ETV Bharat / state

ಝೀಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ: ಆರೋಗ್ಯ ಇಲಾಖೆ ಸಲಹೆ - Zika virus Advisory

ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಝೀಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ. ಸೋಂಕಿನ ಬಗ್ಗೆ ಭಯಬೇಡ. ಆದರೆ, ಮುನ್ನೆಚ್ಚರವಿರಲಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಝೀಕಾ ವೈರಸ್ ಸೋಂಕಿನ ಬಗ್ಗೆ  ಆರೋಗ್ಯ ಇಲಾಖೆ ಸಲಹೆ
ಝೀಕಾ ವೈರಸ್ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಸಲಹೆ (ETV Bharat)
author img

By ETV Bharat Karnataka Team

Published : Jul 7, 2024, 9:10 PM IST

ಬೆಂಗಳೂರು: ಝೀಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ. ಝೀಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗ್ಯೂ, ಚಿಕೂನ್‌ ಗುನ್ಯಾ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಈ ವೈರಸ್ ಸೋಂಕನ್ನು ಸಹ ಹರಡುತ್ತವೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಝೀಕಾ ವೈರಸ್ ಸೋಂಕಿನ ಲಕ್ಷಣಗಳು: ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ. ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೋಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಝೀಕಾ ವೈರಸ್ ಪತ್ತೆ ಹಚ್ಚುವ ವಿಧಾನ: ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು. ಝೀಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮಗಳು ಹೀಗಿವೆ..

  • ಝೀಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.
  • ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.
  • ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.
  • ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.
  • ಝೀಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.

ಝೀಕಾ ವೈರಸ್ ಸೋಂಕು ತಡೆಯಲು ಮುಂಜಾಗ್ರತಾ ಕ್ರಮ: ಸ್ವಚ್ಚ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳು. ಈಡಿಸ್ ಸೊಳ್ಳೆಗಳು ಕಚ್ಚುವಿಕೆಯಿಂದ ಪಾರಾಗಲು ಎಚ್ಚರಿಕೆ ಅಗತ್ಯವಾಗಿದೆ. ಹಾಗಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು. ಕಸ ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.

ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ. ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಿ ಝೀಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ: ಡೆಂಗ್ಯೂ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.