ETV Bharat / state

ಕೇಂದ್ರ ಬಜೆಟ್ ಪೂರ್ವಭಾವಿ ಸಭೆ: ಮಹದಾಯಿ ಸೇರಿ ರಾಜ್ಯದ ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರ - UNION PRE BUDGET MEETING

ಕೇಂದ್ರ ಬಜೆಟ್ ಪೂರ್ವಭಾವಿ ಸಭೆಯಲ್ಲಿ ರಾಜ್ಯದ ಪ್ರಮುಖ ಬೇಡಿಕೆಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರದ ಮುಂದಿಟ್ಟಿದ್ದಾರೆ.

UNION PRE BUDGET MEETING
ಕೃಷ್ಣ ಬೈರೇಗೌಡ (ETV Bharat)
author img

By ETV Bharat Karnataka Team

Published : Dec 21, 2024, 6:58 AM IST

ಬೆಂಗಳೂರು: ಕೇಂದ್ರ ಬಜೆಟ್ ಪೂರ್ವ ಸಿದ್ಧತೆ ಆರಂಭವಾಗಿದೆ. ರಾಜ್ಯ ಸರ್ಕಾರ ಕರ್ನಾಟಕದ ವಿಷ್ ಲಿಸ್ಟ್ ಅನ್ನು ಕೇಂದ್ರದ ಮುಂದಿಟ್ಟಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಬೇಡಿಕೆಗಳನ್ನು ಕೇಂದ್ರ ಬಜೆಟ್ ಪೂರ್ವಭಾವಿ ಸಭೆಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪೂರ್ವ - ಬಜೆಟ್ ಸಂಬಂಧಿಸಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆ ಶುಕ್ರವಾರ ರಾಜಸ್ಥಾನದ ಜೈಸಲ್ಮೇರ್​​ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಮತ್ತು ಮುಖ್ಯಮಂತ್ರಿಗಳ ಪರವಾಗಿ ಸಚಿವ ಕೃಷ್ಣ ಬೈರೇಗೌಡ ಸಭೆಯಲ್ಲಿ ಪಾಲ್ಗೊಂಡು ಕೆಲ ಸಲಹೆ, ಬೇಡಿಕೆಗಳನ್ನು ಕೇಂದ್ರದ ಮುಂದಿಟ್ಟಿದ್ದಾರೆ.

ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆಯ ಅನುದಾನ ನೀಡುವಂತೆ ಕೋರಿದರು. ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಈ ಹಿಂದೆಯೇ ಘೋಷಿಸಿದ್ದ ₹5,300 ಕೋಟಿ ಬಿಡುಗಡೆಗೂಳಿಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಪೂರ್ವ ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಕನ್ನಡವೇ ಶಿಕ್ಷಣದ ಭಾಷೆಯಾಗಿರಲಿ: ಗೊ.ರು.ಚನ್ನಬಸಪ್ಪ

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಅನುಮೋದನೆ ನೀಡಿ ಎಂದು ಮನವಿ ಮಾಡಿದರು. 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿರುವ ವಿಶೇಷ ಅನುದಾನ ₹11,495 ಕೋಟಿ ಬಿಡುಗಡೆಗೊಳಿಸಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಗೌರವಧನ ₹5,000 ಮತ್ತು ಅಡುಗೆಯವರು ಮತ್ತು ಸಹಾಯಕರಿಗೆ ₹2000ಕ್ಕೆ ಹೆಚ್ಚಳಗೊಳಿಸುವಂತೆ ಸಚಿವರು ಆಗ್ರಹಿಸಿದರು.

ಪ್ರಧಾನಮಂತ್ರಿ ಆವಾಸ್​​ ಯೋಜನೆಯ ನೆರವನ್ನು ನಗರ ಪ್ರದೇಶದ ಮನೆಗಳಿಗೆ ₹1.5 ಲಕ್ಷದಿಂದ ₹5 ಲಕ್ಷಕ್ಕೆ ಮತ್ತು ಗ್ರಾಮೀಣ ಮನೆಗಳಿಗೆ ₹72000ರಿಂದ ₹3 ಲಕ್ಷಕ್ಕೆ ಹೆಚ್ಚಿಸಿ ಹಾಗೂ ವೃದ್ಧಾಪ್ಯ, ವಿಧವೆಯರು ಮತ್ತು ವಿಕಲಚೇತನರ ಪಿಂಚಣಿ ಹೆಚ್ಚಿಸಬೇಕು ಎಂದು ಕೃಷ್ಣ ಬೈರೇಗೌಡ ಕೋರಿದರು.

ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಭೂರಿ ಭೋಜನದ ವ್ಯವಸ್ಥೆ: ಇಲ್ಲಿದೆ ಮೆನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.