ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬಿನ ಅಂಶ ಪತ್ತೆಯಾಗಿರುವ ಆರೋಪದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಮುಜರಾಯಿ ಇಲಾಖೆ, ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿನ ಪ್ರಸಾದಗಳಿಗೆ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆ, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ತಿಳಿಸಿದೆ.

ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ತಿರುಪತಿ ಲಡ್ಡುವಿನಲ್ಲಿ ತುಪ್ಪದಲ್ಲಿ ದನದ ಮಾಂಸ, ಮೀನಿನ ಎಣ್ಣೆ ಅಂಶ ಪತ್ತೆಯಾಗಿರುವುದು ದೇಶಾದ್ಯಂತ ಸಾಕಷ್ಟು ತಲ್ಲಣ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆ ಅಧಿಸೂಚಿತ ದೇವಾಲಯಗಳಲ್ಲಿ ಪ್ರಸಾದಗಳಿಗೆ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ: ತಿರುಪತಿ ಲಡ್ಡು ಪ್ರಕರಣ: ಸಂಜೆಯೊಳಗೆ ವರದಿ ನೀಡುವಂತೆ ಟಿಟಿಡಿ ಇಒಗೆ ಸಿಎಂ ಚಂದ್ರಬಾಬು ನಾಯ್ಡು ಆದೇಶ - Tirupati Laddu Row