ETV Bharat / state

ಮರಣ ಇಚ್ಚೆಯ ಉಯಿಲು ಕುರಿತ ಸುಪ್ರೀಂಕೋರ್ಟ್ ತೀರ್ಪು ಜಾರಿಗೆ ಸೂಚನೆ ನೀಡಲು ಕೋರಿ ಅರ್ಜಿ: ಸರ್ಕಾರಕ್ಕೆ ನೋಟಿಸ್ - Bequest of dying will

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.

ಮರಣ ಇಚ್ಚೆಯ ಉಯಿಲು ಕುರಿತ ಸುಪ್ರೀಂಕೋರ್ಟ್ ತೀರ್ಪು ಜಾರಿಗೆ ಸೂಚನೆ ನೀಡಲು ಕೋರಿ ಅರ್ಜಿ: ಸರ್ಕಾರಕ್ಕೆ ನೋಟಿಸ್
ಮರಣ ಇಚ್ಚೆಯ ಉಯಿಲು ಕುರಿತ ಸುಪ್ರೀಂಕೋರ್ಟ್ ತೀರ್ಪು ಜಾರಿಗೆ ಸೂಚನೆ ನೀಡಲು ಕೋರಿ ಅರ್ಜಿ: ಸರ್ಕಾರಕ್ಕೆ ನೋಟಿಸ್ (ETV Bharat)
author img

By ETV Bharat Karnataka Team

Published : Sep 25, 2024, 10:39 PM IST

ಬೆಂಗಳೂರು : ವಾಸಿಯಾಗಂತಹ ಮರಣಾಂತಿಕ ಕಾಯಿಲೆಗಳಿಗೆ ತುತ್ತಾದ ವ್ಯಕ್ತಿಯೊಬ್ಬ ಮರಣಶಯ್ಯೆಯಲ್ಲಿದ್ದಾಗ ಆತನಿಗೆ ಘನತೆಯ ಸಾವು ಸಾಧ್ಯವಾಗಿಸುವ ‘ಮರಣ ಇಚ್ಛೆಯ ಉಯಿಲು’ (ಲಿವಿಂಗ್ ವಿಲ್) ಬರೆಯುವ ಕುರಿತು ಸುಪ್ರೀಂಕೋರ್ಟ್ 2023ರಲ್ಲಿ ಜಾರಿಗೊಳಿಸಿರುವ ‘ಸುಧಾರಿತ ವೈದ್ಯಕೀಯ ನಿರ್ದೇಶನಗಳನ್ನು’ ಕರ್ನಾಟಕದಲ್ಲಿ ಜಾರಿಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಹೈಕೋರ್ಟ್ ವಕೀಲರೂ ಆಗಿರುವ ಬೆಂಗಳೂರು ನಿವಾಸಿ 76 ವರ್ಷದ ಶಿವಕುಮಾರ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿತು.

ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ. ಮನುಷ್ಯ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದು, ಆತನಿಗೆ ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಅನುಮತಿ ನೀಡಬಹುದು. ಪುನಶ್ಚೇತನಗೊಳ್ಳುವ ಯಾವುದೇ ಸಾಧ್ಯತೆಗಳು ಇಲ್ಲದ ಪರಿಸ್ಥಿತಿಯಲ್ಲಿ, ಬದುಕಿರಲು ಇಚ್ಛಿಸದ ವ್ಯಕ್ತಿಗೆ ಸಂಕಷ್ಟದಲ್ಲಿ ಜೀವನ ಮುಂದುವರಿಸುವ ಸ್ಥಿತಿ ಇರಬಾರದು. ಒಂದು ವೇಳೆ ವ್ಯಕ್ತಿ ಅಥವಾ ರೋಗಿಯು ತಾನು ಭವಿಷ್ಯದಲ್ಲಿ ಕೋಮಾ ಸ್ಥಿತಿಗೆ ತಲುಪಿದರೆ ಜೀವರಕ್ಷಕದ ಸಹಾಯದಿಂದ ಬದುಕಿಸದಿರಿ ಎಂದು ಲಿವಿಂಗ್ ವಿಲ್ (ಮರಣ ಇಚ್ಚೆಯ ಉಯಿಲು) ಬರೆಯಲು ಅವಕಾಶ ನೀಡಿ ಸುಪ್ರೀಂಕೋರ್ಟ್ 2018ರಲ್ಲಿ ಐತಿಹಾಸಿಕ ತೀರ್ಪು ನೀಡಿತ್ತು.

ಅದರಂತೆ, ಮಾರಣಾಂತಿಕ ರೋಗದಿಂದ ಬಳಲುತ್ತಿರುವ ವ್ಯಕ್ತಿಗೆ ಅಳವಡಿಸಿರುವ ಜೀವ ರಕ್ಷಕ ಸಾಧನ ತೆಗೆಯುವುದಕ್ಕೆ ಪ್ರಥಮ ದರ್ಜೆಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್ಸಿ) ಅನುಮತಿಯನ್ನು ಈ ಮೊದಲು ಕಡ್ಡಾಯಗೊಳಿಸಲಾಗಿತ್ತು. ಆದರೆ, ಈ ಆದೇಶವನ್ನು 2023ರಲ್ಲಿ ಮಾರ್ಪಡಿಸಿದ್ದ ಸುಪ್ರೀಂಕೋರ್ಟ್ ಮಾರ್ಗಸೂಚಿಯನ್ನು ಸರಳೀಕರಿಸಿತ್ತು. ಸುಧಾರಿತ ವೈದ್ಯಕೀಯ ನಿರ್ದೇಶನಗಳನ್ವಯ ಮುಂದೆ ಮರಣ ಇಚ್ಛೆಯ ಉಯಿಲು ಬರೆಯುವ ವ್ಯಕ್ತಿಯು ಇಬ್ಬರು ಸಾಕ್ಷಿಗಳ ಸಮ್ಮುಖದಲ್ಲಿ ದಾಖಲೆಗಳಿಗೆ ಸಹಿ ಹಾಕಬೇಕು. ಅದನ್ನು ನೋಟರಿ ಅಥವಾ ಗೆಜೆಟೆಡ್ ಅಧಿಕಾರಿ ದೃಢೀಕರಿಸಬೇಕು ಎಂದು ಹೇಳಲಾಗಿತ್ತು. ಈ ಸುಧಾರಿತ ವೈದ್ಯಕೀಯ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಸುಧಾರಿತ ವೈದ್ಯಕೀಯ ನಿರ್ದೇಶನಗಳನ್ನು ಕರ್ನಾಟಕದಲ್ಲಿ ಜಾರಿಗೊಳಿಸಿರುವ ಸಂಬಂಧ ಮಾಹಿತಿ ಹಕ್ಕು ಕಾಯ್ದೆಯಡಿ ಆರೋಗ್ಯ ಇಲಾಖೆಗೆ ಮಾಹಿತಿ ಕೇಳಲಾಗಿತ್ತು. ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನು ಓದಿ:ರಾಜ ಪಾರಂಪರೆಯ ಪ್ರತೀಕ ದಸರಾ ಕುಸ್ತಿ ಹೇಗೆ ನಡೆಯುತ್ತೆ ಗೊತ್ತಾ?: ಇಲ್ಲಿವೆ ಕುತೂಹಲಕಾರಿ ಮಾಹಿತಿಗಳು - Dasara wrestling

ETV Bharat Logo

Copyright © 2024 Ushodaya Enterprises Pvt. Ltd., All Rights Reserved.