ETV Bharat / state

ಬೈಕ್ ಟ್ಯಾಕ್ಸಿಗಳಿಗೆ ಅಡ್ಡಿ: ಸೂಕ್ತ ಕಾನೂನು ಕ್ರಮಕ್ಕೆ ಹೈಕೋರ್ಟ್ ಸೂಚನೆ - Bike Taxi Services - BIKE TAXI SERVICES

ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳಬೇಕು ಮತ್ತು ಚಾಲಕರಿಗೆ ತಡೆಯೊಡ್ಡಲು ಯತ್ನಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

High Court
ಹೈಕೋರ್ಟ್
author img

By ETV Bharat Karnataka Team

Published : Apr 25, 2024, 9:15 PM IST

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಗೃಹ ಇಲಾಖೆಗೆ ನಿರ್ದೇಶನ ನೀಡಿದೆ. ಬೆಂಗಳೂರಿನ ಮಡಿವಾಳದ ಎ.ಶ್ರೀಕಾಂತ್ ರೆಡ್ಡಿ, ಬೈಕ್ ಟ್ಯಾಕ್ಸಿ ವೆಲ್​ಫೇರ್ ಅಸೋಸಿಯೇಷನ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅರ್ಜಿದಾರರಿಗೆ ಯಾರಾದರೂ ಕಾನೂನುಬಾಹಿರವಾಗಿ ತಡೆಯೊಡ್ಡಲು ಯತ್ನಿಸಿದರೆ, ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದೂ ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಹೈಕೋರ್ಟ್​ ಇತ್ಯರ್ಥ ಪಡಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರ ಕೆ.ಎನ್.ಫಣೀಂದ್ರ, ಬೈಕ್ ಸಿಟಿ ಅಗ್ರಿಗೇಟರ್ಸ್ ಈ ಹಿಂದೆ ಇದೇ ನ್ಯಾಯಾಲಯದ ಮೊರೆ ಹೋಗಿದ್ದಾಗ, ನ್ಯಾಯಾಲಯ ಮುಂದಿನ ಆದೇಶದವರೆಗೆ ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಜರುಗಿಸುವುದು ಬೇಡ ಎಂದು ಮಧ್ಯಂತರ ಆದೇಶ ನೀಡಿದೆ. ಆದರೂ, ಸಹ ಪೊಲೀಸರು ಬೈಕ್ ಟ್ಯಾಕ್ಸಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುತ್ತಿಲ್ಲ ಎಂದು ನ್ಯಾಯ ಪೀಠಕ್ಕೆ ವಿವರಿಸಿದರು.

ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ಮತ್ತು ಅವರ ಸೇವೆಗೆ ತಡೆಯೊಡ್ಡುವುದು ಮುಂದುವರಿದಿದೆ. ಆ ಕುರಿತು ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಹಾಗಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿ ಮಾಡುವವರ ವಿರುದ್ಧ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಕೋರಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯ ಪೀಠವು ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಇದನ್ನೂ ಓದಿ: ರ‍್ಯಾಪಿಡೋ ಕ್ಯಾಪ್ಟನ್​ಗೆ ಬೆದರಿಸಿ ಹಣ ಸುಲಿಗೆ: ಬೆಂಗಳೂರಲ್ಲಿ ಇಬ್ಬರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.