ETV Bharat / state

ಸರ್ಕಾರಿ ನೌಕರ, ತೆರಿಗೆ ಪಾವತಿದಾರರ ಕಾರ್ಡ್​ ಮಾತ್ರ ರದ್ದು: ಆಹಾರ ಇಲಾಖೆ ಮಾರ್ಗಸೂಚಿ - RATION CARD CANCEL

ಆದಾಯ ತೆರಿಗೆ ಪಾವತಿದಾರರನ್ನು ಬಿಟ್ಟು, ಇತರರ ಬಿಪಿಎಲ್ ರದ್ದು ಮಾಡದಿರಲು ಆಹಾರ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ration card
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Nov 25, 2024, 3:08 PM IST

ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನೂ ರದ್ದು ಮಾಡದಿರುವ ಬಗ್ಗೆ ಆಹಾರ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಆಹಾರ ಇಲಾಖೆ ಆಯುಕ್ತರು, ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಯನ್ನು ನೀಡಲು ಸರ್ಕಾರದಿಂದ ನಿಗದಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ, ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮಗಳನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಪತ್ರದಲ್ಲಿ ನಿರ್ದೇಶಿಸಲಾಗಿತ್ತು. ಇದೀಗ ಈ ಸಂಬಂಧ ಕೆಲ ಮಾರ್ಗಸೂಚಿಯನ್ನು ಇಲಾಖೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್​ನಲ್ಲಿ ಅವಕಾಶ ನೀಡಲಾಗಿದೆ. ನೋಡಲ್ ಅಧಿಕಾರಿ ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದ್ದು ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಲಾಗಿದೆ.

ಹೀಗೆ ಮರುಸ್ತಾಪನೆಗೊಂಡಿರುವ ಪಿಹೆಚ್​ಹೆಚ್​(PHH) ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು ಎನ್​ಐಸಿ(NIC) ಸಹಯೋಗದೊಂದಿಗೆ 25/11/2024ರೊಳಗೆ ಜಂಟಿ ನಿರ್ದೇಶಕರು ಕ್ರಮವಹಿಸಬೇಕು. ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ಕ್ರಮ ವಹಿಸಬೇಕು. ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು, ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸಬೇಕು ಎಂದು ತಿಳಿಸಲಾಗಿದೆ.

ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ವಹಿಸಬೇಕು. 25/11/2024ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ವಕ್ಫ್ ನೋಟಿಸ್ ಜಾರಿ: ಸಚಿವ ಜಿ.ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.