Team

Published : Jul 24, 2024, 7:14 AM IST

ಸಿನಿಮಾ ಟಿಕೆಟ್ ಮೇಲೆ ಸೆಸ್ ವಿಧಿಸುವ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಅಂಗೀಕಾರಗೊಂಡಿದೆ.

cine and cultural activists bill
ಸಿನಿಮಾಮಂದಿರ, ವಿಧಾನಸಭೆ (ETV Bharat)

ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಉದ್ದೇಶವೇನು?: ಚಿತ್ರಮಂದಿರಗಳು ಮಾರಾಟ ಮಾಡುವ ಟಿಕೆಟ್‌ ದರದ ಮೇಲೆ ಶೇಕಡಾ 1ರಿಂದ 2ರಷ್ಟು ಸೆಸ್ ಸಂಗ್ರಹಿಸಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಈ ವಿಧೇಯಕ ಸರ್ವಾನುಮತದಿಂದ ಅಂಗೀಕಾರವಾಯಿತು. ಪ್ರತಿಪಕ್ಷ ಸದಸ್ಯರೂ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು.

ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕ್ಷೇಮಾಭಿವೃದ್ಧಿ ಮಂಡಳಿ ರಚನೆಯಾಗಲಿದೆ. ಅದರ ಮೂಲಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರನ್ನು ನೋಂದಣಿ ಮಾಡಿಸಿ, ಅವರಿಗೆಲ್ಲ ಗುರುತಿನ ಚೀಟಿ ಕೊಟ್ಟು, ಆರೋಗ್ಯ ವಿಮೆ, ಜೀವವಿಮೆ ಮತ್ತಿತರ ಸಾಮಾಜಿಕ ಭದ್ರತೆ ನೀಡುವ ಅಂಶಗಳನ್ನು ಮಸೂದೆ ಒಳಗೊಂಡಿದೆ.

ಈ ಮಸೂದೆಯಂತೆ ಸಿನಿಮಾ ಟಿಕೆಟ್ ಹಾಗೂ ಒಟಿಟಿ ಚಂದಾದಾರಿಕೆ ಮೇಲೆ ಶೇಕಡಾ 2 ಮೀರದಂತೆ ಶೇಕಡಾ 1ಕ್ಕಿಂತ ಕಡಿಮೆಯಾಗದಂತೆ ಸೆಸ್ ವಿಧಿಸಲಿದೆ. ಈ ಸೆಸ್ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ನಿಧಿಗೆ ವರ್ಗಾವಣೆ ಮಾಡಲಾಗುವುದು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡನೆ: ಬಿಜೆಪಿ ಸದಸ್ಯರಿಂದ ತೀವ್ರ ಆಕ್ಷೇಪ - Assembly session

ETV Bharat Logo

Copyright © 2024 Ushodaya Enterprises Pvt. Ltd., All Rights Reserved.