ETV Bharat / state

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ವೈದ್ಯಕೀಯ ಭತ್ಯೆ ದರ ಹೆಚ್ಚಿಸಿದ ಸರ್ಕಾರ - Medical Allowance Hike

author img

By ETV Bharat Karnataka Team

Published : Sep 8, 2024, 8:24 PM IST

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ವೈದ್ಯಕೀಯ ಭತ್ಯೆ ದರ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

medical allowance
ಸಾಂದರ್ಭಿಕ ಚಿತ್ರ (ETV Bharat)

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಗ್ರೂಪ್ 'ಸಿ' ಮತ್ತು ಗ್ರೂಪ್ 'ಡಿ' ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆಗಸ್ಟ್ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.

5-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆಎಎಸ್​​ಎಸ್) ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ. 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿಸಲಾಗಿದೆ. 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತ್ರತವಾದ ಆದೇಶಿಸಲಾಗಿದೆ.

ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ಅದರಂತೆ, ಸರ್ಕಾರ ದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.

ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್​ಎಸ್) ಸೌಲಭ್ಯ ಅನುಷ್ಠಾನ ಆಗುವವರೆಗೆ ಈ ವೈದ್ಯಕೀಯ ಸೌಲಭ್ಯ ಲಭ್ಯವಿರಲಿದೆ. ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆ ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶ ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ. ಹಾಗೂ ನಗದುರಹಿತ (ಕೆಎಎಸ್​ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರ ಈ ಸೌಲಭ್ಯವನ್ನು ಪಡೆಯಲು ಅರ್ಹವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹೆಚ್​ಎಂಟಿಗೆ ಕಾಯಕಲ್ಪ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ಲಾನ್​ಗಳೇನು? - Bengaluru HMT Watch Company

ETV Bharat Logo

Copyright © 2024 Ushodaya Enterprises Pvt. Ltd., All Rights Reserved.