ETV Bharat / state

'ಅಪಘಾತ ನಡೆದಾಗ ವಾಹನಕ್ಕೆ ಪರವಾನಗಿ ಇಲ್ಲದಿದ್ದರೂ ವಿಮಾ ಕಂಪನಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು' - HIGH COURT

ಅಪಘಾತ ಸಂಭವಿಸಿದಾಗ ವಾಹನಕ್ಕೆ ಪರವಾನಗಿ, ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಕಂಪನಿ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಇಂದು​ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Oct 8, 2024, 3:38 PM IST

ಬೆಂಗಳೂರು: ಅಪಘಾತಕ್ಕೆ ಕಾರಣವಾದ ವಾಹನಕ್ಕೆ ಘಟನೆ ನಡೆದ ಸಂದರ್ಭದಲ್ಲಿ ರಹದಾರಿ ಪರವಾನಿಗೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ಘಟನೆಯಿಂದ ತೊಂದರೆಗೀಡಾದವರಿಗೆ ವಿಮಾ ಕಂಪೆನಿ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಪರಿಹಾರದ ಮೊತ್ತವನ್ನು ವಾಹನ ಮಾಲೀಕರಿಂದ ವಿಮಾ ಕಂಪನಿ ವಸೂಲಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಅಪಘಾತಕ್ಕೊಳಗಾದ ವಾಹನಕ್ಕೆ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ಪರಿಹಾರಕ್ಕೆ ಸೂಚಿಸಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ಶ್ರೀರಾಮ ಜನರಲ್ ಇನ್ಶೂರೆನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರು ಈ ಆದೇಶ ಪ್ರಕಟಿಸಿದರು.

ವಾಹನ ಮಾಲೀಕರು ತನ್ನ ವಾಹನವನ್ನು ರಸ್ತೆಗಿಳಿಸುವ ವೇಳೆ ಪರವಾನಗಿ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಹೊಂದಿಲ್ಲ. ಇದು ವಾಹನ ಮಾಲೀಕರ ಮೂಲಭೂತ ಉಲ್ಲಂಘನೆ. ಈ ಪ್ರಕ್ರಿಯೆಯಲ್ಲಿ ವಾಹನ ಮಾಲೀಕರ ತಪ್ಪೂ ಇದೆ. ಹೀಗಾಗಿ ವಿಮಾ ಕಂಪನಿಗಳ ಸಂಪೂರ್ಣ ಜವಾಬ್ದಾರಿಯಿಂದ ವಿನಾಯಿತಿ ನೀಡಬೇಕು. ಮಾಲೀಕರೇ ಪರಿಹಾರ ಪಾವತಿ ಮಾಡಬೇಕು ಎಂಬ ವಿಮಾ ಕಂಪನಿಯ ವಾದವನ್ನು ಕೋರ್ಟ್ ತಿರಸ್ಕರಿಸಿತು.

ಅಲ್ಲದೆ, ಮೋಟಾರು ವಾಹನ ಕಾಯಿದೆ ಮತ್ತು ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಫಿಟ್ನೆಸ್ ಸರ್ಟಿಫಿಕೇಟ್ ಮತ್ತು ಅಗತ್ಯ ಪರವಾನಗಿ ಇಲ್ಲದಿರುವುದು, ಪ್ರಮಾಣ ಪತ್ರ ಮತ್ತು ನೋಂದಣಿ ನವೀಕರಣ ಆರೋಪ ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳ ಅಡಿಯಲ್ಲಿ ವಾಹನದ ಚಾಲಕನ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿದೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಪೂರ್ಣಪೀಠ ಪ್ರಕರಣವನ್ನು ಪರಿಗಣಿಸಿದೆ. ಸ್ವರಣ್ ಸಿಂಗ್ ಮತ್ತು ಯಲ್ಲವ್ವ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿರುವಂತೆ ಇದೊಂದು ಮೂಲಭೂತವಾದ ಉಲ್ಲಂಘನೆಯಾಗಿದ್ದರೂ ವಿಮಾ ಕಂಪನಿ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದಕ್ಕೆ ಅವಕಾಶವಿರುವುದಿಲ್ಲ. ಹೀಗಾಗಿ ವಿಮಾ ಕಂಪನಿಯ ವಾದ ಪರಿಗಣಿಸಲಾಗುವುದಿಲ್ಲ. ಅಲ್ಲದೆ, ವಿಮಾ ಕಂಪನಿಯು ಪರಿಹಾರವನ್ನು ಪಾವತಿ ಮಾಡಬೇಕು ಮತ್ತು ವಾಹನ ಮಾಲೀಕರಿಂದ ವಸೂಲಿ ಮಾಡಿಕೊಳ್ಳಬೇಕು ಎಂದು ಪೀಠ ಹೇಳಿತು.

ಹೀಗಾಗಿ ವಾಹನ ಮಾಲೀಕರು ಪರಿಹಾರ ಪಾವತಿ ಮಾಡಬೇಕು. ಹೀಗಾಗಿ ಮುಂದಿನ 8 ವಾರಗಳಲ್ಲಿ ಪರಿಹಾರ ಮೊತ್ತವನ್ನು ಸಂತ್ರಸ್ತರ ಖಾತೆಗೆ ಪಾವತಿಸಬೇಕು. ಬಳಿಕ ವಾಹನದ ಮಾಲೀಕರಿಂದ ವಸೂಲಿ ಮಾಡಬೇಕು ಎಂದು ನಿರ್ದೇಶಿಸಿತು. ಜೊತೆಗೆ, 2013ರ ಜೂನ್ 17ರಂದು ಘಟನೆ ನಡೆದಿದೆ. ಘಟನೆಯಿಂದಾಗಿ ಬೈಸಿಕಲ್‌ನಲ್ಲಿ ಬರುತ್ತಿದ್ದ ವ್ಯಕ್ತಿ ಪ್ರಜ್ಞಾಹೀನನಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ವಿವಿಧ ರೀತಿಯ ಚಿಕಿತ್ಸೆ ಪಡೆದು ಸುಮಾರು ಒಂದು ತಿಂಗಳ ಬಳಿಕ ಮೃತಪಟ್ಟಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರ ಪ್ರಕಾರ ಘಟನೆ ನಡೆದ ದಿನದಿಂದಲೂ ಸಾಯುವವರೆಗೂ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು.

ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ವರದಿಯಲ್ಲಿ ಮಾತ್ರ ಹೃದಯ ಸ್ತಂಭನದಿಂದ ಮೃತರಾಗಿದ್ದಾರೆ ಎಂದು ಹೇಳಲಾಗಿದೆ. ವೈದ್ಯಕೀಯ ದಾಖಲೆಗಳ ಪ್ರಕಾರ ತಲೆಗೆ ತೀವ್ರತರ ಪೆಟ್ಟಾದ ಹಿನ್ನೆಲೆಯಲ್ಲಿ ಸಾವನ್ನಪ್ಪಿರುವುದು ಗೊತ್ತಾಗಿದೆ. ಹೀಗಾಗಿ ಮೃತ ವ್ಯಕ್ತಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂಬ ವಾದವನ್ನು ಒಪ್ಪಲಾಗದು ಎಂದು ಹೇಳಿದೆ.

ಎರಡೂ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಪೀಠ, ಪರಿಹಾರವನ್ನು 13.44 ಲಕ್ಷ ರೂ.ಗಳನ್ನು 13.88 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿದ್ದು, ಶೇ.6ರಷ್ಟು ವಾರ್ಷಿಕ ಬಡ್ಡಿ ಸೇರಿಸಿ ಪಾವತಿ ಮಾಡಲು ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಹೊಸಕೋಟೆ- ಚಿಕ್ಕತಿರುಪತಿ ಮಾರ್ಗದಲ್ಲಿ ಬೈಕ್​ನಲ್ಲಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನಂದೀಶಪ್ಪ ಎಂಬವರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು. ಇದರಿಂದ ತಲೆಗೆ ತೀವ್ರತರದ ಪೆಟ್ಟಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ 13.88 ಲಕ್ಷ ರೂ.ಗಳ ಪರಿಹಾರ ನೀಡಲು ಆದೇಶಿಸಿತ್ತು.

ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮತ್ತು ನ್ಯಾಯಾಧಿಕರಣದ ಆದೇಶ ರದ್ದು ಕೋರಿ ವಿಮಾ ಕಂಪನಿಗಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

ಇದನ್ನೂ ಓದಿ: ನಾಲ್ಕು ಹೆಚ್ಚುವರಿ ರಾಷ್ಟ್ರೀಯ ದಿನಗಳ ಆಚರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.