ETV Bharat / state

ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌ - Congress MLA Rizwan Arshad - CONGRESS MLA RIZWAN ARSHAD

ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

karnataka-high-court-dismissed-the-petition-challenging-the-election-of-congress-mla-rizwan-arshad
ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌
author img

By ETV Bharat Karnataka Team

Published : Mar 26, 2024, 3:15 PM IST

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಸಂಪಂಗಿ ರಾಮನಗರದ ನಿವಾಸಿ ಬಿ ಲಕ್ಷ್ಮಿದೇವಿ ಎಂಬುವರು ಸಲ್ಲಿಸಿದ್ದ ಅರ್ಜಿಯ ಸಂಬಂಧ ಸುದೀರ್ಘ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಇಂದು ಪ್ರಕಟಿಸಿತು. ಈ ಕುರಿತಂತೆ ಆದೇಶದ ವಿಸ್ತೃತ ಪ್ರತಿ ಲಭ್ಯವಾಗಬೇಕಿದೆ.

ಏನಿದು ಪ್ರಕರಣ: ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ರಿಜ್ವಾನ್‌ ಅರ್ಷದ್‌ ಅವರು ಅಕ್ರಮ ಎಸಗಿದ್ದು, ಕಾಯ್ದೆಯಡಿ ಆಯ್ಕೆಯಾಗಲು ಅವರು ಅರ್ಹರಲ್ಲ. ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕಾಂಗ್ರೆಸ್ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳು ಆಮಿಷ ಹಾಗೂ ಆಶ್ವಾಸನೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ. ಆ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಅಲ್ಲದೆ, ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮವಾಗಿದೆ. ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿರುವುದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಸಹ ಅಪರಾಧವಾಗಿದೆ. ಹೀಗಾಗಿ, ಶಿವಾಜಿನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್​ ಅವರ ಆಯ್ಕೆ ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಬಾಲ ನ್ಯಾಯ ಮಂಡಳಿಗೆ ಸಿಬ್ಬಂದಿ ಒದಗಿಸಲು 4 ವಾರಗಳ ಗಡುವು ನೀಡಿದ ಹೈಕೋರ್ಟ್ - Juvenile Justice Act

ETV Bharat Logo

Copyright © 2025 Ushodaya Enterprises Pvt. Ltd., All Rights Reserved.