ETV Bharat / state

KSET-2024: ತಾತ್ಕಾಲಿಕ ಫಲಿತಾಂಶ ಪ್ರಕಟ - KSET RESULTS

ನವೆಂಬರ್‌ 24ರಂದು ನಡೆದ ಕೆ-ಸೆಟ್‌ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

KARNATAKA EXAMINATIONS AUTHORITY
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETV Bharat)
author img

By ETV Bharat Karnataka Team

Published : Jan 4, 2025, 9:40 PM IST

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್‌) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.

ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ನವೆಂಬರ್‌ 24ರಂದು ನಡೆದ ಪರೀಕ್ಷೆಯಲ್ಲಿ ಒಟ್ಟು 6,302 ಮಂದಿ ಅರ್ಹತೆ ಪಡೆದಿದ್ದು, ಅಷ್ಟೂ ಮಂದಿಯ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆ-ಸೆಟ್‌ ಪರೀಕ್ಷೆಗೆ ಒಟ್ಟು 1,06,433 ಮಂದಿ ನೋಂದಾಯಿಸಿಕೊಂಡು, 89,416 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,302 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ 3,275 ಪುರುಷರು ಹಾಗೂ 3,020 ಮಹಿಳೆಯರು ಹಾಗೂ 7 ಮಂದಿ ತೃತೀಯ ಲಿಂಗಿಗಳು ಇದ್ದಾರೆ. ವಿಶೇಷ ಸಾಮರ್ಥ್ಯವುಳ್ಳ 293 ಮಂದಿ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ವಿವರಿಸಿದ್ದಾರೆ.

ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಸಂಖ್ಯೆಯು ಎರಡೂ ಪತ್ರಿಕೆಗಳಿಗೆ (ಪೇಪರ್ I ಮತ್ತು ಪೇಪರ್ II) ಹಾಜರಾದ ಒಟ್ಟು ಅಭ್ಯರ್ಥಿಗಳ ಶೇ. 6ರಷ್ಟಿದೆ. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಸ್ ಟಿಕೆಟ್ ದರ ಏರಿಕೆ - ಇಂದು ಮಧ್ಯರಾತ್ರಿಯಿಂದಲೇ ಜಾರಿ: ಎಲ್ಲಿಗೆ ಎಷ್ಟು ದರ ತಿಳಿಯಿರಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.