ETV Bharat / state

ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೇ ಇಲ್ಲದೆ ನೌಕರರನ್ನು ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ: ಆದೇಶ - TRANSFER GUIDELINES

ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೇ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಸಿಎಂ ಸಮ್ಮತಿ ಇಲ್ಲದೆ ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ
ವಿಧಾನ ಸೌಧ, ಬೆಂಗಳೂರು (ETV Bharat)
author img

By ETV Bharat Karnataka Team

Published : 4 hours ago

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಅನುಮೋದನೆ ಪಡೆಯದೇ ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದೆ.

ವಿಶೇಷ ಕಾರಣಗಳಿಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ. ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕ ಎನಿಸಿದ್ದಲ್ಲಿ ಅಂಥ ಪ್ರಕರಣಗಳನ್ನು ಚಾಚೂತಪ್ಪದೇ ಮುಖ್ಯಮಂತ್ರಿಯವರಿಗೆ ಸಲ್ಲಿಸಿ, ಅನುಮೋದನೆ ಪಡೆದು ವರ್ಗಾವಣೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಜೂನ್ 25, 2024ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಆ ಆದೇಶದಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡುವ ವರ್ಗಾವಣೆಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ. 25.06.2024, 10.07.2024 ಮತ್ತು 16.07.2024ರ ಸರ್ಕಾರಿ ಆದೇಶಗಳಲ್ಲಿ 2024 -25ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ 25.06.2024ರಿಂದ 31.07.2024 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿತ್ತು.

31.07.2024ರಂದು 2024ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ಮುಕ್ತಾಯಗೊಂಡಿದೆ. ಆದರೆ ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು ಜಾರಿಗೊಳಿಸಿ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಸಿಎಂ ಅನುಮತಿ ಇಲ್ಲದೇ ವರ್ಗಾವಣೆ ಮಾಡಿದ್ರೆ ಕ್ರಮ: ಈಗಾಗಲೇ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆ ಪಡೆಯಬೇಕು. ಒಂದು ವೇಳೆ ಪೂರ್ವಾನುಮೋದನೆ ಪಡೆಯದೇ ಯಾವುದೇ ವರ್ಗಾವಣೆ ಮಾಡಿದ್ದಲ್ಲಿ, ವರ್ಗಾವಣೆ ಮಾಡಿ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಗೆ ಕಡತದಲ್ಲಿ ಸಲ್ಲಿಸಿದರೆ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಲಾಗುತ್ತದೆ. ಅಷ್ಟೇ ಅಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಖಡಕ್ ಸೂಚನೆ ನೀಡಿದೆ.‌

ಇದನ್ನೂ ಓದಿ: ₹9,823 ಕೋಟಿ ಹೂಡಿಕೆಯ ಯೋಜನೆಗಳಿಗೆ ಸಿಎಂ ಅಸ್ತು: ರಾಜ್ಯದಲ್ಲಿ 5,605 ಉದ್ಯೋಗ ಸೃಷ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.