ETV Bharat / state

ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ರಾಜ್ಯದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಾಣ - International Democracy Day - INTERNATIONAL DEMOCRACY DAY

ರಾಜ್ಯ ಸರ್ಕಾರದ ವತಿಯಿಂದ ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ. ಅಂದು ಬೀದರ್​ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ.

meeting
ಪೂರ್ವಸಿದ್ಧತಾ ಸಭೆ (ETV Bharat)
author img

By ETV Bharat Karnataka Team

Published : Aug 26, 2024, 8:53 PM IST

ಬೆಂಗಳೂರು: ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಇಂದು ಸಂಜೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಸೆಪ್ಟೆಂಬರ್ 15ರಂದು ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಬೀದರ್​ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರಂದು ಬೆಳಗ್ಗೆ 8.30ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ ಎಂದರು.

ಸೆಪ್ಟೆಂಬರ್ 15ರ ಆ ದಿನ ಪ್ರಜಾಪ್ರಭುತ್ವದ ಭಾಗವಾಗಿರುವ ಎಲ್ಲ ಜನರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ - ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ನಾಳೆ ಕೆಪಿಎಸ್​ಸಿ ಪರೀಕ್ಷೆ: ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದ ಕೆಎಸ್ಆರ್​ಟಿಸಿ - KPSC EXAM

ETV Bharat Logo

Copyright © 2025 Ushodaya Enterprises Pvt. Ltd., All Rights Reserved.